Mulayam Singh Yadav ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಐಸಿಯುಗೆ ದಾಖಲು

| Updated By: ರಶ್ಮಿ ಕಲ್ಲಕಟ್ಟ

Updated on: Oct 02, 2022 | 5:37 PM

ಮುಲಾಯಂ ಸಿಂಗ್ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ

Mulayam Singh Yadav ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಐಸಿಯುಗೆ ದಾಖಲು
ಮುಲಾಯಂ ಸಿಂಗ್ ಯಾದವ್
Follow us on

ಉತ್ತರ ಪ್ರದೇಶದ  (Uttar Pradesh)ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ( Samajwadi Party) ಹಿರಿಯ ನಾಯ ಮುಲಾಯಂ ಸಿಂಗ್ ಯಾದವ್ (Mulayam Singh Yadav )ಅವರ ಆರೋಗ್ಯ ಹದಗೆಟ್ಟಿದ್ದು ಅವರನ್ನು ಹರ್ಯಾಣದ   ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.  ಯಾದವ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಸಿಂಗ್ ಅವರ ಆರೋಗ್ಯ ಸ್ಥಿತಿ  ಗಂಭೀರವಾಗಿದೆ ಎಂದು  ವೈದ್ಯರು ಹೇಳಿರುವುದಾಗಿ ಬಲ್ಲಮೂಲಗಳು ವರದಿ ಮಾಡಿವೆ. ಕೆಲವು ತಿಂಗಳಿನಿಂದ ಹಲವಾರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ. ಮಗ  ಅಖಿಲೇಶ್ ಯಾದವ್ ಅವರು ದೆಹಲಿಗೆ ಹೊರಟಿದ್ದು, ಶಿವಪಾಲ್ ಯಾದವ್ ದೆಹಲಿಯಲ್ಲೇ ಇದ್ದಾರೆ. ಇವರು ಇಂದು ದೆಹಲಿಯಿಂದ ಗುರುಗ್ರಾಮಕ್ಕೆ ಹೊರಡಲಿದ್ದಾರೆ. ಕೆಲವು ವಾರಗಳ ಹಿಂದೆ ಮುಲಾಯಂ ಸಿಂಗ್ ಯಾದವ್ ಅವರು ಕೆಲವು ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದಿದ್ದರು. ಆರೋಗ್ಯ ಸ್ಥಿತಿ ಸುಧಾರಿಸಿದ  ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಪ್ರಸ್ತುತ ಇಂಟರ್ನಲ್ ಮೆಡಿಸಿನ್ ತಜ್ಞ ಡಾ ಸುಶೀಲಾ ಕಟಾರಿಯಾ ಅವರ ಮೇಲ್ವಿಚಾರಣೆಯಲ್ಲಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಜಿ ಮತ್ತು ಅವರ ಕುಟುಂಬಕ್ಕೆ ನನ್ನ ಪ್ರಾರ್ಥನೆ ಮತ್ತು ಹಾರೈಕೆಗಳು.  ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಜೈ ಹಿಂದ್ ಟ್ವೀಟ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿರುವ ಮುಲಾಯಂ ಸಿಂಗ್ ಯಾದವ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮತ್ತು ಭಾರತದ ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 82 ವರ್ಷದ ರಾಜಕಾರಣಿಯ ಆರೋಗ್ಯದ ಕುರಿತು ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಲಾಗಿತ್ತಿದೆ.

Published On - 4:52 pm, Sun, 2 October 22