Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಹೊಡೆದು ಕೊಂದ ಜನ

ವ್ಯಕ್ತಿಯೊಬ್ಬನನ್ನು ಕಳ್ಳತನದ ಆರೋಪದ ಮೇರೆಗೆ ರಸ್ತೆಯಲ್ಲೇ ಜನರು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳ್ಳತನ ಆರೋಪ ಹೊರಿಸಿ ಫಿರೋಜ್ ಖುರೇಷಿ ಎಂಬ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಥಳಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಹೊಡೆದು ಕೊಂದ ಜನ
ಪ್ರತಿಭಟನೆ
Follow us
ನಯನಾ ರಾಜೀವ್
|

Updated on: Jul 07, 2024 | 9:04 AM

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಜನರು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಕಳ್ಳತನ ಆರೋಪ ಹೊರಿಸಿ ಫಿರೋಜ್ ಖುರೇಷಿ ಎಂಬ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಥಳಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಫಿರೋಜ್ ಕೆಲಸದ ನಿಮಿತ್ತ ಗಂಗಾ ಗಂಗಾ ಆರ್ಯನಗರದ ಜಲಾಲಾಬಾದ್ ಪ್ರದೇಶಕ್ಕೆ ಹೋಗಿದ್ದಾಗ ಪಿಂಕಿ ಮತ್ತು ಪಂಕಜ್ ರಾಜೇಂದ್ರ ಎಂಬುವವರು ಅವರ ಮೇಲೆ ಕಳ್ಳತನದ ಆರೋಪ ಹೊರಿಸಿದ್ದರು.

ಕೆಲ ಸ್ಥಳೀಯರು ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಫಿರೋಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ ಅವರನ್ನು ಗುಂಪೊಂದು ಥಳಿಸಿತು ಮತ್ತು ತೀವ್ರವಾಗಿ ಗಾಯಗೊಂಡಿದ್ದರು. ಫಿರೋಜ್ ಯಾವುದೇ ಕ್ರಿಮಿನಲ್ ದಾಖಲೆಯಿಲ್ಲದ ಸ್ಕ್ರ್ಯಾಪ್ ವರ್ಕರ್ ಆಗಿದ್ದರು.

ಆದರೂ ಯಾಕೆ ಕೊಲೆ ಮಾಡಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ನಂತರ ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಲಾಗಿದೆ.

ಮತ್ತಷ್ಟು ಓದಿ: ಉಡುಪಿ: ಕಳ್ಳತನ ಮಾಡ್ತಿದ್ದಾಗಲೇ ಸಿಕ್ಕಿಬಿದ್ದ ಕಳ್ಳ; ಮುಂದೇನಾಯ್ತು?

ಜನರು ಫಿರೋಜ್‌ನನ್ನು ಕೊಲ್ಲುವ ಉದ್ದೇಶವನ್ನು ಹೊಂದಿರಲಿಲ್ಲ, ಆದರೆ ಕಳ್ಳ ತಪ್ಪಿಸಿಕೊಂಡು ಹೋಗಬಹುದು ಎಂದು ಎನ್ನುವ ಕಾರಣಕ್ಕೆ ಥಳಿಸಲಾಗಿದೆ ಎಂದು ತಿಳಿಸಿದ್ದಾರೆ. ಜಲಾಲಾಬಾದ್‌ನ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಮುಸ್ಲಿಂ ನಿವಾಸಿಗಳು ಫಿರೋಜ್‌ನ ಮೃತದೇಹದೊಂದಿಗೆ ಪೊಲೀಸ್ ಠಾಣೆಗೆ ಜಮಾಯಿಸಿ ಪಿಂಕಿ, ಪಂಕಜ್, ರಾಜೇಂದ್ರ ಮತ್ತು ಅವರ ಸಹಚರರ ವಿರುದ್ಧ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಬೇಕೆಂದು ಒತ್ತಾಯಿಸಿದರು.

ಮರಣೋತ್ತರ ಪರೀಕ್ಷೆಯನ್ನು ಮಾಡಿ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ