ಉತ್ತರ ಪ್ರದೇಶ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿ ಶಿಕ್ಷಕರು ಅಂಕವನ್ನು ನೀಡಿದ್ದಾರೆ

ಉತ್ತರ ಪ್ರದೇಶ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು
Follow us
|

Updated on:Apr 27, 2024 | 9:46 AM

ಲಕ್ನೋ, ಏ.27: ಉತ್ತರ ಪ್ರದೇಶದ (Uttar Pradesh) ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು  ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಹಾಡುಗಳು, ಸಂಗೀತ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದಿರುವ ಉತ್ತರ ಪ್ರತಿಕೆಗಳಿಗೆ ಶಿಕ್ಷಕರು ಅಂಕ ನೀಡಿದ್ದು, ಇದೀಗ ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೆ 60% ಅಂಕವನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿ ಮುಖಂಡ ದಿವ್ಯಾಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಬರೆದ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಉತ್ತರ ಪ್ರತಿಕೆಯಲ್ಲಿ ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಕ್ರಿಕೆಟಿಗರ ಹೆಸರುಗಳು ಕೂಡ ಇದೆ ಎಂದು ಹೇಳಲಾಗಿದೆ.

ಪ್ರತಿಗಳ ಮೌಲ್ಯಮಾಪನದ ಸಮಯದಲ್ಲಿ ಆರ್‌ಟಿಐ ಪ್ರತಿಕ್ರಿಯೆಯಿಂದ ಈ ಅಕ್ರಮ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ. ಇಂತಹ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾತನಾಡಿದ ಉಪಕುಲಪತಿ ವಂದನಾ ಸಿಂಗ್ ಅವರು, ” ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

ಇನ್ನು ಈ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬಗ್ಗೆ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು. ರಾಜ್ಯಭವನಕ್ಕೂ ಈ ಬಗ್ಗೆ ಪತ್ರ ಬರೆಯಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ.ಈ ಕೃತ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದ್ದೇನೆ . ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:44 am, Sat, 27 April 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ