AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ.

Uttar Pradesh: ಕ್ಯಾನ್ಸರ್​ನಿಂದ ವ್ಯಕ್ತಿ ಸಾವು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ
ಚಿತೆ(ಸಾಂದರ್ಭಿಕ ಚಿತ್ರ)Image Credit source: India Today
ನಯನಾ ರಾಜೀವ್
|

Updated on: May 28, 2023 | 10:20 AM

Share

ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ. ವ್ಯಕ್ತಿಯೊಬ್ಬ ಕ್ಯಾನ್ಸರ್​ನಿಂದಾಗಿ ಮೃತಪಟ್ಟಿದ್ದರು. ಯಮುನಾ ನದಿಯ ತಟದಲ್ಲಿ ಅಂತ್ಯಕ್ರಿಯೆ ನೆರವೇರುತ್ತಿತ್ತು. ಆ ಸಂದರ್ಭದಲ್ಲಿ ದುಃಖ ತಾಳಲಾರದೆ ಅವರ ಸ್ನೇಹಿತ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಶೋಕ್(42) ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಕ್ಯಾನ್ಸರ್​ನಿಂದಾಗಿ ಶನಿವಾರ ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆಯ ಸಮಯದಲ್ಲಿ ಯಮುನಾ ನದಿ ಬಳಿ ಅಂತ್ಯಕ್ರಿಯೆ ನೆರವೇರುತ್ತಿತ್ತು.

ಮತ್ತಷ್ಟು ಓದಿ: Bengaluru News: ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಆಗ ಮೃತನ ಸ್ನೇಹಿತ ಆನಂದ್(40) ಆಗಮಿಸಿದ್ದರು, ಜನರು ಅಂತ್ಯಕ್ರಿಯೆ ಮಾಡಿದ ಜಾಗದಿಂದ ಹೋಗುತ್ತಿರುವಾಗ ಆತ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಗ್ರಾ ಮೆಡಿಕಲ್ ಕಾಲೇಜಿಗೆ ರವಾನಿಸಲಾಯಿತಾದರೂ , ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್