Uttar Pradesh: ಹೆದ್ದಾರಿಯಲ್ಲಿ ಕಾರಿನಲ್ಲಿ ಹೋಗುತ್ತಿರುವಾಗಲೇ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಲಖಿಂಪುರ ಖೇರಿಯ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Uttar Pradesh: ಹೆದ್ದಾರಿಯಲ್ಲಿ ಕಾರಿನಲ್ಲಿ ಹೋಗುತ್ತಿರುವಾಗಲೇ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಫೈರಿಂಗ್
Image Credit source: kalinga TV

Updated on: Jul 12, 2023 | 9:18 AM

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಲಖಿಂಪುರ ಖೇರಿಯ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಅಂಕಿತ್ ಶ್ರೀವಾಸ್ತವ ಅವರು ತಮ್ಮ ಬಲೆನೊ ಕಾರಿನಲ್ಲಿ ಲಖಿಂಪುರದಿಂದ ಲಖನೌಗೆ ಚಲಾಯಿಸುತ್ತಿದ್ದಾಗ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಬಲೆನೊ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹಳ್ಳಕ್ಕೆ ಹಾರಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳೀಯ ಪೊಲೀಸರು ವಿಧಿವಿಜ್ಞಾನ ತಂಡದೊಂದಿಗೆ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮತ್ತಷ್ಟು ಓದಿ: ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

ಅಂಕಿತ್ ಮೃತದೇಹವನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
ಕ್ರೇನ್ ಸಹಾಯದಿಂದ ಕಾರನ್ನು ಯಶಸ್ವಿಯಾಗಿ ಹಳ್ಳದಿಂದ ಹೊರತೆಗೆಯಲಾಯಿತು. ವಾಹನ ಮತ್ತು ದೇಹವನ್ನು ವಶಕ್ಕೆ ಪಡೆದು, ಪೊಲೀಸರು ಘಟನೆಯ ತನಿಖೆಯನ್ನು ಪ್ರಾರಂಭಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us