500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ
ನೋಟು
Image Credit source: India Today

Updated on: Jun 30, 2023 | 8:21 AM

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕುಟುಂಬವು ಕಂತೆ ಕಂತೆ ನೋಟುಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಪರಿಣಾಮ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ.

ಪತ್ನಿ ಮತ್ತು ಮಕ್ಕಳು ತೆಗೆದ ಸೆಲ್ಫಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 500 ರೂಪಾಯಿ ನೋಟುಗಳ ಬಂಡಲ್‌ಗಳೊಂದಿಗೆ ಪೋಸ್ ನೀಡುತ್ತಿರುವುದನ್ನು ನೋಡಿದ ನಂತರ ಪೊಲೀಸರ ವಿರುದ್ಧ ತನಿಖೆ ಆರಂಭಿಸಲಾಗಿದೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಛಾಯಾಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪತ್ನಿ ಮತ್ತು ಇಬ್ಬರು ಮಕ್ಕಳು ಹಾಸಿಗೆಯ ಮೇಲೆ 14 ಲಕ್ಷ ರೂ. ನೋಟುಗಳನ್ನು ಹರಡಿಕೊಂಡು ಕುಳಿತಿರುವುದನ್ನು ಕಾಣಬಹುದು.
ಠಾಣಾ ಉಸ್ತುವಾರಿ ರಮೇಶ್ ಚಂದ್ರ ಸಹಾನಿ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ.

ಮತ್ತಷ್ಟು ಓದಿ: 51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ರಮೇಶ್ ಚಂದ್ರ ಸಹಾನಿ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ಈ ಚಿತ್ರವನ್ನು ನವೆಂಬರ್ 14ರಂದ ಅವರು ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಬಂದ ಹಣದ ಚಿತ್ರ ಎಂದು ಹೇಳಿದ್ದಾರೆ.

ಘಟನೆಯ ವಿವರಗಳನ್ನು ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಠಾಣೆಯ ಅಧಿಕಾರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಇದು ಪೊಲೀಸರ ಹೆಂಡತಿ ಮತ್ತು ಅವರ ಮಕ್ಕಳನ್ನು ನೋಟುಗಳ ಬಂಡಲ್​ಗಳೊಂದಿಗೆ ಕುಳಿತಿರುವುದು ಕಾಣಿಸುತ್ತಿದೆ. ನಾವು ವಿಷಯದ ಬಗ್ಗೆ ಗಮನ ಹರಿಸಿದ್ದೇವೆ. ಅವರನ್ನು ವರ್ಗಾವಣೆ ಮಾಡಲಾಗಿದೆ, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us