ಲಕ್ನೋಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆ
ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆಸಿಫುಲ್ಲಾ ಅನ್ಸಾರಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 8.10 ಕ್ಕೆ ವಿಮಾನ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿತ್ತು, ಸಿಬ್ಬಂದಿ ಪ್ರಯಾಣಿಕರನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ವಿಮಾನದಲ್ಲಿದ್ದ ವೈದ್ಯರು ಪ್ರಯಾಣಿಕನನ್ನು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಲಕ್ನೋ, ಮಾರ್ಚ್ 21: ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆಸಿಫುಲ್ಲಾ ಅನ್ಸಾರಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 8.10 ಕ್ಕೆ ವಿಮಾನ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿತ್ತು, ಸಿಬ್ಬಂದಿ ಪ್ರಯಾಣಿಕರನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ವಿಮಾನದಲ್ಲಿದ್ದ ವೈದ್ಯರು ಪ್ರಯಾಣಿಕನನ್ನು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಪ್ರಯಾಣಿಕ ತನ್ನ ಸೀಟ್ ಬೆಲ್ಟ್ ಅನ್ನು ಬಿಚ್ಚಿರಲಿಲ್ಲ, ವಿಮಾನ ಲಕ್ನೋಗೆ ಬರುವ ಮುನ್ನವೇ ಆತ ಸಾವನ್ನಪ್ಪಿರಬೇಕೆಂದು ವೈದ್ಯರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ. ಏತನ್ಮಧ್ಯೆ, ಪೊಲೀಸರು ಈ ಬಗ್ಗೆ ಸಮಗ್ರ ತನಿಖೆ ಆರಂಭಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಈ ಹಿಂದೆ ರಜಾದಿನಗಳನ್ನು ಕಳೆಯಲೆಂದು ಕತಾರ್‌ಗೆ ತೆರಳುತ್ತಿದ್ದ ಆಸ್ಟ್ರೇಲಿಯಾ ಮೂಲದ ದಂಪತಿಯು ವಿಮಾನದಲ್ಲಿ ಶವವೊಂದರ ಪಕ್ಕದಲ್ಲಿ ಕೂತು 4 ಗಂಟೆಕಾಲ ಪಯಣಿಸುವಂಥ ಪರಿಸ್ಥಿತಿ ಎದುರಿಸಿದ್ದರು.
ಮತ್ತಷ್ಟು ಓದಿ: ಬೆಂಗಳೂರು ಏರ್ಪೋರ್ಟ್ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ
ಆಸ್ಟ್ರೇಲಿಯಾದ ಮೆಲ್ಬೋರ್ನ್ನಿಂದ ಕತಾರ್‌ನ ದೋಹಾಗೆ ತೆರಳುತ್ತಿದ್ದ ವಿಮಾನದಲ್ಲಿ ಮಿಚೆಲ್ ರಿಂಗ್ ಹಾಗೂ ಜೆನಿಫರ್ ಕಾಲಿನ್ ದಂಪತಿ ಪಯಣಿಸುತ್ತಿದ್ದರು. ಮಾರ್ಗ ಮಧ್ಯದಲ್ಲೇ ವಿಮಾನದಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದರು. ಮಹಿಳೆಯ ಶವವನ್ನು ಸಿಬ್ಬಂದಿ ಬಟ್ಟೆಯಲ್ಲಿ ಸುತ್ತಿ, ಮಿಚೆಲ್ ಕೂತಿದ್ದ ಪಕ್ಕದ ಆಸನದಲ್ಲೇ ತಂದು ಕೂರಿಸಿದ್ದಾರೆ. ಬಳಿಕ ಅಲ್ಲಿಂದ ಜಾಗ ಬದಲಿಸಲು ಕೂಡ ಮಿಚೆಲ್ ಅವಕಾಶ ನೀಡಿರಲಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:29 am, Fri, 21 March 25