Lakhimpur Kheri violence ಲಖಿಂಪುರ್ ಖೇರಿ ಹಿಂಸಾಚಾರದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಕ

TV9 Digital Desk

| Edited By: Rashmi Kallakatta

Updated on:Oct 07, 2021 | 1:20 PM

Uttar Pradesh: ಅಲಹಾಬಾದ್ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಪದೀಪ್ ಕುಮಾರ್ ಶ್ರೀವಾಸ್ತವ ಅವರು ಲಖಿಂಪುರ್ ಖೇರಿ ಹಿಂಸಾಚಾರ ಘಟನೆಯನ್ನು ತನಿಖೆ ಮಾಡಿ ಎರಡು ತಿಂಗಳಲ್ಲಿ ವರದಿಯನ್ನು ಸಲ್ಲಿಸುತ್ತಾರೆ.

Lakhimpur Kheri violence ಲಖಿಂಪುರ್ ಖೇರಿ ಹಿಂಸಾಚಾರದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಕ
ಲಖಿಂಪುರ್ ಖೇರಿ

Follow us on

ಲಖನೌ: ಲಖಿಂಪುರ್ ಖೇರಿ (Lakhimpur Kheri) ಹಿಂಸಾಚಾರ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ (Uttar Pradesh) ಸರ್ಕಾರ ಏಕ ವ್ಯಕ್ತಿ ಆಯೋಗವನ್ನು ನೇಮಿಸಿದೆ. ಅಲಹಾಬಾದ್ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಪದೀಪ್ ಕುಮಾರ್ ಶ್ರೀವಾಸ್ತವ ಅವರು ಈ ಘಟನೆಯನ್ನು ತನಿಖೆ ಮಾಡಿ ಎರಡು ತಿಂಗಳಲ್ಲಿ ವರದಿಯನ್ನು ಸಲ್ಲಿಸುತ್ತಾರೆ. ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರ ಅಭಿಪ್ರಾಯದ ಮೇರೆಗೆ ಏಕವ್ಯಕ್ತಿ ಆಯೋಗವನ್ನು ರಚಿಸಲಾಗಿದೆ ಸಾರ್ವಜನಿಕ ಮಹತ್ವಕ್ಕಾಗಿ ತನಿಖೆ ಅಗತ್ಯವಿದೆ ಎಂದು ಅವರು ಹೇಳಿರುವುದಾಗಿ. ಅಧಿಸೂಚನೆಗೆ ಸಹಿ ಮಾಡಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಕುಮಾರ್ ಅವಸ್ಥಿ ಹೇಳಿದ್ದಾರೆ.

ಲಖಿಂಪುರ್ ಖೇರಿಯ ಟಿಕುನಿಯಾದಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ನಾಲ್ವರು ರೈತರು. ಏತನ್ಮಧ್ಯೆ, ಬುಧವಾರ ಹಿಂಸಾಚಾರದ ಕುರಿತು ಸುಪ್ರೀಂಕೋರ್ಟ್ ತನ್ನದೇ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ನಾಳೆ ಪ್ರಕರಣದ ವಿಚಾರಣೆ ನಡೆಸಲಿದೆ.

‘ಲಖಿಂಪುರ್ ಖೇರಿಯಲ್ಲಿ (ಯುಪಿ) ಜೀವಹಾನಿಗೆ ಕಾರಣವಾದ ಹಿಂಸಾಚಾರದಲ್ಲಿ’ ಎಂದು ಸುಮೊಟೊ ಪ್ರಕರಣ ದಾಖಲಾಗಿದೆ. ನಾಲ್ಕು ರೈತರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸ್ಥಳೀಯ ರೈತರು ಕಿರಿಯ ಗೃಹ ಸಚಿವ ಅಜಯ್ ಮಿಶ್ರಾ ‘ಟೆನಿ’ ಮತ್ತು ಅವರ ಪುತ್ರ ಆಶಿಶ್ ಮಿಶ್ರಾ ಕಾರಣ ಎಂದು ರೈತರು ಆರೋಪಿಸಿದ್ದಾರೆ. ಮಿಶ್ರಾ ಒಡೆತನದ ಮಹೀಂದ್ರ ಥಾರ್ ಪ್ರತಿಭಟನಾಕಾರ ನಡುವೆ ನುಗ್ಗಿ ರೈತರ ಮೇಲೆ ಹರಿದಿತ್ತು ಎಂದು ರೈತ ಸಂಘಟನೆಗಳು ಹೇಳಿವೆ.

ಸಚಿವರು ಮತ್ತು ಅವರ ಮಗ ಆರೋಪವನ್ನು ನಿರಾಕರಿಸಿದರು ಮತ್ತು ರೈತರು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ, ಇದು ಚಾಲಕನ ವಾಹನದ ನಿಯಂತ್ರಣವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ ಪ್ರತಿಭಟನಾಕಾರರು ಇಬ್ಬರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಮತ್ತು ಕಾರಿನ ಚಾಲಕರನ್ನು ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆಶಿಶ್ ಮಿಶ್ರಾ ಮತ್ತು 20 ಇತರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಆದರೆ ಆತನ ಬಂಧನಕ್ಕೆ ರೈತರು ಒತ್ತಡ ಹೇರುತ್ತಲೇ ಇದ್ದಾರೆ.

ಘಟನೆಯ ನಂತರ ವಿರೋಧ ಪಕ್ಷಗಳು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಲು ಮಾಡಲು ಆರಂಭಿಸಿದವು. ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಇತರ ಸಂಘಟನೆಗಳ ಹಲವಾರು ನಾಯಕರು ಟಿಕುನಿಯಾಕ್ಕೆ ಭೇಟಿ ನೀಡಲು ಪ್ರಯತ್ನಿಸಿದರು, ಆದರೆ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ಉಲ್ಲೇಖಿಸಿ ಉತ್ತರ ಪ್ರದೇಶ ಪೊಲೀಸರು ಅವರನ್ನು ತಡೆದರು. ಅಂತಿಮವಾಗಿ, ರಾಜ್ಯ ಸರ್ಕಾರ ಬುಧವಾರ ನಿರ್ಬಂಧಗಳನ್ನು ತೆಗೆದುಹಾಕಿತು ಮತ್ತು ಎಲ್ಲಾ ರಾಜಕಾರಣಿಗಳಿಗೆ ಗ್ರಾಮಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟಿತು.

ನಂತರ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಅವರ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, ಪಕ್ಷದ ಸಂಸದ ದೀಪೇಂದರ್ ಹೂಡಾ ಮತ್ತು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (ಯುಪಿಸಿಸಿ) ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ತಲುಪಿದರು.

ಇದನ್ನೂ ಓದಿ:Lakhimpur Kheri Violence: ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆಯ ಮತ್ತೊಂದು ವಿಡಿಯೋ ವೈರಲ್

ತಾಜಾ ಸುದ್ದಿ

Related Stories

Click on your DTH Provider to Add TV9 Kannada