ಯುವಕನೊಬ್ಬ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿದ್ದು, ಮತ್ತೊಬ್ಬ ಯುವಕ ಆತನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೂವತ್ತು ಸೆಕೆಂಡುಗಳ ವಿಡಿಯೋದಲ್ಲಿ ಯುವಕ ಈ ವ್ಯಕ್ತಿಯ ತಲೆಯ ಮೇಲೆ ಒದೆಯುವುದನ್ನು ಕಾಣಬಹುದು, ಯುವಕ ಮತ್ತು ಅವನ ಸ್ನೇಹಿತರು ಗಾಯಗೊಂಡ ಯುವಕನನ್ನು ನಿಂದಿಸುತ್ತಿರುವುದನ್ನು ಕಾಣಬಹುದು.
ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ಮೂರ್ನಾಲ್ಕು ತಿಂಗಳ ಹಳೆಯದು ಎಂದು ಪೊಲೀಸರು ತಿಳಿಸಿದ್ದಾರೆ. ‘ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇತರರ ಪತ್ತೆಗೆ ಬಲೆ ಬೀಸಿದ್ದಾರೆ’ ಎಂದು ಉಪ ಪೊಲೀಸ್ ಆಯುಕ್ತ (ನಗರ) ಸೂರಜ್ ಕುಮಾರ್ ರೈ ತಿಳಿಸಿದ್ದಾರೆ. ಆದರೆ ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
TW: Disturbing video, abusive content
In UP’s Agra, a purported video of a man urinating on the victim lying semi unconscious on the ground and bleeding profusely has surface on social media. The video is claimed to be 3-4 months old. Main accused has been identified as Aditya. pic.twitter.com/ktSNDIqrSV
— Piyush Rai (@Benarasiyaa) July 24, 2023
ಆಗ್ರಾದ ಯಾವುದೇ ಪೊಲೀಸ್ ಠಾಣೆಯಲ್ಲಿ ಯುವಕ ಈ ಬಗ್ಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಯುವಕನನ್ನು ಆದಿತ್ಯ ಎಂದು ಗುರುತಿಸಲಾಗಿದೆ.
ಆದಿತ್ಯನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮತ್ತಷ್ಟು ಓದಿ: Madhya Pradesh: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಬಂಧನ
ಇಂಥದ್ದೇ ಮತ್ತೊಂದು ಘಟನೆ
ಆದಿವಾಸಿ ಯುವಕನೊಬ್ಬನ ಮೇಲೆ ಮೂತ್ರ ವಿಸರ್ಜಿಸಿದ ವಿಡಿಯೋ ವೈರಲ್ ಆಗಿತ್ತು, ಈ ಘಟನೆ ಮಧ್ಯಪ್ರದೇಶ(Madhya Pradesh) ದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ, ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294, 504 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ