ಲಕ್ನೋ: ಐಟಿ ಕಂಪನಿಯೊಳಗೆ ಮನಬಂದಂತೆ ಗುಂಡು ಹಾರಿಸಿದ ಮಾಜಿ ಸಂಸದರ ಮೊಮ್ಮಗ
ಮಾಜಿ ಸಂಸದರ ಮೊಮ್ಮಗ ಐಟಿ ಕಂಪನಿಯೊಳಗೆ ಮನಬಂದಂತೆ ಗುಂಡು ಹಾರಿಸಿ ಪಿಸ್ತೂಲ್ನ ಹಿಂಬದಿಯಿಂದ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಐಟಿ ಕಂಪನಿಯೊಳಗೆ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ವಿವೇಕ್ ಭದೌರಿಯಾ ಎಂದು ಗುರುತಿಸಲಾಗಿದ್ದು, ಆತ ಮಾಜಿ ಸಂಸದ ಅರ್ಜುನ್ ಸಿಂಗ್ ಅವರ ಮೊಮ್ಮಗ ಎಂದು ಹೇಳಲಾಗಿದೆ. ವಿವೇಕ್ನಲ್ಲಿ ಪೊಲೀಸರು ಕೂಡಲೇ ಬಂಧಿಸಿದ್ದಾರೆ.

ಲಕ್ನೋ, ಮಾರ್ಚ್ 07: ಮಾಜಿ ಸಂಸದರ ಮೊಮ್ಮಗ ಐಟಿ ಕಂಪನಿಯೊಳಗೆ ಮನಬಂದಂತೆ ಗುಂಡು ಹಾರಿಸಿ ಪಿಸ್ತೂಲ್ನ ಹಿಂಬದಿಯಿಂದ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಐಟಿ ಕಂಪನಿಯೊಳಗೆ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ವಿವೇಕ್ ಭದೌರಿಯಾ ಎಂದು ಗುರುತಿಸಲಾಗಿದ್ದು, ಆತ ಮಾಜಿ ಸಂಸದ ಅರ್ಜುನ್ ಸಿಂಗ್ ಅವರ ಮೊಮ್ಮಗ ಎಂದು ಹೇಳಲಾಗಿದೆ. ವಿವೇಕ್ನಲ್ಲಿ ಪೊಲೀಸರು ಕೂಡಲೇ ಬಂಧಿಸಿದ್ದಾರೆ.
ಕಂಪನಿಯ ಕಚೇರಿಯ ಬಳಿ ಭದೌರಿಯಾ ಇದ್ದಕ್ಕಿದ್ದಂತೆ ಬಂದು ಗುಂಡು ಹಾರಿಸಿದ್ದ, ಆರೋಪಿಯು ಕಚೇರಿ ನಿರ್ವಾಹಕ ಅನುಜ್ ಕುಮಾರ್ ವೈಶ್ಯ ಮತ್ತು ಅಮಿತೇಶ್ ಶ್ರೀವಾಸ್ತವ ಅವರ ಮೇಲೆ ತನ್ನ ಪಿಸ್ತೂಲಿನ ಹಿಂಭಾಗದಿಂದ ಹಲ್ಲೆ ನಡೆಸಿದ್ದಾನೆ. ಗುಂಡು ಹಾರಿಸುವ ಮೊದಲು ಅರ್ಧ ಡಜನ್ ಉದ್ಯೋಗಿಗಳಿಗೆ ದೈಹಿಕವಾಗಿ ಶಿಕ್ಷೆ ಕೊಟ್ಟಿದ್ದಾನೆ.
ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರು ಘಟನಾ ಸ್ಥಳದಿಂದ ಎರಡು ಬಂದೂಕುಗಳು, ಖಾಲಿ ಕಾರ್ಟ್ರಿಡ್ಜ್‌ಗಳು ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ ಮತ್ತು ಈ ವಿಷಯದ ಬಗ್ಗೆ ತನಿಖೆ ಮುಂದುವರೆದಿದೆ.
ಮತ್ತಷ್ಟು ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು
ಮತ್ತೊಂದು ಘಟನೆ
ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ವ್ಯಕ್ತಿ ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 8 ವರ್ಷದ ಬಾಲಕನ ಹಣೆಗೆ ಗುಂಡು ಹಾರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕ ವಿಪರೀತ ಚಳಿ ಎಂದು ಮನೆಯ ಹೊರಗಡೆ ಬೆಂಕಿ ಹಾಕಿಕೊಂಡು ಅದರ ಮುಂದೆ ಕುಳಿತಿದ್ದ, ಆಗ ಅದೇ ಊರಿನ ನಿತೀಶ್ ಕುಮಾರ್ ಬಾಲಕ ಬಳಿ ಬಂದು ತುಂಬಾ ಅಂಗಡಿಯಿಂದ ಸಿಗರೇಟ್ ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.
ತುಂಬಾ ಚಳಿ ಇದೆ ನನಗೆ ಹೋಗಲು ಸಾಧ್ಯವಿಲ್ಲ ಎಂದು ಬಾಲಕ ಹೇಳಿದ್ದಾನೆ, ಅದಕ್ಕೆ ಕೋಪಗೊಂಡ ನಿತೀಶ್ ಕುಮಾರ್ ಪಿಸ್ತೂಲ್ ಹೊರ ತೆಗೆದು ಹುಡುಗನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.
ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಅವರನ್ನು ಉನ್ನತ ಚಿಕಿತ್ಸೆಗಾಗಿ ಮುಂಗೇರ್ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ನಂತರ ಉನ್ನತ ವೈದ್ಯಕೀಯ ಸೌಲಭ್ಯಕ್ಕಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ