Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವ ಅತ್ಯಾಚಾರ ಮಾಡಿದ್ದಾನೆಂದು ಗಂಡನ ಬಳಿ ಹೇಳಿಕೊಂಡ್ರೆ, ನೀನು ನನ್ನ ಪತ್ನಿಯೇ ಅಲ್ಲ ಎಂದ

ಗಂಡನ ಬಳಿ ಬಾವ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆಂದು ಹೇಳಿಕೊಂಡರೆ ಆ ವ್ಯಕ್ತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ

ಬಾವ ಅತ್ಯಾಚಾರ ಮಾಡಿದ್ದಾನೆಂದು ಗಂಡನ ಬಳಿ ಹೇಳಿಕೊಂಡ್ರೆ, ನೀನು ನನ್ನ ಪತ್ನಿಯೇ ಅಲ್ಲ ಎಂದ
Follow us
ನಯನಾ ರಾಜೀವ್
|

Updated on: Apr 28, 2024 | 11:10 AM

ಮಹಿಳೆಯೊಬ್ಬಳು ತನ್ನ ಪತಿ ಬಳಿ ಹೋಗಿ ನೀವಿಲ್ಲದಿರುವಾಗ ಬಾವ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಹೇಳಿಕೊಂಡರೆ ಗಂಡನೊಬ್ಬ ನೀನು ನನ್ನ ಪತ್ನಿಯೇ ಅಲ್ಲ ಎಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅಣ್ಣನಿಲ್ಲದಿರುವ ಸಮಯ ನೋಡಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿದ್ದ ಬಳಿಕ ಆಕೆ ನಡೆದಿದ್ದನ್ನು ಗಂಡನ ಬಳಿ ಹೇಳಿದಾಗ ಆತ ನೀನು ನನ್ನ ಪತ್ನಿಯೇ ಅಲ್ಲ ಎಂದು ಹೇಳಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಆಕೆಯ ಪತಿ ಹಾಗೂ ಬಾವ ಇಬ್ಬರೂ ಕೋಣೆಗೆ ಬಂದು ದುಪಟ್ಟಾದಿಂದ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಅಷ್ಟೇ ಅಲ್ಲದೆ ಘಟನೆಯನ್ನು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿದ್ದಾರೆ. ಮಹಿಳೆ ವಿಡಿಯೋವನ್ನು ಹಂಚಿಕೊಂಡ ನಂತರ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಲಿಖಿತ ದೂರಿನ ನಂತರ ಪೊಲೀಸರು ಘಟನೆಯನ್ನು ಗಮನಿಸಿದ್ದಾರೆ.

ಆರೋಪಿ ಪತಿ ಮತ್ತು ಬಾವನ ವಿರುದ್ಧ ಖತೌಲಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) 376 (ಅತ್ಯಾಚಾರ), 307 (ಕೊಲೆಗೆ ಯತ್ನ), ಮತ್ತು 328 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ:ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಆರೋಪಿಗಳಿಬ್ಬರನ್ನೂ ಬಂಧಿಸುವ ಪ್ರಯತ್ನ ನಡೆಯುತ್ತಿದ್ದು, ಶೀಘ್ರವೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ