AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋ ರಾತ್ರಿ ಹುಡುಗನಿಂದ ಹುಡುಗಿಯಾಗಿ ಬದಲಾದ ಯುವಕ, ನಿದ್ರೆ ಮಾತ್ರೆ ಕೊಟ್ಟು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡ್ಸಿದ್ದು ಯಾರು?

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಯುವಕನಿಗೆ ನಿದ್ರೆ ಮಾತ್ರೆ ಕೊಟ್ಟು ಎಚ್ಚರ ತಪ್ಪಿ ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ರಾತ್ರೋ ರಾತ್ರಿ ಹುಡುಗನಿಂದ ಹುಡುಗಿಯಾಗಿ ಬದಲಾದ ಯುವಕ, ನಿದ್ರೆ ಮಾತ್ರೆ ಕೊಟ್ಟು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡ್ಸಿದ್ದು ಯಾರು?
ಶಸ್ತ್ರಚಿಕಿತ್ಸೆ
ನಯನಾ ರಾಜೀವ್
|

Updated on: Jun 21, 2024 | 9:41 AM

Share

ರಾತ್ರೋ ರಾತ್ರಿ ಯುವಕನೊಬ್ಬ ಹುಡುಗಿಯಾಗಿ ಬದಲಾಗಿದ್ದಾನೆ, ಆತನಿಗೆ ನಿದ್ರೆ ಮಾತ್ರೆ ಕೊಟ್ಟು ಆಸ್ಪತ್ರೆಗೆ ಕರೆದೊಯ್ದು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮುಜಾಫರ್‌ನಗರದ 20 ವರ್ಷದ ಮುಜಾಹಿದ್, ಓಂಪ್ರಕಾಶ್‌ ಎಂಬಾತ ತನಗೆ ನಿದ್ರೆ ಮಾತ್ರೆ ಕೊಟ್ಟು ಆಸ್ಪತ್ರೆಗೆ ಸಾಗಿಸಿ ಆ ಸಮಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು ಎಂದು ಹೇಳುತ್ತಾರೆ.

ಓಂ ಪ್ರಕಾಶ್ ಉತ್ತರ ಪ್ರದೇಶದ ಮುಜಾಫರ್​ನಗರ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಶಾಮೀಲಾಗಿ ಈ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. ಓಂ ಪ್ರಕಾಶ್ ಕಳೆದ ಎರಡು ವರ್ಷಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು 20 ವರ್ಷದ ಯುವಕ ಹೇಳಿಕೊಂಡಿದ್ದಾನೆ. ಜೂನ್ 3ರಂದು ಓಂ ಪ್ರಕಾಶ್​ ಅವರು ಮುಜಾಹಿದ್​ಗೆ ಶಸ್ತ್ರಚಿಕಿತ್ಸೆ ಮಾಡುವಂತೆ ಮನ್ಸೂರ್‌ಪುರದ ಬೆಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರಿಗೆ ಮನವರಿಕೆ ಮಾಡಿದ್ದರು.

ನನಗೆ ಪ್ರಜ್ಞೆ ಬಂದಾಗ, ನಾನು ಹುಡುಗನಿಂದ ಹುಡುಗಿಯಾಗಿ ಬದಲಾಗಿದ್ದೇನೆ ಎಂದು ಮುಜಾಹಿದ್ ಹೇಳಿದ್ದಾರೆ. ನನಗೆ ಎಚ್ಚರವಾದಾಗ ಓಂ ಪ್ರಕಾಶ್​ ನನ್ನ ಬಳಿ ಬಂದು ನೀನು ಈಗ ಹುಡುಗಿಯಾಗಿ ಬದಲಾಗಿದ್ದೀಯ ನಿನ್ನನ್ನು ಲಕ್ನೋಗೆ ಕರೆದುಕೊಂಡು ಹೋಗಿ ಮದುವೆಯಾಗುತ್ತೇನೆ ಎಂದು ಹೇಳಿದ್ದಾಗಿ ಮುಜಾಹಿದ್ ಹೇಳಿದ್ದಾರೆ.

ಮತ್ತಷ್ಟು ಓದಿ: ಅಮ್ಮ ಬೆಂಬಲವಾಗಿ ನಿಂತರು: ಕೇರಳದ ಮೊದಲ ಮಂಗಳಮುಖಿ ವೈದ್ಯೆ ಪ್ರಿಯಾ ಹೇಳಿದ ಬದುಕಿನ ಕತೆ

ಬೇಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರು ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಮುಜಾಹಿದ್ ತನ್ನ ಸ್ವಂತ ಇಚ್ಛೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಮುಜಾಹಿದ್ ತಂದೆ ನೀಡಿದ ದೂರಿನ ಆಧಾರದ ಮೇಲೆ ಜೂನ್ 16 ರಂದು ಓಂಪ್ರಕಾಶ್ ನನ್ನು ಬಂಧಿಸಲಾಗಿತ್ತು. ಈ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವೈದ್ಯಕೀಯ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ಮುಜಾಹಿದ್‌ಗೆ 2 ಕೋಟಿ ರೂ. ಪರಿಹಾರ ನೀಡಬೇಕು ಎಂದು ಪಾಲ್ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ . ಆಸ್ಪತ್ರೆಯು ಅಕ್ರಮ ಅಂಗಾಂಗ ವ್ಯಾಪಾರ ಮತ್ತು ಇತರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಬಿಕೆಯು ಮುಖಂಡರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?