ಕಾಂಗ್ರೆಸ್ ಕಚೇರಿಯಲ್ಲಿ ಯುವಕನ ಶವ ಪತ್ತೆ
ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಸೇರಲು ಗೋರಖ್‌ಪುರದಿಂದ ಲಕ್ನೋಗೆ ಬಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗೋರಖ್‌ಪುರದ ನಿವಾಸಿ ಪ್ರಭಾತ್ ಪಾಂಡೆ ಅವರು ಕಾಂಗ್ರೆಸ್ ಕಚೇರಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಂತರ ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಪ್ರಭಾತ್ ಪಾಂಡೆ ಸಾವಿನ ಸುದ್ದಿ ತಿಳಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಮತ್ತು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಆಸ್ಪತ್ರೆಗೆ ಆಗಮಿಸಿದರು. ಪ್ರಭಾತ್ ಸಾವಿಗೆ ನಿಜವಾದ ಕಾರಣ ಮರಣೋತ್ತರ ಪರೀಕ್ಷೆ ನಂತರ ತಿಳಿಯಲಿದೆ
ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಗೋರಖ್‌ಪುರದಿಂದ ಲಕ್ನೋಗೆ ಬಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗೋರಖ್‌ಪುರದ ನಿವಾಸಿ ಪ್ರಭಾತ್ ಪಾಂಡೆ ಅವರು ಕಾಂಗ್ರೆಸ್ ಕಚೇರಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಂತರ ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.
ಪ್ರಭಾತ್ ಪಾಂಡೆ ಸಾವಿನ ಸುದ್ದಿ ತಿಳಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಮತ್ತು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಆಸ್ಪತ್ರೆಗೆ ಆಗಮಿಸಿದರು. ಪ್ರಭಾತ್ ಸಾವಿಗೆ ನಿಜವಾದ ಕಾರಣ ಮರಣೋತ್ತರ ಪರೀಕ್ಷೆ ನಂತರ ತಿಳಿಯಲಿದೆ ಎಂದು ಬ್ರಜೇಶ್ ಪಾಠಕ್ ಈ ವೇಳೆ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರೈ, ಸರಕಾರ ಈ ಸಂಪೂರ್ಣ ಪ್ರಕರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
2024 ರ ಡಿಸೆಂಬರ್ 18 ರಂದು ಸಂಜೆ 5 ಗಂಟೆಗೆ ಪ್ರಭಾತ್ ಪಾಂಡೆ ಅವರನ್ನು ಕಾಂಗ್ರೆಸ್ ಕಚೇರಿಯಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೃತರ ಮರಣೋತ್ತರ ಪರೀಕ್ಷೆಯನ್ನು ವೀಡಿಯೋಗ್ರಫಿ ಮೂಲಕ ನಡೆಸಲಾಗುವುದು ಮತ್ತು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ:ವ್ಯಾಪಾರಕ್ಕೆಂದು ದೂರದ ಊರಿನಿಂದ ದಾವಣಗೆರೆಗೆ ಬಂದಿದ್ದ ದಂಪತಿಯ ಮಗು ಕಿಡ್ನ್ಯಾಪ್
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಾಕಷ್ಟು ಗದ್ದಲ ಏರ್ಪಟ್ಟಿದೆ, ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವರು ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ, ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ನಿರುದ್ಯೋಗ ಮತ್ತು ಹಣದುಬ್ಬರ ಸೇರಿದಂತೆ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಆತನ ಚಿಕ್ಕಪ್ಪ ಮನೀಶ್ ಪಾಂಡೆ ಹುಸೇಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಭಾತ್‌ನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಆತನಿಗೆಯಾವುದೇ ಕಾಯಿಲೆ ಇರಲಿಲ್ಲ, ಕಚೇರಿಯಲ್ಲಿ ಏನೋ ನಡೆದಿರಬಹುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ