Uttar Pradesh earthquake: ಉತ್ತರ ಪ್ರದೇಶದಲ್ಲಿ 3.2 ತೀವ್ರತೆಯ ಲಘು ಭೂಕಂಪ
Sonbhadra: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಇಂದು (ಫೆ.8) 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು 24.22 ಅಕ್ಷಾಂಶ ಮತ್ತು 82.92 ರೇಖಾಂಶಗಳಲ್ಲಿ ಮತ್ತು 10 ಕಿಲೋಮೀಟರ್ ಆಳದಲ್ಲಿದೆ ನಡೆದಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ತಿಳಿಸಿದೆ. ಇನ್ನು ಈ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ
ಲಕ್ನೋ, ಫೆ.8: ಉತ್ತರ ಪ್ರದೇಶದ (Uttar Pradesh) ಸೋನಭದ್ರ ಜಿಲ್ಲೆಯಲ್ಲಿ ಇಂದು (ಫೆ.8) 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಈ ಭೂಕಂಪನ ಮಧ್ಯಾಹ್ನ 1.24ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು 24.22 ಅಕ್ಷಾಂಶ ಮತ್ತು 82.92 ರೇಖಾಂಶಗಳಲ್ಲಿ ಮತ್ತು 10 ಕಿಲೋಮೀಟರ್ ಆಳದಲ್ಲಿದೆ ನಡೆದಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ತಿಳಿಸಿದೆ. ಇನ್ನು ಈ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ
ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಜನವರಿ 23ರಂದು ಪ್ರಬಲವಾಗಿ ಭೂಮಿ ಕಂಪಿಸಿದೆ. ಚೀನಾದ ದಕ್ಷಿಣ ಭಾಗವಾದ ಕ್ಸಿನ್ಜಿಯಾಂಗ್ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ದೆಹಲಿಯಲ್ಲಿಯೂ ಭೂಕಂಪನದ (Delhi Earthquake) ಅನುಭವವಾಗಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಯಿತು. ಹೀಗಾಗಿ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದರು.
ಕಳೆದ ಒಂದು ವರ್ಷದಲ್ಲಿ ಉತ್ತರ ಭಾರತದಲ್ಲಿ, ವಿಶೇಷವಾಗಿ ದೆಹಲಿಯಲ್ಲಿ ಭೂಕಂಪದ ಘಟನೆಗಳು ಹೆಚ್ಚಿವೆ. ಇದರೊಂದಿಗೆ ಭೂಕಂಪದ ತೀವ್ರತೆಯೂ ಹೆಚ್ಚುತ್ತಿದೆ. ವಿಶೇಷವಾಗಿ ಅಫ್ಘಾನಿಸ್ತಾನ ಮತ್ತು ನೇಪಾಳ ಸೇರಿದಂತೆ ಹಿಮಾಲಯ ಪ್ರದೇಶದಲ್ಲಿ ಸಂಭವಿಸುವ ಪ್ರತಿಯೊಂದು ಭೂಕಂಪವೂ ದೆಹಲಿ-ಎನ್‌ಸಿಆರ್ ಮೇಲೆ ಪರಿಣಾಮ ಬೀರುತ್ತಿದೆ.
ಇದನ್ನೂ ಓದಿ: ಚೀನಾ ಪ್ರಬಲ ಭೂಕಂಪದ ಬಳಿಕ ದೆಹಲಿಯಲ್ಲೂ ಕಂಪಿಸಿದ ಭೂಮಿ
155 ಕಂಪನಗಳಿಂದ ನಲುಗಿದ ಜಪಾನ್
ಜಪಾನ್ನಲ್ಲಿ ಒಂದೇ ದಿನ 155 ಭೂಕಂಪ(Earthquake)ಗಳು ಸಂಭವಿಸಿತ್ತು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದರು, ಹಲವು ಜನ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕುಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿತ್ತು. ಇದರ ನಡುವೆ ಜೂನಿಯರ್ ಎನ್ಟಿಆರ್ ಅವರು ಕುಟುಂಬದ ಜೊತೆ ಜಪಾನ್ಗೆ ತೆರಳಿದ್ದರು. ಅಲ್ಲಿ ಭೂಕಂಪದ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:22 pm, Thu, 8 February 24