AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಸಚಿವ ವಿಜಯ್​ ಕಶ್ಯಪ್​ ಕೊರೊನಾ ಸೋಂಕಿನಿಂದ ವಿಧಿವಶ

ಉತ್ತರ ಪ್ರದೇಶದ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್​ ಕಶ್ಯಪ್​ ಅವರು ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ.

ಉತ್ತರ ಪ್ರದೇಶ ಸಚಿವ ವಿಜಯ್​ ಕಶ್ಯಪ್​ ಕೊರೊನಾ ಸೋಂಕಿನಿಂದ ವಿಧಿವಶ
ಸಚಿವ ವಿಜಯ್​ ಕಶ್ಯಪ್
shruti hegde
|

Updated on:May 19, 2021 | 11:48 AM

Share

ಲಕ್ನೋ: ಉತ್ತರ ಪ್ರದೇಶದ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್​ ಕಶ್ಯಪ್​ ಅವರು ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ. ವಿಜಯ್​ ಕಶ್ಯಪ್​ ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ದೇಹ ಸ್ಪಂದಿಸದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. 

ವಿಜಯ್​ ಕಶ್ಯಪ್​ ಅವರ ಸಾವಿನ ಸುದ್ದಿ ಕೇಳಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ‘ಬಿಜೆಪಿ ಮುಖಂಡ ಮತ್ತು ಉತ್ತರ ಪ್ರದೇಶ ಸಚಿವ ವಿಜಯ್​ ಕಶ್ಯಪ್​ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಸಾರ್ವಜನಿಕರಿಗಾಗಿ ತಮ್ಮ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್​ ಮಾಡಿದ್ದಾರೆ. ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಧ ಮೋಹನ್​ ಸಿಂಗ್​ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಂತ್ರಿ ಯೋಗಿ ಆದಿತ್ಯನಾಥ್​ ಅವರ ಸಂಪುಟದಲ್ಲಿ ವಿಜಯ್​ ಕಶ್ಯಪ್​ ಅವರು ಕಂದಾಯ ಹಾಗೂ ಆಹಾರ ಪೂರೈಕೆ ಸಚಿವರಾಗಿದ್ದರು. ಉತ್ತರ ಪ್ರದೇಶದಲ್ಲಿ ಈ ವರ್ಷದ ಆರಂಭದಿಂದ 5 ಶಾಸಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ವಿಜಯ್​ ಕಶ್ಯಪ್​ ಅವರಿಗಿಂತ ಮುಂಚೆ ಮುನ್ನ ದಾಲ್​ ಬಹದ್ದೂರ್​ ಕೌರಿ, ಕೇಸರ್​ ಸಿಂಗ್​, ರಮೇಶ್​ ದಿವಾಕರ್​, ಸುರೇಶ್​ ಕುಮಾರ್​ ಶ್ರೀವಾಸ್ತವ್​ ಅವರು ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಚಿತ್ರಕೂಟ ಜೈಲಿನಲ್ಲಿ ರಕ್ತಪಾತ; ಮೂವರು ಕುಖ್ಯಾತ ಪಾತಕಿಗಳು ಗುಂಡಿಗೆ ಆಹುತಿ

Published On - 11:30 am, Wed, 19 May 21

Follow Us
shruti hegde
shruti hegde
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ