ಉತ್ತರ ಪ್ರದೇಶ: ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೆಟ್ರೋ ಸೇತುವೆ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯನ್ನು ಮೆಟ್ರೋ ಸೇತುವೆ ಕೆಳಗೆ ಎಸೆದು ಹೋಗಿದ್ದರು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಲಕ್ನೋದ ಆಲಂಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೆಲವು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿ ಅಲ್ಲಿಯೇ ಎಸೆದು ಹೋಗಿದ್ದರು.

ಲಕ್ನೋ, ಜೂನ್ 06: ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶ(UttarPradesh)ದ ಲಕ್ನೋದಲ್ಲಿ ನಡೆದಿದೆ. ಬಾಲಕಿಯನ್ನು ಮೆಟ್ರೋ ಸೇತುವೆ ಕೆಳಗೆ ಎಸೆದು ಹೋಗಿದ್ದರು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲಕ್ನೋದ ಆಲಂಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೆಲವು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿ ಅಲ್ಲಿಯೇ ಎಸೆದು ಹೋಗಿದ್ದರು. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ವಿಭಾಗಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆ ಬಾಲಕಿ ಪೋಷಕರೊಂದಿಗೆ ಚಂದಾನಗರ ಮೆಟ್ರೋ ನಿಲ್ದಾಣದಲ್ಲಿ ಬಳಿ ವಾಸವಾಗಿದ್ದಳು. ಬೆಳಗ್ಗೆ ಪೋಷಕರಿಗೆ ಮಗಳು ಎಲ್ಲೂ ಕಾಣದ ಹಿನ್ನೆಲೆ ಹುಡುಕಲು ಪ್ರಾರಂಭಿಸಿದ್ದರು. ಸ್ವಲ್ಪ ಸಮಯದ ನಂತರ ಅಮಾಯಕ ಬಾಲಕಿ ಮೆಟ್ರೋ ಸೇತುವೆಯ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಪೋಷಕರು ಬಾಲಕಿಯನ್ನು ಲೋಕಬಂಧು ಆಸ್ಪತ್ರೆಗೆ ಕರೆದೊಯ್ದು ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ಆಶಿಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ, ಮಗುವಿನ ಭದ್ರತೆಗಾಗಿ ಆಸ್ಪತ್ರೆಗೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ.ಕರಣ ದಾಖಲಾದ ನಂತರ ಪೊಲೀಸರು ತನಿಖೆ ಆರಂಭಿಸಿದರು. ಐದು ತಂಡಗಳನ್ನು ನಿಯೋಜಿಸಲಾಗಿದೆ. ಅಪರಾಧಿಗಳನ್ನು ಹುಡುಕಲು ನಾವು ಕೆಲಸ ಮಾಡುತ್ತಿದ್ದೇವೆ. ಆಸ್ಪತ್ರೆಯಲ್ಲಿ ಮಗುವಿನೊಂದಿಗೆ ನಮ್ಮ ತಂಡದ ಸದಸ್ಯರು ಸಹ ಇದ್ದಾರೆ ಎಂದು ಹೇಳಿದ್ದಾರೆ. ವಿಧಿವಿಜ್ಞಾನ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಲು ಸ್ಥಳಕ್ಕೆ ತಲುಪಿವೆ. ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಮತ್ತಷ್ಟು ಓದಿ: ಮನೆ ಮಾಲೀಕಳ ಬೆರಳು ಕಚ್ಚಿ ತುಂಡು ಮಾಡಿದ ಹೈದರಾಬಾದ್ ವ್ಯಕ್ತಿ
ಮತ್ತೊಂದು ಸುದ್ದಿ ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಮಹಪ್ಯೂಸ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆಯಾಗಿದ್ದಾನೆ. ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು.
ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ