AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಸರ್ಕಾರದಿಂದ ಅತೀಕ್ ಅಹ್ಮದ್​​ನ ₹ 50 ಕೋಟಿ ಮೌಲ್ಯದ ಆಸ್ತಿ ಸ್ವಾಧೀನ

ಅತೀಕ್  2.377 ಹೆಕ್ಟೇರ್ ಭೂಮಿಯನ್ನು ಅಪರಾಧ ಸಂಬಂಧಿತ ಚಟುವಟಿಕೆಗಳ ಹಣವನ್ನು ಬಳಸಿಕೊಂಡು ಹೂಬಲಾಲ್ ಎಂಬ ಮೇಸ್ತ್ರಿಯ ಹೆಸರಲ್ಲಿ ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ (ಅಪರಾಧ) ಗುಲಾಬ್ ಚಂದ್ರ ಅಗ್ರಹರಿ ಹೇಳಿದ್ದಾರೆ. ಅಗತ್ಯಬಿದ್ದರೆ ಭೂಮಿಯನ್ನು ತನ್ನ ಹೆಸರಿಗೆ ವರ್ಗಾಯಿಸುವುದಾಗಿಯೂ ಅತೀಕ್ ಹೇಳಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ. ನವೆಂಬರ್ 2023 ರಲ್ಲಿ ಪೊಲೀಸರು ಈ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಸರ್ಕಾರದಿಂದ ಅತೀಕ್ ಅಹ್ಮದ್​​ನ ₹ 50 ಕೋಟಿ ಮೌಲ್ಯದ ಆಸ್ತಿ ಸ್ವಾಧೀನ
ಅತೀಕ್ ಅಹ್ಮದ್
ರಶ್ಮಿ ಕಲ್ಲಕಟ್ಟ
|

Updated on:Jul 17, 2024 | 6:56 PM

Share

ಲಕ್ನೋ ಜುಲೈ 17: ಹತ್ಯೆಯಾದ ಗ್ಯಾಂಗ್‌ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್‌ಗೆ (Atiq Ahmed) ಸೇರಿದ ಪ್ರಯಾಗ್‌ರಾಜ್‌ನಲ್ಲಿ ಸುಮಾರು ₹ 50 ಕೋಟಿ ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ (Uttar Pradesh) ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಅತೀಕ್ ಅಹ್ಮದ್ ಈ ಆಸ್ತಿಯನ್ನು ಅಪರಾಧ ಚಟುವಟಿಕೆಗಳ ಹಣದಿಂದ ಖರೀದಿ ಮಾಡಿದ್ದ ಎಂದು ಹೇಳಲಾಗಿದೆ. ಜಿಲ್ಲಾ ಸರ್ಕಾರಿ ವಕೀಲ (ಅಪರಾಧ) ಗುಲಾಬ್ ಚಂದ್ರ ಅಗ್ರಹರಿ ಅವರು, ಅತೀಕ್  2.377 ಹೆಕ್ಟೇರ್ ಭೂಮಿಯನ್ನು ಅಪರಾಧ ಸಂಬಂಧಿತ ಚಟುವಟಿಕೆಗಳ ಹಣವನ್ನು ಬಳಸಿಕೊಂಡು ಹೂಬಲಾಲ್ ಎಂಬ ಮೇಸ್ತ್ರಿಯ ಹೆಸರಲ್ಲಿ ನೋಂದಾಯಿಸಿದ್ದಾರೆ ಎಂದು ಹೇಳಿದರು. ಅಗತ್ಯಬಿದ್ದರೆ ಭೂಮಿಯನ್ನು ತನ್ನ ಹೆಸರಿಗೆ ವರ್ಗಾಯಿಸುವುದಾಗಿಯೂ ಅತೀಕ್ ಹೇಳಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ. ನವೆಂಬರ್ 2023 ರಲ್ಲಿ ಪೊಲೀಸರು ಈ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ.

ದರೋಡೆಕೋರರ ಕಾಯಿದೆಯ ಸೆಕ್ಷನ್ 14 (1) ಅಡಿಯಲ್ಲಿ ಪೊಲೀಸ್ ಕಮಿಷನರ್ ನ್ಯಾಯಾಲಯವು ಆಸ್ತಿಯನ್ನು ವಶಪಡಿಸಿಕೊಂಡಿದೆ. ಇದಕ್ಕೆ ಪ್ರತಿಕ್ರಿಯಿಸಲು ಮೂರು ತಿಂಗಳ ಕಾಲಾವಕಾಶ ನೀಡಿದೆ ಎಂದು ಅಗ್ರಹರಿ ಹೇಳಿದ್ದಾರೆ. ಆದಾಗ್ಯೂ, ಮಾಲೀಕತ್ವದ ಯಾವುದೇ ಪುರಾವೆಯನ್ನು ಒದಗಿಸಲಾಗಿಲ್ಲ.

ನಂತರ ಪೊಲೀಸ್ ಕಮಿಷನರ್ ನ್ಯಾಯಾಲಯವು ಪ್ರಕರಣವನ್ನು ಪ್ರಯಾಗ್‌ರಾಜ್‌ನಲ್ಲಿರುವ ದರೋಡೆಕೋರ ನ್ಯಾಯಾಲಯಕ್ಕೆ ರವಾನಿಸಿತು. ಮಂಗಳವಾರ, ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಪೊಲೀಸ್ ಆಯುಕ್ತರ ಕ್ರಮವನ್ನು “ನ್ಯಾಯಯುತ” ಎಂದು ಪರಿಗಣಿಸಿದ್ದು ಆಸ್ತಿಯನ್ನು ಅಧಿಕೃತವಾಗಿ ರಾಜ್ಯ ಸರ್ಕಾರಕ್ಕೆ ವರ್ಗಾಯಿಸಲಾಯಿತು.

ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಡಿಸಿಪಿ (ನಗರ) ದೀಪಕ್ ಭುಕರ್, ನ್ಯಾಯಾಲಯದ ತೀರ್ಪಿನ ನಂತರ, “ಮೊದಲ ಬಾರಿಗೆ, ಗ್ಯಾಂಗ್ ಸ್ಟರ್ ನ್ಯಾಯಾಲಯವು (ಪ್ರಯಾಗ್ರಾಜ್) ಕಥುಲಾ ಗೌಸ್ಪುರ್ ಗ್ರಾಮದಲ್ಲಿ ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್​​​ನ ಬೇನಾಮಿ ಆಸ್ತಿಯನ್ನು ಜುಲೈ 15ರಂದು ರಾಜ್ಯ ಸರ್ಕಾರಕ್ಕೆ ವಹಿಸಲು ಆದೇಶಿಸಿದೆ. ಪ್ರಯಾಗ್‌ರಾಜ್ ಪೊಲೀಸರು ನವೆಂಬರ್ 6, 2023 ರಂದು ದರೋಡೆಕೋರರ ಕಾಯಿದೆಯಡಿಯಲ್ಲಿ ಸದರ್ ತಹಸಿಲ್‌ನ ಕಥುಲಾ ಗೌಸ್‌ಪುರ ಗ್ರಾಮದಲ್ಲಿ ಅತೀಕ್‌ನ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಯನ್ನು ಜಪ್ತಿ ಮಾಡಿದ್ದರು.

ದರೋಡೆಕೋರರ ಕಾಯಿದೆಯಡಿ ಅತೀಕ್ ವಿರುದ್ಧ ಪ್ರಕರಣದ ತನಿಖೆ ನಡೆಸಿದಾಗ, ಅವರು ಏರ್‌ಪೋರ್ಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೂಬ್ಲಾಲ್ ಹೆಸರಿನಲ್ಲಿದ್ದ ಆಸ್ತಿಯನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಹೂಬ್ಲಾಲ್ ಆಸ್ತಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಬಹಿರಂಗಪಡಿಸಿದ್ದು, ಅತೀಕ್ 2015ರಲ್ಲಿ ಜಮೀನನ್ನು ತನ್ನ ಹೆಸರಿಗೆ ನೋಂದಣಿ ಮಾಡುವಂತೆ ಒತ್ತಾಯಿಸಿದ್ದ.

ಇದನ್ನೂ ಓದಿ: ಕರ್ನಾಟಕದಂತೆ ಸ್ಥಳೀಯರಿಗೆ ಉದ್ಯೋಗದಲ್ಲಿ ಶೇ 75 ಮೀಸಲಾತಿ ಮಸೂದೆ ತಂದಿತ್ತು ಹರ್ಯಾಣ ಸರ್ಕಾರ; ಆಮೇಲೇನಾಯ್ತು?

ಉಮೇಶ್ ಪಾಲ್ ಹತ್ಯೆ ಪ್ರಕರಣ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅತೀಕ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಕಳೆದ ವರ್ಷ ಏಪ್ರಿಲ್ 15 ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Wed, 17 July 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!