ಉತ್ತರ ಪ್ರದೇಶ: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಹೊರಟಿದ್ದ ತಂದೆ ರಸ್ತೆ ಅಪಘಾತದಲ್ಲಿ ಸಾವು

ಮಗನ ಸಾವಿನ ಸುದ್ದಿ ಕೇಳಿ ಮನೆಯತ್ತ ಹೊರಟಿದ್ದ ತಂದೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿಸಿ ಮಗ ಸಾವನ್ನಪ್ಪಿದ್ದ ಈ ಸುದ್ದಿ ಕೇಳಿ ತಂದೆ ಬೈಕಕ್​ನಲ್ಲಿ ಮನೆಗೆ ಹೊರಟಿದ್ದರು, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿತ್ತು. ಹತ್ತಿರದ ಆಸ್ಪತ್ರೆಗೆ ಕೂಡಲೇ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

ಉತ್ತರ ಪ್ರದೇಶ: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಹೊರಟಿದ್ದ ತಂದೆ ರಸ್ತೆ ಅಪಘಾತದಲ್ಲಿ ಸಾವು
ಸಾವು
Image Credit source: People matters

Updated on: Jun 24, 2025 | 8:03 AM

ಉನ್ನಾವೋ, ಜೂನ್ 24: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಓಡೋಡಿ ಬರುತ್ತಿದ್ದಾಗ ರಸ್ತೆ ಅಪಘಾತ(Road Accident)ದಲ್ಲಿ ತಂದೆಯೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿಸಿ ಮಗ ಸಾವನ್ನಪ್ಪಿದ್ದ ಈ ಸುದ್ದಿ ಕೇಳಿ ತಂದೆ ಬೈಕಕ್​ನಲ್ಲಿ ಮನೆಗೆ ಹೊರಟಿದ್ದರು, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿತ್ತು. ಹತ್ತಿರದ ಆಸ್ಪತ್ರೆಗೆ ಕೂಡಲೇ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೂರು ವರ್ಷದ ಆಯನ್ಶ್ ಜೈಸ್ವಾಲ್ ಮನೆಯಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದ. ಕುಟುಂಬ ಸದಸ್ಯರು ಆತನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದ. ಸುದ್ದಿ ಕೇಳಿದ ತಕ್ಷಣ ತಂದೆ ವಿಷ್ಣು ಕುಮಾರ್ ಅಳುತ್ತಲೇ ಬೈಕ್ ಹತ್ತಿ ಮನೆಯ ಕಡೆಗೆ ಹೊರಟಿದ್ದರು, ದಾರಿ ಮಧ್ಯೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಾಣ ಬಿಟ್ಟಿದ್ದಾರೆ.

ಈ ಎರಡು ಸಾವುಗಳು ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು, ಗ್ರಾಮಸ್ಥರನ್ನು ದಿಗ್ಭ್ರಮೆಗೊಳಿಸಿವೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ ಮತ್ತು ಅಪಘಾತ ಮಾಡಿದ ಕಾರು ಮತ್ತು ಅದರ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.

ಮತ್ತಷ್ಟು ಓದಿ: West Bengal: ಪುರುಲಿಯಾದಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ, 9 ಮಂದಿ ಸಾವು

ಮಗನ ಸಾವಿನ ದುಃಖವನ್ನು ತಡೆದುಕೊಳ್ಳಲು ಸಾಧ್ಯವಾಗದ ತಾಯಿ ಈಗ ಗಂಡನನ್ನು ಕಳೆದಕೊಂಡ ದುಃಖವನ್ನು ಕೂಡ ತಡೆದುಕೊಳ್ಳಬೇಕಿದೆ. ಬದುಕಿನಲ್ಲಿ ಒಬ್ಬಳೇ ಹೋರಾಡಬೇಕಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us