500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ
ನೋಟುImage Credit source: India Today
Follow us
ನಯನಾ ರಾಜೀವ್
|

Updated on: Jun 30, 2023 | 8:21 AM

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕುಟುಂಬವು ಕಂತೆ ಕಂತೆ ನೋಟುಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಪರಿಣಾಮ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ.

ಪತ್ನಿ ಮತ್ತು ಮಕ್ಕಳು ತೆಗೆದ ಸೆಲ್ಫಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 500 ರೂಪಾಯಿ ನೋಟುಗಳ ಬಂಡಲ್‌ಗಳೊಂದಿಗೆ ಪೋಸ್ ನೀಡುತ್ತಿರುವುದನ್ನು ನೋಡಿದ ನಂತರ ಪೊಲೀಸರ ವಿರುದ್ಧ ತನಿಖೆ ಆರಂಭಿಸಲಾಗಿದೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಛಾಯಾಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪತ್ನಿ ಮತ್ತು ಇಬ್ಬರು ಮಕ್ಕಳು ಹಾಸಿಗೆಯ ಮೇಲೆ 14 ಲಕ್ಷ ರೂ. ನೋಟುಗಳನ್ನು ಹರಡಿಕೊಂಡು ಕುಳಿತಿರುವುದನ್ನು ಕಾಣಬಹುದು. ಠಾಣಾ ಉಸ್ತುವಾರಿ ರಮೇಶ್ ಚಂದ್ರ ಸಹಾನಿ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ.

ಮತ್ತಷ್ಟು ಓದಿ: 51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ರಮೇಶ್ ಚಂದ್ರ ಸಹಾನಿ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ಈ ಚಿತ್ರವನ್ನು ನವೆಂಬರ್ 14ರಂದ ಅವರು ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಬಂದ ಹಣದ ಚಿತ್ರ ಎಂದು ಹೇಳಿದ್ದಾರೆ.

ಘಟನೆಯ ವಿವರಗಳನ್ನು ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಠಾಣೆಯ ಅಧಿಕಾರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಇದು ಪೊಲೀಸರ ಹೆಂಡತಿ ಮತ್ತು ಅವರ ಮಕ್ಕಳನ್ನು ನೋಟುಗಳ ಬಂಡಲ್​ಗಳೊಂದಿಗೆ ಕುಳಿತಿರುವುದು ಕಾಣಿಸುತ್ತಿದೆ. ನಾವು ವಿಷಯದ ಬಗ್ಗೆ ಗಮನ ಹರಿಸಿದ್ದೇವೆ. ಅವರನ್ನು ವರ್ಗಾವಣೆ ಮಾಡಲಾಗಿದೆ, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್