Uttar Pradesh: ಕಾರು-ಲಾರಿ ಅಪಘಾತ: ಕೆಲವೇ ಗಂಟೆಗಳಲ್ಲಿ ಮದುವೆಯಾಗಬೇಕಿದ್ದ ವರ ಸೇರಿ 4 ಮಂದಿ ಸಾವು

ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರಣ ಸಾವನ್ನಪ್ಪಿದ್ದಾನೆ, ಮದುವೆ ಮನೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

Uttar Pradesh: ಕಾರು-ಲಾರಿ ಅಪಘಾತ: ಕೆಲವೇ ಗಂಟೆಗಳಲ್ಲಿ ಮದುವೆಯಾಗಬೇಕಿದ್ದ ವರ ಸೇರಿ 4 ಮಂದಿ ಸಾವು
ಅಪಘಾತImage Credit source: India Today
Follow us
ನಯನಾ ರಾಜೀವ್
|

Updated on: May 12, 2024 | 8:35 AM

ಉತ್ತರ ಪ್ರದೇಶ(Uttar Pradesh)ದ ಝಾನ್ಸಿಯಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಮೃತ ಆಕಾಶ್​ ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರನಾಗಿದ್ದು ಮದುವೆ ಸ್ಥಳಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ವಧುವಿನ ಮನೆಯಿಂದ 10 ಕಿಲೋಮೀಟರ್ ದೂರದಲ್ಲಿ ಮದುವೆ ಮೆರವಣಿಗೆ ಛಾಪ್ರಾ ಕಡೆಗೆ ಹೋಗುತ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಸಂಭವಿಸಿದ ಕೂಡಲೇ ಕಾರಿನ ಸಿಎನ್‌ಜಿ ಟ್ಯಾಂಕ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಕಾರಿನಲ್ಲಿ ಸಿಲುಕಿದ್ದ ಆಕಾಶ್ ಅಹಿರ್ವಾರ್ (25), ಅವರ ಸಹೋದರ ಆಶಿಶ್ (20), 7 ವರ್ಷದ ಸೋದರಳಿಯ ಮತ್ತು ಚಾಲಕ ಜೈಕರನ್ ಸುಟ್ಟು ಕರಕಲಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರು. ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿರುವ ಟ್ರಕ್ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜ್ಯದ ವಿವಿಧೆಡೆ ರಸ್ತೆ ಅಪಘಾತ: 6 ಜನರ ಸಾವು

ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ ಆಂಬ್ಯುಲೆನ್ಸ್ ಡ್ರೈವರ್(Ambulance driver)ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ(Accident)ವಾದ ಘಟನೆ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಈ ವೇಳೆ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಬಚಾವ್ ಆಗಿದ್ದಾರೆ. ಮಾರ್ಕೆಟ್​ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ವೇಗವಾಗಿ ಬರುತ್ತಿದ್ದ. ಈ ಸಂದರ್ಭದಲ್ಲಿ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.

ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರು ಇನ್ನು ಕಾರು ಡಿಕ್ಕಿಯಿಂದ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾಗಿದೆ. ಈ ವೇಳೆ ಟೆಂಕ್ಷನ್​ನಲ್ಲಿ ಬ್ರೇಕ್ ತುಳಿಯದೆ ಎಕ್ಸಲೇಟರ್ ತುಳಿದು ಮತ್ತೆ ಅವಾಂತರವಾಗಿದೆ. ಬಳಿಕ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ