ಜಾಮೀನಿನ ಮೇಲೆ ಹೊರ ಬಂದು ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆರೋಪಿ ಆತ್ಮಹತ್ಯೆ

|

Updated on: Nov 06, 2024 | 8:06 AM

ಜಾಮೀನಿನ ಮೇಲೆ ಹೊರಬಂದಿದ್ದ ಕೊಲೆ ಪ್ರಕರಣದ ಆರೋಪಿ, ಪತ್ನಿ, ಮೂವರು ಮಕ್ಕಳನ್ನು ಕೊಲೆ ಮಾಡಿದ್ದು, ಕೊನೆಗೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.

ಜಾಮೀನಿನ ಮೇಲೆ ಹೊರ ಬಂದು ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆರೋಪಿ ಆತ್ಮಹತ್ಯೆ
Image Credit source: India TV
Follow us on

ಜಾಮೀನಿನ ಮೇಲೆ ಹೊರಬಂದಿದ್ದ ಕೊಲೆ ಪ್ರಕರಣದ ಆರೋಪಿ, ಪತ್ನಿ, ಮೂವರು ಮಕ್ಕಳನ್ನು ಕೊಲೆ ಮಾಡಿದ್ದು, ಕೊನೆಗೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.

ಭೈದಾನಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಆರೋಪಿ ರಾಜೇಂದ್ರ ಗುಪ್ತಾ (45) ತನ್ನ ಪತ್ನಿ ನೀತು ಗುಪ್ತಾ (43), ಅವರ ಮಕ್ಕಳಾದ ನವೇಂದ್ರ (25) ಮತ್ತು ಸುಬೇಂದ್ರ (15) ಮತ್ತು ಪುತ್ರಿ ಗೌರಂಗಿ(16) ಅವರು ಮಲಗಿದ್ದಾಗ ಗುಂಡಿಕ್ಕಿ ಗುಂಡಿಕ್ಕಿ ಕೊಂದಿದ್ದಾರೆ.

ಘಟನೆ ಬಳಿಕ ಮನೆ ಬಿಟ್ಟು ಹೋಗಿದ್ದರು, ಬಳಿಕ ನಗರದ ರೊಹನಿಯಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಪತ್ನಿ ಹಾಗೂ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: ತಮಿಳುನಾಡು: ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ

ರಾಜೇಂದ್ರ ಗುಪ್ತಾ ಅವರ ತಾಯಿ, ದಂಪತಿ ಪದೇ ಪದೇ ಜಗಳವಾಡುತ್ತಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ರಾಜೇಂದ್ರ ವಿರುದ್ಧ 1997 ರಿಂದ ಕೊಲೆ ಪ್ರಕರಣವಿದ್ದು, ಜಾಮೀನಿನ ಮೇಲೆ ಹೊರಬಂದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಆತ್ಮಹತ್ಯೆಯೋ ಎಂಬುದರ ತನಿಖೆ ನಡೆಯುತ್ತಿದೆ.

ಬೆಳಗಾವಿ: ತಹಶೀಲ್ದಾರ್​ ಕಚೇರಿಯಲ್ಲೇ ಎಸ್​ಡಿಎ ರುದ್ರಣ್ಣ ಆತ್ಮಹತ್ಯೆ
ತಹಶೀಲ್ದಾರ್ (Tehsildar)​ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು (SDA) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಬೆಳಗಾವಿ ತಹಶೀಲ್ದಾರ್​ ಬಸವರಾಜ ನಾಗರಾಳ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ್ (35) ನೇಣಿಗೆ ಶರಣಾಗಿದ್ದಾರೆ. ರುದ್ರಣ್ಣ ಯಡವಣ್ಣವರ್ ಅವರನ್ನು ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಬೆಳಗಾವಿ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೋಮವಾರ (ನ.05) ಆದೇಶ ಹೊರಡಿಸಿದ್ದರು.

ರುದ್ರಣ್ಣ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರುದ್ರಣ್ಣ ಅವರ ಪತ್ನಿ ಗಿರಿಜಾ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಎಫ್​ಎಸ್​​ಎಲ್​ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ