Uttar Pradesh: ಕಾರು-ಲಾರಿ ಅಪಘಾತ: ಕೆಲವೇ ಗಂಟೆಗಳಲ್ಲಿ ಮದುವೆಯಾಗಬೇಕಿದ್ದ ವರ ಸೇರಿ 4 ಮಂದಿ ಸಾವು

ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರಣ ಸಾವನ್ನಪ್ಪಿದ್ದಾನೆ, ಮದುವೆ ಮನೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

Uttar Pradesh: ಕಾರು-ಲಾರಿ ಅಪಘಾತ: ಕೆಲವೇ ಗಂಟೆಗಳಲ್ಲಿ ಮದುವೆಯಾಗಬೇಕಿದ್ದ ವರ ಸೇರಿ 4 ಮಂದಿ ಸಾವು
ಅಪಘಾತ
Image Credit source: India Today

Updated on: May 12, 2024 | 8:35 AM

ಉತ್ತರ ಪ್ರದೇಶ(Uttar Pradesh)ದ ಝಾನ್ಸಿಯಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಮೃತ ಆಕಾಶ್​ ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರನಾಗಿದ್ದು ಮದುವೆ ಸ್ಥಳಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ವಧುವಿನ ಮನೆಯಿಂದ 10 ಕಿಲೋಮೀಟರ್ ದೂರದಲ್ಲಿ ಮದುವೆ ಮೆರವಣಿಗೆ ಛಾಪ್ರಾ ಕಡೆಗೆ ಹೋಗುತ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಸಂಭವಿಸಿದ ಕೂಡಲೇ ಕಾರಿನ ಸಿಎನ್‌ಜಿ ಟ್ಯಾಂಕ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಕಾರಿನಲ್ಲಿ ಸಿಲುಕಿದ್ದ ಆಕಾಶ್ ಅಹಿರ್ವಾರ್ (25), ಅವರ ಸಹೋದರ ಆಶಿಶ್ (20), 7 ವರ್ಷದ ಸೋದರಳಿಯ ಮತ್ತು ಚಾಲಕ ಜೈಕರನ್ ಸುಟ್ಟು ಕರಕಲಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರು. ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿರುವ ಟ್ರಕ್ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜ್ಯದ ವಿವಿಧೆಡೆ ರಸ್ತೆ ಅಪಘಾತ: 6 ಜನರ ಸಾವು

ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ
ಆಂಬ್ಯುಲೆನ್ಸ್ ಡ್ರೈವರ್(Ambulance driver)ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ(Accident)ವಾದ ಘಟನೆ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಈ ವೇಳೆ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಬಚಾವ್ ಆಗಿದ್ದಾರೆ. ಮಾರ್ಕೆಟ್​ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ವೇಗವಾಗಿ ಬರುತ್ತಿದ್ದ. ಈ ಸಂದರ್ಭದಲ್ಲಿ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.

ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರು
ಇನ್ನು ಕಾರು ಡಿಕ್ಕಿಯಿಂದ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾಗಿದೆ. ಈ ವೇಳೆ ಟೆಂಕ್ಷನ್​ನಲ್ಲಿ ಬ್ರೇಕ್ ತುಳಿಯದೆ ಎಕ್ಸಲೇಟರ್ ತುಳಿದು ಮತ್ತೆ ಅವಾಂತರವಾಗಿದೆ. ಬಳಿಕ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us