Atiq Ahmad: ಉತ್ತರಪ್ರದೇಶದ ಮಾಫಿಯಾ ಡಾನ್‌ ಅತೀಕ್ ಅಹ್ಮದ್‌ ಮತ್ತು ಸಹೋದರನನ್ನು ಗುಂಡಿಕ್ಕಿ ಹತ್ಯೆ; ಮೂವರು ಅರೆಸ್ಟ್

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ನೇರ ಸಂಪರ್ಕ ಹೊಂದಿದ್ದ ಉತ್ತರ ಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್​ ಸಹೋದರನನ್ನು ಶೂಟೌಟ್ ಮಾಡಿ ಹತ್ಯೆ ಮಾಡಲಾಗಿದೆ.

Atiq Ahmad: ಉತ್ತರಪ್ರದೇಶದ ಮಾಫಿಯಾ ಡಾನ್‌ ಅತೀಕ್ ಅಹ್ಮದ್‌ ಮತ್ತು ಸಹೋದರನನ್ನು ಗುಂಡಿಕ್ಕಿ ಹತ್ಯೆ; ಮೂವರು ಅರೆಸ್ಟ್
ಉತ್ತರಪ್ರದೇಶದ ಮಾಫಿಯಾ ಡಾನ್‌ ಅತೀಕ್ ಅಹ್ಮದ್‌ ಸಹೋದರನ ಶೂಟ್​ಔಟ್
Image Credit source: ANI

Updated on: Apr 15, 2023 | 11:39 PM

ಆಗ್ರಾ (ಉತ್ತರ ಪ್ರದೇಶ): ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ (Umesh Pal Kidnapping Case) ಮೋಸ್ಟ್ ವಾಂಟೆಡ್ ಆಗಿದ್ದ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ (Atiq Ahmed) ಪುತ್ರ ಅಸದ್​ನನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್​ಕೌಂಟ್ ಮಾಡಿದ ಬೆನ್ನಲ್ಲೇ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್​ನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ವೈದ್ಯಕೀಯ ತಪಾಸಣೆಗೆ ಕೊಂಡೊಯ್ಯುವ ವೇಳೆ ಪ್ರಯಾಗ್​ರಾಜ್ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸನ್ನಿ, ಲವಲೇಶ್ ಮತ್ತು ಅರುಣ್ ಬಂಧಿತ ಆರೋಪಿಗಳಾಗಿದ್ದಾರೆ. ದಾಳಿಕೋರರು ಮಾಧ್ಯಮದವರಂತೆ ವೇಷ ಧರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಅಸಾದ್ ಅಹ್ಮದ್​ನ ಅಂತ್ಯ ಕ್ರಿಯೆ ಇಂದು ನಡೆದಿದೆ. ಕೆಲವು ಸಂಬಂಧಿಕರು ಮತ್ತು ಸ್ಥಳೀಯರು ಸೇರಿಕೊಂಡು ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ವೇಳೆ ಭಾರೀ ಭದ್ರತೆ ಕಲ್ಪಿಸಲಾಗಿತ್ತು. ಅತೀಕ್ ಅಹ್ಮದ್ ಅನುಪಸ್ಥಿತಿಯಲ್ಲಿ ಅಂತ್ಯಕ್ರಿಯೆ ನಡೆದಿದೆ.

2006ರಲ್ಲಿ ಉಮೇಶ್‌ ಪಾಲ್‌ ಅಪಹರಣ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ಅತೀಕ್‌ ಅಹ್ಮದ್‌  ದೋಷಿ ಎಂದು ಪ್ರಯಾಗರಾಜ್‌ ನ್ಯಾಯಾಲಯ  ತೀರ್ಪು ನೀಡಿದೆ. ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಅತೀಕ್ ಅಹ್ಮದ್, ಖಾನ್ ಸೌಲತ್ ಹನೀಫ್ ಮತ್ತು ದಿನೇಶ್ ಪಾಸಿ ಅವರಿಗೆ ಪ್ರಯಾಗ್‌ರಾಜ್‌ನಲ್ಲಿರುವ ಎಂಪಿ/ಎಂಎಲ್ಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆ ಮತ್ತು ಅಪಹರಣ ಸೇರಿದಂತೆ ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಮಾಜಿ ಸಂಸದ ಮತ್ತು ಶಾಸಕ ಅತೀಕ್ ಅಹ್ಮದ್ ಎದುರಿಸುತ್ತಿದ್ದಾನೆ.

ಇದನ್ನೂ ಓದಿ: Atiq Ahmad: ಗ್ಯಾಂಗ್​ಸ್ಟರ್ ಅತೀಕ್​ ಅಹ್ಮದ್​ಗಿರುವ ಉಗ್ರರ ನಂಟಿನ ಬಗ್ಗೆ ಯುಪಿ ಪೊಲೀಸ್​ ಚಾರ್ಜ್​ಶೀಟ್​ನಲ್ಲಿ ಏನಿದೆ?

ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ 2005 ರ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆಯ ಒಂದು ತಿಂಗಳ ನಂತರ ಅಹ್ಮದ್​​ಗೆ ಶಿಕ್ಷೆಯಾಗಿದೆ. ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಹಿಂಬದಿ ಸೀಟಿನಿಂದ ಹೊರಗಿಳಿಯುತ್ತಿದ್ದಾಗ ಉಮೇಶ್ ಪಾಲ್​​ನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆಗಿದ್ದ ಇಬ್ಬರು ಪೊಲೀಸ್ ಅಂಗರಕ್ಷಕರೂ ಶೂಟೌಟ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.

2005 ರ ಕೊಲೆಯಲ್ಲಿ ಉಮೇಶ್ ಪಾಲ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದ್ದರಿಂದ ಅತಿಕ್ ಅಹ್ಮದ್ ಹತ್ಯೆಗೈದಿದ್ದಾನೆ ಎಂದು ಯುಪಿ ಪೊಲೀಸರು ಹೇಳಿಕೆ ನೀಡಿದ್ದರು. 2006 ರಲ್ಲಿ, ಉಮೇಶ್ ಪಾಲ್ ಅವರು ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿದಾಗ ಬಂದೂಕು ತೋರಿಸಿ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 pm, Sat, 15 April 23