Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳ ಹಿಂದೆ ಪ್ರೇಯಸಿಯನ್ನು ಕೊಂದು, ಪೊಲೀಸರೆದುರು ಹೊಸ ಕತೆ ಕಟ್ಟಿದ ಪ್ರಿಯಕರ!

7 ತಿಂಗಳ ಹಿಂದೆಯೇ ರಾಮನ್ ತನ್ನ ಜೊತೆ ವಾಸವಾಗಿದ್ದ ಮಹಿಳೆಯನ್ನು ಕೊಂದಿದ್ದಾನೆ. ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ನನ್ನ ಲಿವ್ ಇನ್ ಪಾರ್ಟನರ್ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ.

7 ತಿಂಗಳ ಹಿಂದೆ ಪ್ರೇಯಸಿಯನ್ನು ಕೊಂದು, ಪೊಲೀಸರೆದುರು ಹೊಸ ಕತೆ ಕಟ್ಟಿದ ಪ್ರಿಯಕರ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 25, 2022 | 2:37 PM

ಘಾಜಿಯಾಬಾದ್: 7 ತಿಂಗಳ ಹಿಂದೆ ತನ್ನ ಲಿವ್-ಇನ್ ಸಂಗಾತಿಯನ್ನು (Live-In Partner) ಕೊಂದು ಆಕೆ ನಾಪತ್ತೆಯಾಗಿದ್ದಾಳೆಂದು ಸುಳ್ಳು ಕೇಸ್ ದಾಖಲಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶ (Uttar Pradesh Police) ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಮನ್ ಜೊತೆ ವಾಸವಾಗಿದ್ದ ಮಹಿಳೆ ಮೇ 20ರಂದು ನಾಪತ್ತೆಯಾಗಿದ್ದು, ಆಕೆಗೆ 2 ವರ್ಷದ ಮಗಳಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

7 ತಿಂಗಳ ಹಿಂದೆಯೇ ರಾಮನ್ ತನ್ನ ಜೊತೆ ವಾಸವಾಗಿದ್ದ ಮಹಿಳೆಯನ್ನು ಕೊಂದಿದ್ದಾನೆ. ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ನನ್ನ ಲಿವ್ ಇನ್ ಪಾರ್ಟನರ್ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ. ರಾಮನ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: Viral Video: ಪೊಲೀಸ್ ಯುನಿಫಾರಂ ಧರಿಸಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್

ತನಿಖೆಯ ವೇಳೆ ರಾಮನ್ ಹಾಗೂ ಆ ಮಹಿಳೆ ಮದುವೆಗೆ ಸಂಬಂಧಿಸಿದಂತೆ ಜಗಳವಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಮೇ ತಿಂಗಳಲ್ಲಿ ರಾಮನ್ ತನ್ನ ಪಾರ್ಟನರ್ ಜೊತೆ ಹಿಮಾಚಲ ಪ್ರದೇಶದ ಕುಲುಗೆ ಹೋಗುತ್ತಿದ್ದಾಗ ಆಕೆಯ ಕತ್ತು ಹಿಸುಕಿ ಕೊಂದು, ಅಲ್ಲಿ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದರು.

ಈಗಾಗಲೇ ಕೊಲೆ ಪ್ರಕರಣ ದಾಖಲಾಗಿದ್ದು, ಕುಲುವಿನ ಅರಣ್ಯದಲ್ಲಿ ಮಹಿಳೆ ಶವ ಪತ್ತೆಯಾಗಿದೆ ಎಂದು ಡಿಸಿಪಿ ಶರ್ಮಾ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ರಾಷ್ಟ್ರ ರಾಜಧಾನಿಯಲ್ಲಿ ಶ್ರದ್ಧಾ ವಾಕರ್ ಅವರನ್ನು ಆಕೆಯ ಲಿವ್-ಇನ್ ಪಾರ್ಟನರ್ ಅಫ್ತಾಬ್ ಪೂನಾವಾಲಾ ಅಮಾನುಷವಾಗಿ ಕೊಂದ ಪ್ರಕರಣವು ದೇಶವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ ಈ ಪ್ರಕರಣ ಮುನ್ನೆಲೆಗೆ ಬಂದಿದೆ. ಕಾಕತಾಳೀಯವಾಗಿ, ಶ್ರದ್ಧಾ ಮತ್ತು ಅಫ್ತಾಬ್ ಕೂಡ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅದಾದ ನಂತರ ಆತ ಆಕೆಯನ್ನು ಕೊಂದು ಆಕೆಯ ದೇಹವನ್ನು 35 ಭಾಗಗಳಾಗಿ ಕತ್ತರಿಸಿ, ಬಿಸಾಡಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Sun, 25 December 22

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ