ಮೃತ ಪತಿಯ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧ, ಜಮೀನಿಗಾಗಿ ಅತ್ತೆಯನ್ನೇ ಕೊಂದ ಮಹಿಳೆ
ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದ ಮಹಿಳೆ ಕೊಲೆ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಝಾನ್ಸಿಯಲ್ಲಿ 54 ವರ್ಷದ ಮಹಿಳೆಯ ಕೊಲೆ ನಡೆದಿತ್ತು. ಜತೆಗೆ ಮನೆಯಲ್ಲಿದ್ದ ಚಿನ್ನಾಭರಣವೆಲ್ಲಾ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ.

ಝಾನ್ಸಿ, ಜುಲೈ 03: ಉತ್ತರ ಪ್ರದೇಶ(Uttar Pradesh) ದ ಝಾನ್ಸಿಯಲ್ಲಿ ನಡೆದ ಮಹಿಳೆ ಕೊಲೆ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಝಾನ್ಸಿಯಲ್ಲಿ 54 ವರ್ಷದ ಮಹಿಳೆಯ ಕೊಲೆ ನಡೆದಿತ್ತು. ಜತೆಗೆ ಮನೆಯಲ್ಲಿದ್ದ ಚಿನ್ನಾಭರಣವೆಲ್ಲಾ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಶೀಲಾ ದೇವಿಯನ್ನು ಕೊಂದ ಆರೋಪಿ ಪೂಜಾ ಮತ್ತು ಆಕೆಯ ಸಹೋದರಿ ಕಮಲಾ ನ್ಯಾಯಾಂಗ ಬಂಧನದಲ್ಲಿದ್ದಾರೆ, ಕೊಲೆಯ ನಂತರ ಪರಾರಿಯಾಗಿದ್ದ ಕಮಲಾಳ ಪ್ರಿಯಕರ ಅನಿಲ್ ವರ್ಮಾನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಮೂವರು ಸುಶೀಲಾದೇವಿಯ ಕೊಲೆಗೆ ಸಂಚು ರೂಪಿಸಿದ್ದರು. ಝಾನ್ಸಿಯಲ್ಲಿರುವ ಮನೆಯಿಂದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೂಜಾ ತನ್ನ ಪತಿ ಮೃತಪಟ್ಟ ಬಳಿಕ ಅವರ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧದಲ್ಲಿದ್ದಳು. ಜತೆಗೆ ಆಸ್ತಿಯನ್ನು ಕಬಳಿಸಲು ಸಂಚು ರೂಪಿಸಿದ್ದಳು. ಆಕೆಯ ಜತೆ ಆಕೆಯ ಸಹೋದರಿಯ ಪ್ರಿಯಕರ ಅನಿಲ್ ವರ್ಮಾ ಕೂಡ ಇದ್ದರು. ಕದ್ದ ಆಭರಣಗಳನ್ನು ಸಂಬಂಧಿಕರೊಬ್ಬರಿಗೆ ಮಾರಾಟ ಮಾಡಲು ಅನಿಲ್ ವರ್ಮಾ ತೆರಳುತ್ತಿದ್ದಾಗ ಪೊಲೀಸರು ಅಲ್ಲಿಗೆ ಹೋಗಿದ್ದಾರೆ. ವರ್ಮಾ ಪೊಲೀಸರ ಮೇಲೆ ಗುಂಡು ಹಾರಿಸಿದ್ದ, ಹೀಗಾಗಿ ಪೊಲೀಸರು ಕೂಡ ಅತನ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಮತ್ತಷ್ಟು ಓದಿ: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿ ಕೆಲಸ ಕಳೆದುಕೊಂಡ ಪೊಲೀಸರು
ಜೂನ್ 24 ರಂದು ಕುಮ್ಹರಿಯಾ ಗ್ರಾಮದಲ್ಲಿ ಸುಶೀಲಾ ದೇವಿ ಶವವಾಗಿ ಪತ್ತೆಯಾಗಿದ್ದರು. ಪೂಜಾ ತನ್ನ ಆಸ್ತಿ ಮಾರಿ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಹೋಗಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೂಜಾಗೆ ಈಗಾಗಲೇ ಮದುವೆಯಾಗಿದ್ದ ಮೈದುನನ ಜತೆ ಅಕ್ರಮ ಸಂಬಂಧವಿತ್ತು. ಭೂಮಿಯನ್ನು ಮಾರಾಟ ಮಾಡಲು ಇಬ್ಬರು ಮೈದುನರೂ ಒಪ್ಪಿದರೂ ಸುಶೀಲಾ ದೇವಿ ಒಪ್ಪಿರಲಿಲ್ಲ. ಹಾಗಾಗಿ ಆಕೆಯ್ನು ಹತ್ಯೆ ಮಾಡಲು ಸಂಚು ರೂಪಸಿದ್ದಳು.
ಪತಿಯ ಮರಣದ ನಂತರ ಪೂಜಾ ಝಾನ್ಸಿಯಲ್ಲಿ ಸುಶೀಲಾ ದೇವಿಯ ಕಿರಿಯ ಮಗ ಕಲ್ಯಾಣ್ ಸಿಂಗ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರು ವರ್ಷಗಳ ಹಿಂದೆ ಕಲ್ಯಾಣ್ ಸಿಂಗ್ ನಿಧನರಾದಾಗ, ಸುಶೀಲಾ ದೇವಿಯ ಮತ್ತೊಬ್ಬ ಮಗ ಸಂತೋಷ್ ಮತ್ತು ಅಜಯ್ ಪೂಜಾಳನ್ನು ಕುಮ್ಹರಿಯಾ ಗ್ರಾಮಕ್ಕೆ ಕರೆದೊಯ್ದಿದ್ದರು.
ಪೂಜಾ ಸಂತೋಷ್ ಜೊತೆ ಸಂಬಂಧ ಇಟ್ಟುಕೊಂಡಿದ್ದಳು ಹೆಣ್ಣು ಮಗು ಕೂಡ ಜನಿಸಿತ್ತು, ಸಂತೋಷ್ ಪತ್ನಿ ರಾಗಿಣಿ ಅವರ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿ ಒಂಬತ್ತು ತಿಂಗಳ ಹಿಂದೆ ತನ್ನ ತಾಯಿಯ ಮನೆಗೆ ಹೋಗಿದ್ದರು ಎಂದು ಎಸ್‌ಪಿ ಕುಮಾರ್ ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ ಪೂಜಾ, ಸುಶೀಲಾ ದೇವಿಯ ಕೊಲೆಗೆ ತನ್ನ ಸಹೋದರಿ ಪೂಜಾ ಮತ್ತು ಆಕೆಯ ಪ್ರಿಯಕರ ಅನಿಲ್ ವರ್ಮಾ ಜೊತೆ ಸೇರಿ ಸಂಚು ರೂಪಿಸಿದ್ದಾಗಿ ಹೇಳಿದ್ದಾಳೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Thu, 3 July 25




