AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್
IV DripImage Credit source: NDTV
TV9 Web
| Updated By: ನಯನಾ ರಾಜೀವ್|

Updated on:Oct 26, 2022 | 10:54 AM

Share

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ. ಇದೀಗ ಆಸ್ಪತ್ರೆ ಕಟ್ಟಡವು ಅಕ್ರಮ ಎಂದು ತಿಳಿದುಬಂದಿದ್ದು, ತೆರವಿಗೆ ನೋಟಿಸ್ ನೀಡಲಾಗಿದೆ.

ಪ್ರಯಾಗ್​ರಾಜ್​ನಲ್ಲಿರುವ ಗ್ಲೋಬಲ್ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್​ಗೆ ಡೆಮಾಲಿಷನ್ ನೋಟಿಸ್ ಜಾರಿಗೊಳಿಸಲಾಗಿದೆ.

ಅನುಮತಿ ಪಡೆಯದೇ ಆಸ್ಪತ್ರೆ ನಿರ್ಮಿಸಲಾಗಿದ್ದು, ಶುಕ್ರವಾರದೊಳಗೆ ಆಸ್ಪತ್ರೆಯನ್ನು ತೆರವುಗೊಳಿಸಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಅಧಿಕಾರಿಗಳ ಲೋಪ ಸಾಬೀತಾದ ಬಳಿಕ ಕಳೆದ ವಾರ ಆಸ್ಪತ್ರೆಯನ್ನು ಮುಚ್ಚಲಾಗಿತ್ತು.

ಈ ಬಗ್ಗೆ ಹಿಂದಿನ ನೋಟಿಸ್​ಗೆ ಅಧಿಕಾರಿಗಳು ಉತ್ತರ ನೀಡಿರಲಿಲ್ಲ, ಈ ವರ್ಷದ ಆರಂಭದಲ್ಲಿ ಕಟ್ಟಡವನ್ನು ನೆಲಸಮ ಮಾಡಲು ಆದೇಶ ನೀಡಲಾಗಿದೆ.

ವೈದ್ಯರು ರಕ್ತದ ಪ್ಲಾಸ್ಮಾ ಅಗತ್ಯವಿರುವ ರೋಗಿಗಳಿಗೆ ನೀಡುವ ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಡೆಂಗ್ಯೂ ರೋಗಿಗೆ ನೀಡಿದ್ದ ರಕ್ತದ ಪ್ಯಾಕ್ ಅನ್ನು ಹಿಡಿದುಕೊಂಡಿದ್ದು, ಅದನ್ನು ಹಿಂತಿರುಗಿಸಿ ತೋರಿಸಿದಾಗ ಅದರಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ಇರುವುದನ್ನು ನೀವು ಕಾಣಬಹುದಾಗಿದೆ.

Vedank Singh ಎಂಬುವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಪ್ರಯಾಗ್‍ರಾಜ್‍ನಲ್ಲಿ ಮಾನವೀಯತೆಯೇ ತಲೆತಗ್ಗಿಸುವ ಘಟನೆ ನಡೆದಿದೆ.

ಝಲ್ವಾದ ಗ್ಲೋಬಲ್ ಆಸ್ಪತ್ರೆಯು ಡೆಂಗ್ಯೂ ರೋಗಿ ಪ್ರದೀಪ್ ಪಾಂಡೆಗೆ ಪ್ಲೇಟ್‌ಲೆಟ್ ಬದಲಿಗೆ ಮೊಸಂಬಿ ಜ್ಯೂಸ್ ನೀಡಿದೆ ಎಂದು ಕುಟುಂಬವೊಂದು ಆರೋಪಿಸಿತ್ತು. ರೋಗಿಯು ಸಾವನ್ನಪ್ಪಿದ್ದಾನೆ. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 26 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!