AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50ವರ್ಷದ ಮಹಿಳೆಗೆ ಒಟ್ಟಿಗೇ 2 ಡೋಸ್​ ಲಸಿಕೆ ನೀಡಿದ ನರ್ಸ್​; ಯಾಕೆ ಅಂತ ಕೇಳಿದ್ರೆ ತಿರುಗಿ ಬಯ್ಯೋದು ಬೇರೆ !

ವಿಷಯ ತಿಳಿದು ಸ್ಥಳಕ್ಕೆ ಬಂದ ಮಹಿಳೆಯ ಕುಟುಂಬದವರು ತುಂಬ ಗಲಾಟೆ ಮಾಡಿದ್ದಾರೆ. ನಂತರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಜಿಲ್ಲಾಧಿಕಾರಿಗೂ ವಿಷಯ ತಿಳಿಸಲಾಗಿದೆ. ಈ ಮಧ್ಯೆ ಕಮಲೇಶ್ವರಿ ಕೈಯಿ ಸ್ವಲ್ಪ ಪ್ರಮಾಣದಲ್ಲಿ ಊದಿಕೊಂಡಿದೆ.

50ವರ್ಷದ ಮಹಿಳೆಗೆ ಒಟ್ಟಿಗೇ 2 ಡೋಸ್​ ಲಸಿಕೆ ನೀಡಿದ ನರ್ಸ್​; ಯಾಕೆ ಅಂತ ಕೇಳಿದ್ರೆ ತಿರುಗಿ ಬಯ್ಯೋದು ಬೇರೆ !
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 03, 2021 | 7:32 PM

Share

ಲಖನೌ: ಉತ್ತರ ಪ್ರದೇಶದಲ್ಲಿ ನರ್ಸ್​ ಒಬ್ಬರು ಮಹಿಳೆಗೆ ಲಸಿಕೆ ನೀಡುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. ಫೋನ್​ನಲ್ಲಿ ಮಾತನಾಡುತ್ತ ಇತ್ತ ಮಹಿಳೆಗೆ ಎರಡು ಡೋಸ್​ ಲಸಿಕೆ ನೀಡಿದ್ದಾಳೆ. ಅಷ್ಟೇ ಅಲ್ಲ, ಎರಡು ಬಾರಿ ಇಂಜೆಕ್ಷನ್ ಯಾಕೆ ಕೊಟ್ಟಿರಿ ಎಂದು ಪ್ರಶ್ನಿಸಿದ್ದಕ್ಕೆ, ಆ ಮಹಿಳೆ ವಿರುದ್ಧವೇ ತಿರುಗಿಬಿದ್ದಿದ್ದಾಳೆ. ಘಟನೆ ನಡೆದದ್ದು ಕಾನ್ಪುರ ದೇಹಟ್​ ಜಿಲ್ಲೆಯ ಅಕ್ಬರ್​ಪುರ ಏರಿಯಾದಲ್ಲಿ ಎಂದು ಪಿಟಿಐ ವರದಿ ಮಾಡಿದೆ.

ಇಂದು ಕಮಲೇಶ್ ಕುಮಾರಿ(50) ಲಸಿಕೆ ಪಡೆಯಲು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ನಿಯಮದ ಪ್ರಕಾರ ಅವರಿಗೆ ಇಂದು ಒಂದು ಡೋಸ್​ ಲಸಿಕೆ ಕೊಟ್ಟು, 28ದಿನಗಳ ಬಳಿಕೆ ಇನ್ನೊಂದು ಡೋಸ್​ ನೀಡಬೇಕಿತ್ತು. ಆದರೆ ಇವರಿಗೆ ಲಸಿಕೆ ನೀಡುತ್ತಿದ್ದ ನರ್ಸ್ ನಿರ್ಲಕ್ಷ್ಯದಿಂದ ಒಂದೇ ಬಾರಿಗೆ ಎರಡು ಡೋಸ್ ಪಡೆಯುವಂತಾಗಿದೆ. ಫೋನ್​ನಲ್ಲಿ ಮಾತನಾಡುತ್ತಿದ್ದ ನರ್ಸ್ ಎರಡು ಬಾರಿ ಇಂಜೆಕ್ಟ್​ ಮಾಡಿದ್ದಾಳೆ.

ಗಲಾಟೆ ಮಾಡಿದ ಕುಟುಂಬದವರು ವಿಷಯ ತಿಳಿದು ಸ್ಥಳಕ್ಕೆ ಬಂದ ಮಹಿಳೆಯ ಕುಟುಂಬದವರು ತುಂಬ ಗಲಾಟೆ ಮಾಡಿದ್ದಾರೆ. ನಂತರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಜಿಲ್ಲಾಧಿಕಾರಿಗೂ ವಿಷಯ ತಿಳಿಸಲಾಗಿದೆ. ಈ ಮಧ್ಯೆ ಕಮಲೇಶ್ವರಿ ಕೈಯಿ ಸ್ವಲ್ಪ ಪ್ರಮಾಣದಲ್ಲಿ ಊದಿಕೊಂಡಿದೆ ಎಂದು ಮನೆಯವರು ಆರೋಪ ಮಾಡಿದ್ದಾರೆ. ಅದನ್ನು ಬಿಟ್ಟರೆ ದೊಡ್ಡ ಪ್ರಮಾಣದಲ್ಲಿ ಯಾವುದೇ ರಿಯಾಕ್ಷನ್ ಆಗಿಲ್ಲ ಎಂದು ಹೇಳಲಾಗಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನರ್ಸ್ ಮಾಡಿದ್ದು ತಪ್ಪು. ಹಾಗಾಗಿ ಸ್ವಯಂ ಪ್ರೇರಿತವಾಗಿ ತನಿಖೆಗೆ ಎತ್ತಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ಪ್ರತಾಪ್​ ಸಿಂಗ್ ಹೇಳಿದ್ದಾರೆ. ವಾಸ್ತವ ವರದಿಯನ್ನು ಸಲ್ಲಿಸುವಂತೆ ಮುಖ್ಯ ವೈದ್ಯಾಧಿಕಾರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ರೋಚಕ ತಿರುವು; ಸಿಡಿ ಬಿಡುಗಡೆಗೂ ಮುನ್ನ ಯುವತಿ ಜತೆ ಹಣಕಾಸು ವ್ಯವಹಾರ ನಡೆಸಿದ್ದ ಮಾಜಿ ಸಚಿವ ಡಿ.ಸುಧಾಕರ್​?

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ; ಯೋಜನೆಗಳು, ಅಸಮಾಧಾನ, ಸೋನಿಯಾ ಗಾಂಧಿ ಪತ್ರದ ಬಗ್ಗೆ ಚರ್ಚೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್