ಹಣಕ್ಕಾಗಿ ಗೆಳೆಯರಿಗೆ ಹೆಂಡತಿ ಮೇಲೆ ಅತ್ಯಾಚಾರವೆಸಗಲು ಹೇಳಿದ ಗಂಡ

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಹಣಕ್ಕಾಗಿ ತನ್ನ ಸ್ನೇಹಿತರಿಗೆ ತನ್ನ ಪತ್ನಿಯ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿರುವ ವಿಚಿತ್ರ ಘಟನೆ ನಡೆದಿದೆ. ಅಲ್ಲದೆ, ತನ್ನ ಸ್ನೇಹಿತರು ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸುತ್ತಿರುವ ವಿಡಿಯೋಗಳನ್ನು ಆತ ಸೌದಿಯಲ್ಲಿ ಕುಳಿತು ವೀಕ್ಷಿಸಿದ್ದಾನೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿ ಮತ್ತು ಆತನ ಇಬ್ಬರು ಸ್ನೇಹಿತರ ವಿರುದ್ಧ ದೂರು ದಾಖಲಾಗಿದ್ದು, ಆ ವ್ಯಕ್ತಿಯ ಪತ್ನಿ ತನ್ನ ಗಂಡ ಆತನ ಸ್ನೇಹಿತರಿಗೆ ತನ್ನ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿದ್ದಾಗಿ ಆರೋಪಿಸಿದ್ದಾರೆ.

ಹಣಕ್ಕಾಗಿ ಗೆಳೆಯರಿಗೆ ಹೆಂಡತಿ ಮೇಲೆ ಅತ್ಯಾಚಾರವೆಸಗಲು ಹೇಳಿದ ಗಂಡ
Sexual Harassment
Follow us
ಸುಷ್ಮಾ ಚಕ್ರೆ
|

Updated on: Jan 09, 2025 | 7:17 PM

ನವದೆಹಲಿ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿ ಆತನ ಇಬ್ಬರು ಸ್ನೇಹಿತರಿಗೆ ತನ್ನ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿದ್ದಾಗಿ ಆರೋಪಿಸಿದ್ದಾರೆ. ಆ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನ್ನ ಪತಿಯ ಇಬ್ಬರು ಸ್ನೇಹಿತರು ಕಳೆದ ಮೂರು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ತನ್ನ ಗಂಡನ ಗೆಳೆಯರು ಅತ್ಯಾಚಾರ ನಡೆಸುವಾಗ ಅದನ್ನು ವಿಡಿಯೋ ರೆಕಾರ್ಡ್​ ಕೂಡ ಮಾಡಿಕೊಂಡಿದ್ದಾರೆ. ಆ ವಿಡಿಯೋಗಳನ್ನು ತನ್ನ ಗಂಡನಿಗೆ ಕಳುಹಿಸುತ್ತಿದ್ದರು. ಸೌದಿ ಅರೇಬಿಯಾದಲ್ಲಿರುವ ಗಂಡ ಆ ವಿಡಿಯೋಗಳನ್ನು ಅಲ್ಲಿಂದಲೇ ನೋಡುತ್ತಿದ್ದ ಎಂದು ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ತಾನು 1 ತಿಂಗಳ ಗರ್ಭಿಣಿಯಾಗಿದ್ದೇನೆ. ತನ್ನ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಆ ಮಹಿಳೆ ಬಹಿರಂಗಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 35 ವರ್ಷದ ಮಹಿಳೆ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಹೆಂಡತಿಯನ್ನು ತಮ್ಮ ಜೊತೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ನನ್ನ ಗಂಡನ ಸ್ನೇಹಿತರು ನನ್ನ ಗಂಡನಿಗೆ ಹಣ ನೀಡುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದಾರೆ. ಈ ವಿಷಯವನ್ನು ಯಾರೊಂದಿಗೂ ಹೇಳುವಂತಿಲ್ಲ ಎಂದು ನನ್ನ ಗಂಡನ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಇದನ್ನೂ ಓದಿ: ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ

ಆರೋಪಿಗಳಿಬ್ಬರೂ ತಮ್ಮ ಫೋನ್‌ಗಳಲ್ಲಿ ಲೈಂಗಿಕ ಕ್ರಿಯೆ ನಡೆಸುವಾಗ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದು, ತನ್ನ ಪತಿ ಸೌದಿ ಅರೇಬಿಯಾದಲ್ಲಿ ಆ ವೀಡಿಯೊಗಳನ್ನು ನೋಡುತ್ತಿದ್ದರು ಎಂದು ಹೇಳಿದ್ದಾರೆ.

ಆ ಮಹಿಳೆ 2010ರಲ್ಲಿ ಬುಲಂದ್‌ಶಹರ್ ವ್ಯಕ್ತಿಯನ್ನು ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಟೋಮೊಬೈಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ಆಕೆಯ ಪತಿ ವರ್ಷಕ್ಕೆ ಒಂದು ಬಾರಿ ಅಥವಾ ಎರಡು ಬಾರಿ ಮನೆಗೆ ಭೇಟಿ ನೀಡುತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ