ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ಅಮರಮಣಿImage Credit source: Indian Express
Follow us
ನಯನಾ ರಾಜೀವ್
|

Updated on: Aug 25, 2023 | 9:22 AM

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ಸದ್ಯ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ 20 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನೂ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯಪಾಲರ ಅನುಮತಿ ಮೇರೆಗೆ ಕಾರಾಗೃಹ ಆಡಳಿತ ಮತ್ತು ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ.

ಮಾಜಿ ಕ್ಯಾಬಿನೆಟ್ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನ ಲಕ್ಷ್ಮೀಪುರ ವಿಧಾನಸಭೆಯಿಂದ ಶಾಸಕರಾಗಿದ್ದ ಕವಯಿತ್ರಿ ಮಧುಮಿತಾ ಶುಕ್ಲಾ ಅವರ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿತ್ತು.

ಮತ್ತಷ್ಟು ಓದಿ: ಮಾಜಿ ಸಂಸದ ಆನಂದ್ ಮೋಹನ್‌ ಜೈಲಿನಿಂದ ಬಿಡುಗಡೆ ಕುರಿತ ದಾಖಲೆಯನ್ನು ನೀಡುವಂತೆ ಬಿಹಾರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನಂತರ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತು. ಅಮರಮಣಿ ತ್ರಿಪಾಠಿ ಅವರ ಉತ್ತಮ ನಡವಳಿಕೆಯಿಂದಾಗಿ ಅವರ ಉಳಿದ ಶಿಕ್ಷೆಯನ್ನು ಕ್ಷಮಿಸಲಾಗಿದೆ. ಮೇ 9, 2003 ರಂದು, ಖ್ಯಾತ ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಲಕ್ನೋದ ನಿಶಾತ್‌ಗಂಜ್‌ನ ಪೇಪರ್ ಮಿಲ್ ಕಾಲೋನಿಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

ಅಂದಿನ ಮುಖ್ಯಮಂತ್ರಿ ಮಾಯಾವತಿ ಈ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು. ತನಿಖೆಯ ಸಮಯದಲ್ಲಿ, ಅಮರಮಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಯಿತು, ನಂತರ ಪ್ರಕರಣವನ್ನು ಡೆಹ್ರಾಡೂನ್‌ನ ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ತನಿಖಾ ಸಂಸ್ಥೆಯು ಅಮರಮಣಿ ಮತ್ತು ಅವರ ಪತ್ನಿ ಮಧುಮಣಿಯನ್ನು ದೋಷಿ ಎಂದು ತೀರ್ಪು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು