Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ತನಗೆ ಪರಿಚಯವಿರುವ ಮಗುವಿಗೆ ಚಾಕೊಲೇಟ್ ನೀಡುವ ಆಸೆ ತೋರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಆತನ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಬಳಿಕ ಆತ ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದಾನೆ, ಬಾಲಕಿ ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ಆತ ಬಂದು ಚಾಕೊಲೇಟ್ ನೀಡುವುದಾಗಿ ಹೇಳಿದ್ದಾನೆ.

ಉತ್ತರ ಪ್ರದೇಶ: 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
ಬಾಲಕಿ-ಸಾಂದರ್ಭಿಕ ಚಿತ್ರImage Credit source: Kids Health
Follow us
ನಯನಾ ರಾಜೀವ್
|

Updated on: Jan 28, 2025 | 2:55 PM

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ಆರೋಪಿ ಕುಂದನ್ ಕಶ್ಯಪ್ ಲಕ್ನೋ ಜಿಲ್ಲೆಯ ಇಂದಿರಾ ನಗರದ ನಿವಾಸಿ. ಆರೋಪಿ ತನಗೆ ಪರಿಚಯವಿರುವ ಮಗುವಿಗೆ ಚಾಕೊಲೇಟ್ ನೀಡುವ ಆಸೆ ತೋರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆತನ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಬಳಿಕ ಆತ ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದಾನೆ, ಬಾಲಕಿ ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ಆತ ಬಂದು ಚಾಕೊಲೇಟ್ ನೀಡುವುದಾಗಿ ಹೇಳಿದ್ದಾನೆ. ಆಗ ಮಗು ಆತನನ್ನು ನಂಬಿ ಹೋಗಿದೆ, ಆಗ ಪುಟ್ಟ ಮಗು ಎಂದೂ ನೋಡದೆ ಅತ್ಯಾಚಾರವೆಸಗಿದ್ದಾನೆ. ಇದಾದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೂಡ ಆತನ ಹುಡುಕಾಟಕ್ಕೆ ಮುಂದಾಗಿದ್ದಾರೆ, ಬಳಿಕ ಆತ ಓಡಿ ಹೋಗಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ.

ಮತ್ತೊಂದು ಘಟನೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ಈ ಕುರಿತು ಪೋಷಕರಿಗೆ ತಿಳಿಸಿದಾಗ ಎಲ್ಲರೂ ಸೇರಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿರೌಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಎಚ್‌ಒ) ಪ್ರಯಾಗ್‌ರಾಜ್ ಸಿಂಗ್ ತಿಳಿಸಿದ್ದಾರೆ. ಭಾನುವಾರ ಸಿರೌಲಿ ಪಟ್ಟಣದ ತನ್ನ ಮನೆಯಲ್ಲಿ ಹಸುವಿಗೆ ನೀರು ಕೊಡುತ್ತಿದ್ದಾಗ ಆರೋಪಿಗಳು ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದರು.

ಮತ್ತಷ್ಟು ಓದಿ: ಪೋಷಕರೇ ಎಚ್ಚರ: ಬೆಳಗಾವಿಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ!

ಬಾಲಕಿ ಕೂಗಿಕೊಂಡಾಗ ಬಾಯಿಗೆ ಬಟ್ಟೆ ಹಾಕಿ ಕೆಳಗ್ಗೆ ಎಸೆದಿದ್ದಾನೆ, ಗಲಾಟೆ ಕೇಳಿದ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಮುಜಾಫರ್‌ನಗರದಲ್ಲಿ ಸೋಮವಾರ ಕೆಫೆಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ಕುಟುಂಬದವರು ಆರೋಪಿಗಳಾದ ವಿಶಾಲ್, ಆತನ ಸ್ನೇಹಿತ ಅಂಕಿತ್ ಮತ್ತು ಕೆಫೆ ಮಾಲೀಕ ಅಕ್ಷಯ್ ಶರ್ಮಾ ವಿರುದ್ಧ ದೂರು ದಾಖಲಿಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಆಫೀಸರ್ ರೂಪಾಲಿ ರಾವ್ ಹೇಳಿದ್ದಾರೆ.

10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಕೆಫೆಗೆ ಕರೆಸಿಕೊಂಡು ವಿಶಾಲ್ ಮತ್ತು ಅಂಕಿತ್ ಅತ್ಯಾಚಾರವೆಸಗಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ