AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಆಗ್ರಾದಲ್ಲೊಂದು ಅಮಾನವೀಯ ಘಟನೆ, ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ, ಮನಬಂದಂತೆ ಥಳಿತ

ಯುವಕನೊಬ್ಬ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿದ್ದು, ಮತ್ತೊಬ್ಬ ಯುವಕ ಆತನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Uttar Pradesh: ಆಗ್ರಾದಲ್ಲೊಂದು ಅಮಾನವೀಯ ಘಟನೆ, ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ, ಮನಬಂದಂತೆ ಥಳಿತ
TV9 Web
| Edited By: |

Updated on: Jul 25, 2023 | 12:39 PM

Share

ಯುವಕನೊಬ್ಬ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿದ್ದು, ಮತ್ತೊಬ್ಬ ಯುವಕ ಆತನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೂವತ್ತು ಸೆಕೆಂಡುಗಳ ವಿಡಿಯೋದಲ್ಲಿ ಯುವಕ ಈ ವ್ಯಕ್ತಿಯ ತಲೆಯ ಮೇಲೆ ಒದೆಯುವುದನ್ನು ಕಾಣಬಹುದು, ಯುವಕ ಮತ್ತು ಅವನ ಸ್ನೇಹಿತರು ಗಾಯಗೊಂಡ ಯುವಕನನ್ನು ನಿಂದಿಸುತ್ತಿರುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ಮೂರ್ನಾಲ್ಕು ತಿಂಗಳ ಹಳೆಯದು ಎಂದು ಪೊಲೀಸರು ತಿಳಿಸಿದ್ದಾರೆ. ‘ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇತರರ ಪತ್ತೆಗೆ ಬಲೆ ಬೀಸಿದ್ದಾರೆ’ ಎಂದು ಉಪ ಪೊಲೀಸ್ ಆಯುಕ್ತ (ನಗರ) ಸೂರಜ್ ಕುಮಾರ್ ರೈ ತಿಳಿಸಿದ್ದಾರೆ. ಆದರೆ ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಆಗ್ರಾದ ಯಾವುದೇ ಪೊಲೀಸ್ ಠಾಣೆಯಲ್ಲಿ ಯುವಕ ಈ ಬಗ್ಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಯುವಕನನ್ನು ಆದಿತ್ಯ ಎಂದು ಗುರುತಿಸಲಾಗಿದೆ.

ಆದಿತ್ಯನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Madhya Pradesh: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಬಂಧನ

ಇಂಥದ್ದೇ ಮತ್ತೊಂದು ಘಟನೆ

ಆದಿವಾಸಿ ಯುವಕನೊಬ್ಬನ ಮೇಲೆ ಮೂತ್ರ ವಿಸರ್ಜಿಸಿದ ವಿಡಿಯೋ ವೈರಲ್ ಆಗಿತ್ತು, ಈ ಘಟನೆ ಮಧ್ಯಪ್ರದೇಶ(Madhya Pradesh) ದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.  ಈ ಹಿಂದೆ, ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294, 504 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ