ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು

ಅತ್ಯಾಚಾರಕ್ಕೊಳಗಾದ ಬಾಲಕಿಯ ಶವ ಅನುಮಾನಾಸ್ಪದವಾಗಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆ ಸಾವನ್ನಪ್ಪಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ.

ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು
ಅತ್ಯಾಚಾರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 06, 2022 | 12:36 PM

ನವದೆಹಲಿ: ಉತ್ತರ ಪ್ರದೇಶದ ನಾಗ್ಲಾ ಶಿಶಮ್ ಗ್ರಾಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮೈನ್‌ಪುರಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ. ನಾಗ್ಲಾ ಶಿಶಮ್ ಗ್ರಾಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ (Rape) ಮತ್ತು ಕೊಲೆ (Murder) ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ ಶವ ಅನುಮಾನಾಸ್ಪದವಾಗಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆ ಸಾವನ್ನಪ್ಪಿದ ಸಂದರ್ಭದಲ್ಲಿ ಆ ಬಾಲಕಿಯ ತಂದೆ ಕೆಲಸದ ನಿಮಿತ್ತ ಮೈನ್‌ಪುರಿಗೆ ಹೋಗಿದ್ದರು. ಆಕೆಯ ತಾಯಿ ಆಗ್ರಾಕ್ಕೆ ಹೋಗಿದ್ದರು. ಬಾಲಕಿಯ ಕಿರಿಯ ಸಹೋದರಿ ಕೋಚಿಂಗ್‌ನಿಂದ ಹಿಂತಿರುಗಿದಾಗ ಎಷ್ಟು ಬಾಗಿಲು ಬಡಿದರೂ ಯಾರೂ ಬಾಗಿಲು ತೆರೆಯಲಿಲ್ಲ.

ಇದನ್ನೂ ಓದಿ: Uttar Pradesh: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಆಸ್ಪತ್ರೆಗೆ ಕರೆಸಿ ಮಹಿಳೆಯನ್ನು ಅತ್ಯಾಚಾರ ಮಾಡಿದ 3 ವೈದ್ಯರು

ಇದರಿಂದ ಅನುಮಾನಗೊಂಡು ಮನೆಯ ಬಾಗಿಲಿನ ಕಿಟಕಿಯಿಂದ ಹೊರಗೆ ನೋಡಿದಳು. ಆಗ ತನ್ನ ಅಕ್ಕನ ಶವ ನೇತಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿದ್ದಾರೆ.

ಆರೋಪಿ ಪುಷ್ಪೇಂದ್ರ ನನ್ನ ಅಕ್ಕನ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಮೃತ ಬಾಲಕಿಯ ಸಹೋದರಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ