Leopard Attack: ಗಾಜಿಯಾಬಾದ್ ಕೋರ್ಟ್​ ಆವರಣಕ್ಕೆ ನುಗ್ಗಿದ ಚಿರತೆಯಿಂದ 6 ಮಂದಿ ಮೇಲೆ ದಾಳಿ, ಇಬ್ಬರ ಸ್ಥಿತಿ ಗಂಭೀರ

ಗಾಜಿಯಾಬಾದ್​ ಕೋರ್ಟ್​ನ ಆವರಣಕ್ಕೆ ನುಗ್ಗಿದ ಚಿರತೆಯೊಂದು 6 ಮಂದಿ ಮೇಲೆ ದಾಳಿ ನಡೆಸಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leopard Attack: ಗಾಜಿಯಾಬಾದ್ ಕೋರ್ಟ್​ ಆವರಣಕ್ಕೆ ನುಗ್ಗಿದ ಚಿರತೆಯಿಂದ 6 ಮಂದಿ ಮೇಲೆ ದಾಳಿ, ಇಬ್ಬರ ಸ್ಥಿತಿ ಗಂಭೀರ
ಚಿರತೆ ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Feb 09, 2023 | 9:10 AM

ಗಾಜಿಯಾಬಾದ್​ ಕೋರ್ಟ್​ನ ಆವರಣಕ್ಕೆ ನುಗ್ಗಿದ ಚಿರತೆಯೊಂದು 6 ಮಂದಿ ಮೇಲೆ ದಾಳಿ ನಡೆಸಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವೇಳೆ ಚಿರತೆ ಕೆಲವರ ಮೇಲೂ ದಾಳಿ ಮಾಡಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತರ ನಾಲ್ವರು ಗಾಯಗೊಂಡವರನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.

ಚಿರತೆ ಹಿಡಿಯಲು ಗಾಜಿಯಾಬಾದ್ ಮಾತ್ರವಲ್ಲದೆ ಮೀರತ್ ನಿಂದ ಅರಣ್ಯ ಇಲಾಖೆ ತಂಡವನ್ನು ಕರೆಸಲಾಗಿತ್ತು. ಸುಮಾರು 5 ಗಂಟೆಗಳ ಪರಿಶ್ರಮದ ಬಳಿಕ ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಎಡಿಎಂ ಸಿಟಿ ಗಾಜಿಯಾಬಾದ್, ವಿಪಿನ್ ಕುಮಾರ್, ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುವುದು ಇದರಿಂದ ಚಿರತೆ ಯಾವ ಸಮಯದಲ್ಲಿ ಮತ್ತು ಎಲ್ಲಿಂದ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿತು ಎಂದು ತಿಳಿಯಬಹುದು.

ಮತ್ತಷ್ಟು ಓದಿ: ಮಂಡ್ಯ: ಮಹಿಳೆ ಮೇಲೆ ಚಿರತೆ ದಾಳಿ; ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಬುಧವಾರ (ಫೆಬ್ರವರಿ 8) ಸಂಜೆ 4 ಗಂಟೆ ಸುಮಾರಿಗೆ ನ್ಯಾಯಾಲಯದ ಆವರಣದಲ್ಲಿ ಚಿರತೆ ಪತ್ತೆಯಾಗಿದೆ ಎಂದು ಎಡಿಎಂ ವಿಪಿನ್ ಕುಮಾರ್ ತಿಳಿಸಿದ್ದಾರೆ. ಬಳಿಕ ಅವ್ಯವಸ್ಥೆ ಉಂಟಾಯಿತು. ಈ ವೇಳೆ ಚಿರತೆ 6 ಮಂದಿಯನ್ನು ಗಾಯಗೊಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪೈಕಿ 4 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ಬಳಿಕ ಬಿಡುಗಡೆಗೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಜಿಯಾಬಾದ್ ಅರಣ್ಯ ಇಲಾಖೆ ತಂಡವು ತಕ್ಷಣ ಸ್ಥಳಕ್ಕೆ ತಲುಪಿದೆ ಆದರೆ ಟ್ರ್ಯಾಂಕ್ವಿಲೈಜರ್ ಗನ್ ಲಭ್ಯವಿಲ್ಲದ ಕಾರಣ ಮೀರತ್‌ನಿಂದ ಅರಣ್ಯ ಇಲಾಖೆ ತಂಡವನ್ನು ಕರೆತರಲಾಯಿತು ಎಂದು ಎಡಿಎಂ ವಿಪಿನ್ ಕುಮಾರ್ ತಿಳಿಸಿದ್ದಾರೆ. ಪೊಲೀಸರು, ಅರಣ್ಯ ಇಲಾಖೆ ಮತ್ತು ಆಡಳಿತ ಒಟ್ಟಾಗಿ ಶ್ರಮಿಸಿದ್ದು, ಸುಮಾರು 5 ಗಂಟೆಗಳ ನಂತರ ಚಿರತೆ ಹಿಡಿಯಲು ಸಾಧ್ಯವಾಯಿತು. ಅರಣ್ಯ ಇಲಾಖೆ ತಂಡ ಇವರನ್ನು ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಈ ಚಿರತೆಯನ್ನು ಸಹರಾನ್‌ಪುರದ ಅರಣ್ಯದಲ್ಲಿ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ