ನವದೆಹಲಿ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿ ಆತನ ಇಬ್ಬರು ಸ್ನೇಹಿತರಿಗೆ ತನ್ನ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿದ್ದಾಗಿ ಆರೋಪಿಸಿದ್ದಾರೆ. ಆ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನ್ನ ಪತಿಯ ಇಬ್ಬರು ಸ್ನೇಹಿತರು ಕಳೆದ ಮೂರು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ತನ್ನ ಗಂಡನ ಗೆಳೆಯರು ಅತ್ಯಾಚಾರ ನಡೆಸುವಾಗ ಅದನ್ನು ವಿಡಿಯೋ ರೆಕಾರ್ಡ್ ಕೂಡ ಮಾಡಿಕೊಂಡಿದ್ದಾರೆ. ಆ ವಿಡಿಯೋಗಳನ್ನು ತನ್ನ ಗಂಡನಿಗೆ ಕಳುಹಿಸುತ್ತಿದ್ದರು. ಸೌದಿ ಅರೇಬಿಯಾದಲ್ಲಿರುವ ಗಂಡ ಆ ವಿಡಿಯೋಗಳನ್ನು ಅಲ್ಲಿಂದಲೇ ನೋಡುತ್ತಿದ್ದ ಎಂದು ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ತಾನು 1 ತಿಂಗಳ ಗರ್ಭಿಣಿಯಾಗಿದ್ದೇನೆ. ತನ್ನ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಆ ಮಹಿಳೆ ಬಹಿರಂಗಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 35 ವರ್ಷದ ಮಹಿಳೆ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಹೆಂಡತಿಯನ್ನು ತಮ್ಮ ಜೊತೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ನನ್ನ ಗಂಡನ ಸ್ನೇಹಿತರು ನನ್ನ ಗಂಡನಿಗೆ ಹಣ ನೀಡುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದಾರೆ. ಈ ವಿಷಯವನ್ನು ಯಾರೊಂದಿಗೂ ಹೇಳುವಂತಿಲ್ಲ ಎಂದು ನನ್ನ ಗಂಡನ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿದ್ದಾರೆ.
ಇದನ್ನೂ ಓದಿ: ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ
ಆರೋಪಿಗಳಿಬ್ಬರೂ ತಮ್ಮ ಫೋನ್‌ಗಳಲ್ಲಿ ಲೈಂಗಿಕ ಕ್ರಿಯೆ ನಡೆಸುವಾಗ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದು, ತನ್ನ ಪತಿ ಸೌದಿ ಅರೇಬಿಯಾದಲ್ಲಿ ಆ ವೀಡಿಯೊಗಳನ್ನು ನೋಡುತ್ತಿದ್ದರು ಎಂದು ಹೇಳಿದ್ದಾರೆ.
ಆ ಮಹಿಳೆ 2010ರಲ್ಲಿ ಬುಲಂದ್‌ಶಹರ್ ವ್ಯಕ್ತಿಯನ್ನು ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಟೋಮೊಬೈಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ಆಕೆಯ ಪತಿ ವರ್ಷಕ್ಕೆ ಒಂದು ಬಾರಿ ಅಥವಾ ಎರಡು ಬಾರಿ ಮನೆಗೆ ಭೇಟಿ ನೀಡುತ್ತಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ