AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ ಪೂರ್ವಜರ ಭೂಮಿ ಹರಾಜು

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ‌ಪತ್‌ ಜಿಲ್ಲೆಯಲ್ಲಿ ಹೊಂದಿದ್ದ ಜಮೀನು 1.38 ಕೋಟಿ ರೂ.ಗೆ ಹರಾಜಾಗಿದೆ.ಶತ್ರುಗಳ ಆಸ್ತಿ ಎಂದು ನೋಂದಾಯಿಸಲಾಗಿದ್ದ ಭೂಮಿಯ ಮೂಲ ಬೆಲೆಯನ್ನು 39 ಲಕ್ಷ ರೂ.ಗಿಂತ ಸ್ವಲ್ಪ ಹೆಚ್ಚಿಗೆ ನಿಗದಿಪಡಿಸಲಾಗಿತ್ತು. ಆದರೆ, ಅದು 1.38 ಕೋಟಿ ರೂ.ಗೆ ಹರಾಜು ಆಗಿದ್ದು, ಮೂವರು ವ್ಯಕ್ತಿಗಳು ಖರೀದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ಜಮೀನಿನ ಮಾಲೀಕರಲ್ಲಿ ಡಾ. ಜಾವೇದ್ ಮುಷರಫ್, ಪರ್ವೇಜ್ ಮುಷರಫ್ ಅವರ ಸಹೋದರ ಮತ್ತು ಮುಷರಫ್ ಕುಟುಂಬದ ಇತರ ಕೆಲವು ಸದಸ್ಯರು ಸೇರಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ ಪೂರ್ವಜರ ಭೂಮಿ ಹರಾಜು
ಪರ್ವೇಜ್ ಮುಷರಫ್
ನಯನಾ ರಾಜೀವ್
|

Updated on: May 26, 2025 | 9:21 AM

Share

ಲಕ್ನೋ, ಮೇ 26: ಒಂದೆಡೆ ಭಾರತ(India) ಹಾಗೂ ಪಾಕಿಸ್ತಾನ(Pakistan)ದ ನಡುವೆ ಉದ್ವಿಗ್ನತೆ ಇದೆ. ಇನ್ನೊಂದೆಡೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ‌ಪತ್‌ ಜಿಲ್ಲೆಯಲ್ಲಿ ಹೊಂದಿದ್ದ ಜಮೀನು ಹರಾಜಾಗಿದೆ. ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ದಾಳಿ ನಡೆಸಿ 26 ಅಮಾಯಕರ ಪ್ರಾಣ ತೆಗೆದಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್​ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ ನಾಶಪಡಿಸಿತ್ತು.

ಅದಾದ ಮೇಲೆ ದಾಳಿ ಪ್ರತಿದಾಳಿಗಳು ನಡೆಯುತ್ತಲೇ ಇದ್ದವು. ಆದರೆ ಕೊನೆಯಲ್ಲಿ ಎರಡೂ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಕದನ ವಿರಾಮ ಘೋಷಿಸಲಾಗಿದೆ. ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರೌತ್​ ಪಟ್ಟಣದಲ್ಲಿ ಹೊಂದಿರುವ ಆಸ್ತಿಯನ್ನು 1.38 ಕೋಟಿ ರೂ.ಗೆ ಹರಾಜು ಹಾಕಲಾಗಿದೆ.

ಬರೌತ್‌ನ ಕೊಟಾನಾ ಗ್ರಾಮದಲ್ಲಿ ಇರುವ ಸುಮಾರು 13 ಬಿಘಾ ಭೂಮಿಯನ್ನು ಶತ್ರು ಆಸ್ತಿ ಎಂದು ಘೋಷಿಸಲಾಗಿದೆ. ಈಗ ಅದು 1.38 ಕೋಟಿ ರೂ.ಗೆ ಮಾರಾಟವಾಗಿದೆ. ಈ ಭೂಮಿ ಮೊದಲು ಪರ್ವೇಜ್ ಮುಷರಫ್ ಅವರ ಸಹೋದರ ಡಾ. ಜಾವೇದ್ ಮುಷರಫ್ ಮತ್ತು ಅವರ ಕುಟುಂಬದ ಹೆಸರಿನಲ್ಲಿತ್ತು ಆದರೆ 15 ವರ್ಷಗಳ ಹಿಂದೆ ಅದನ್ನು ಶತ್ರು ಆಸ್ತಿಯಾಗಿ ನೋಂದಾಯಿಸಲಾಗಿದೆ.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಈಗ ಆ ಭೂಮಿಯನ್ನು ಪಂಕಜ್ (ಗುತ್ತಿಗೆದಾರ), ಮನೋಜ್ ಗೋಯಲ್ (ಬರಾವುತ್ ನಿವಾಸಿ) ಮತ್ತು ಗಾಜಿಯಾಬಾದ್‌ನ ಜೆಕೆ ಸ್ಟೀಲ್ ಕಂಪನಿಗೆ ವರ್ಗಾಯಿಸಲಾಗಿದೆ. ಶನಿವಾರ, ಲಕ್ನೋದಿಂದ ಬಂದ ಶತ್ರು ಆಸ್ತಿ ಇಲಾಖೆಯ ಅಧಿಕಾರಿ ಪ್ರಶಾಂತ್ ಕುಮಾರ್, ಬರೌತ್‌ನಲ್ಲಿರುವ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಮಾರಾಟ ಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಮತ್ತಷ್ಟು ಓದಿ: ಎಮರ್ಜೆನ್ಸಿ ಇದೆ ಅಂದ್ರೂ ತನ್ನ ವಾಯುಪ್ರದೇಶ ಬಳಸಲು ಇಂಡಿಗೋಗೆ ಅನುಮತಿ ಕೊಡದ ಪಾಕಿಸ್ತಾನ

ಪರ್ವೇಜ್ ಮುಷರಫ್ ಅವರ ಕುಟುಂಬವು 1943 ರಲ್ಲಿ ಬರೌತ್‌ನ ಕೊಟಾನಾ ಗ್ರಾಮದಿಂದ ದೆಹಲಿಗೆ ಸ್ಥಳಾಂತರಗೊಂಡಿತು. ಕೆಲವು ವರ್ಷಗಳ ನಂತರ, 1947 ರಲ್ಲಿ ವಿಭಜನೆಯ ಸಮಯದಲ್ಲಿ, ಅವರು ಪಾಕಿಸ್ತಾನಕ್ಕೆ ಹೋಗಿ ನೆಲೆಸಿದರು. ಆದಾಗ್ಯೂ, ಅವರ ಮಹಲು ಮತ್ತು ಕೃಷಿ ಭೂಮಿ ಕೋಟಾದಲ್ಲಿಯೇ ಉಳಿದಿತ್ತು. ವರ್ಷಗಳ ನಂತರ, ಈ ಆಸ್ತಿಗಳನ್ನು ಶತ್ರು ಆಸ್ತಿಗಳೆಂದು ಪರಿಗಣಿಸಿ ಸರ್ಕಾರಿ ದಾಖಲೆಗಳಲ್ಲಿ ನೋಂದಾಯಿಸಲಾಯಿತು.

ಶತ್ರು ಆಸ್ತಿ ಇಲಾಖೆ ಈಗ ಉತ್ತರ ಪ್ರದೇಶದಾದ್ಯಂತ ಅಂತಹ ಆಸ್ತಿಗಳನ್ನು ಹರಾಜು ಹಾಕುತ್ತಿದೆ. ಮಾರ್ಚ್ 28 ರಂದು 171 ಶತ್ರು ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, ಇದರಿಂದ ಸರ್ಕಾರಕ್ಕೆ 15 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿತ್ತು. ಈ ಆಸ್ತಿ ಲಕ್ನೋ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹರಡಿಕೊಂಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ