ಉತ್ತರಪ್ರದೇಶದ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು

ಉತ್ತರಪ್ರದೇಶದ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ನಿಧನ ಹೊಂದಿದ್ದಾರೆ. ಜೈಲಿನಲ್ಲಿದ್ದ ಡಾನ್‌ ಮುಖ್ತಾರ್ ಅನ್ಸಾರಿಗೆ ಹೃದಯಾಘಾತವಾಗಿತ್ತು. ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 8 ಪ್ರಕರಣಗಳಲ್ಲಿ  ಮುಖ್ತಾರ್ ಅನ್ಸಾರಿ ಶಿಕ್ಷೆ ಅನುಭವಿಸುತ್ತಿದ್ದರು.

ಉತ್ತರಪ್ರದೇಶದ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
ಮುಖ್ತಾರ್ ಅನ್ಸಾರಿ
Follow us
|

Updated on:Mar 28, 2024 | 11:02 PM

ದೆಹಲಿ, ಮಾರ್ಚ್​ 28: ಉತ್ತರಪ್ರದೇಶದ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ (Mukhtar Ansari) ಗುರುವಾರ ನಿಧನ ಹೊಂದಿದ್ದಾರೆ. ಜೈಲಿನಲ್ಲಿದ್ದ ಡಾನ್‌ ಮುಖ್ತಾರ್ ಅನ್ಸಾರಿಗೆ ಹೃದಯಾಘಾತವಾಗಿತ್ತು. ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 8 ಪ್ರಕರಣಗಳಲ್ಲಿ  ಮುಖ್ತಾರ್ ಅನ್ಸಾರಿ ಶಿಕ್ಷೆ ಅನುಭವಿಸುತ್ತಿದ್ದರು. ಮುಖ್ತಾರ್ ಅವರ ನಿಧನದ ಬಳಿಕ ಘಾಜಿಪುರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ ಇತರೆ ಸೂಕ್ಷ್ಮ ಜಿಲ್ಲೆಗಳಲ್ಲಿ  ಮುನ್ನೆಚ್ಚರಿಕೆ ಕ್ರಮಕ್ಕೆ ಆದೇಶಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ಅವರನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಮಲಬದ್ಧತೆ ಇದೆ ಎಂದು ಗುರುತಿಸಿದರು ಮತ್ತು ಚಿಕಿತ್ಸೆ ನಂತರ ಅವರನ್ನು ಅದೇ ದಿನ ಜೈಲಿಗೆ ಕಳುಹಿಸಿದ್ದರು. ಬುಧವಾರ ಜೈಲಿನಲ್ಲಿ ಅವರ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲವೂ ಸಹಜವಾಗಿತ್ತು. ಆದರೆ ಇದೀಗ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಜೈಲಿನಲ್ಲಿರುವ ಮುಖ್ತಾರ್​ ಅನ್ಸಾರಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಜೈಲಿನಲ್ಲಿ ತನ್ನನ್ನು ಕೊಲೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಆರೋಪಿಸಿದ್ದರು. ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡಲಾಗುತ್ತಿದ್ದು, ಇದರಿಂದ  ಆರೋಗ್ಯ ಹದಗೆಡುತ್ತಿದೆ ಎಂದು ಹೇಳಿದ್ದರು. ಸಂಸದ ಎಂಎಲ್ಎ ಕೋರ್ಟ್ ಕೂಡ ಈ ವಿಚಾರದಲ್ಲಿ ಜೈಲು ಆಡಳಿತದಿಂದ ವರದಿ ಕೇಳಿತ್ತು.

ಮುಖ್ತಾರ್ ಅನ್ಸಾರಿ ಅವರು ಎರಡು ಬಾರಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಸೇರಿದಂತೆ ಐದು ಬಾರಿ ಮೌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಕೊನೆಯ ಬಾರಿಗೆ 2017 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಕಪಿಲ್ ದೇವ್ ಸಿಂಗ್ ಕೊಲೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು, 5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಇದಕ್ಕೂ ಮುನ್ನ ಮಾರ್ಚ್ 13 ರಂದು, 1990 ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಅನ್ಸಾರಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದು ಎಂಟನೇ ಪ್ರಕರಣವಾಗಿದ್ದು, ಐದು ಬಾರಿ ಶಾಸಕರಾಗಿದ್ದ ನ್ಯಾಯಾಲಯದಿಂದ ದೋಷಿ ಮತ್ತು ಶಿಕ್ಷೆಗೆ ಗುರಿಯಾಗಿದ್ದಾರೆ.

ಡಿಸೆಂಬರ್ 2023 ರಲ್ಲಿ, ವಾರಣಾಸಿಯ ಸಂಸದ, ಶಾಸಕ ನ್ಯಾಯಾಲಯವು 26 ವರ್ಷದ ಕಲ್ಲಿದ್ದಲು ಉದ್ಯಮಿ ನಂದ್ ಕಿಶೋರ್ ರುಂಗ್ಟಾ ಹತ್ಯೆಯ ಸಾಕ್ಷಿ ಮಹಾವೀರ್ ಪ್ರಸಾದ್ ರುಂಗ್ಟಾಗೆ ಬೆದರಿಕೆ ಹಾಕಿದ್ದಕ್ಕಾಗಿ ಮುಕ್ತಾರ್ ಅನ್ಸಾರಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡವನ್ನು ವಿಧಿಸಿತು.

ರಾಷ್ಟ್ರೀಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:50 pm, Thu, 28 March 24

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ