Uttar Pradesh: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿರುವ ಆರೋಪ, ಪೊಲೀಸ್ ಪೇದೆ ಅಮಾನತು

ಪೊಲೀಸ್ ಪೇದೆಯೊಬ್ಬರು ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಅಸಭ್ಯವಾಗಿ ನಡೆದುಕೊಂಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ಅವರನ್ನು ಅಮಾನತುಗೊಳಿಸಲಾಗಿದೆ.

Uttar Pradesh: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿರುವ ಆರೋಪ, ಪೊಲೀಸ್ ಪೇದೆ ಅಮಾನತು
ಶಹಾದತ್ ಅಲಿ

Updated on: May 04, 2023 | 12:47 PM

ಪೊಲೀಸ್ ಪೇದೆಯೊಬ್ಬರು ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಅಸಭ್ಯವಾಗಿ ನಡೆದುಕೊಂಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ಅವರನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಪೊಲೀಸ್ ಶಹಾದತ್ ಅಲಿ ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಿಕ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ.

ಟ್ವಿಟ್ಟರ್​ನಲ್ಲಿ ವೈರಲ್​ ಆದ ಈ ವಿಡಿಯೋ ಎಷ್ಟು ದಿನದ ಹಿಂದಿನದು ಎಂದು ತಿಳಿದಿಲ್ಲ. ಶಹದತ್ ಅಲಿ, ಖಾಕಿ ಸಮವಸ್ತ್ರವನ್ನು ಧರಿಸಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಾ, ಸೈಕಲ್‌ನಲ್ಲಿ ಹೋಗುತ್ತಿದ್ದ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಹಣೆಗೆ ಬಂದೂಕಿಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಪೊಲೀಸ್ ಹಾಗೂ ಅವರ ಸಹೋದರನ ವಿರುದ್ಧ ಪ್ರಕರಣ ದಾಖಲು

ಮತ್ತೊಬ್ಬ ಮಹಿಳೆ ವಿಡಿಯೋ ಮಾಡುತ್ತಾ ವ್ಯಕ್ತಿಯನ್ನು ಹಿಂಬಾಲಿಸಿದ್ದಾರೆ. ಆ ಮಹಿಳೆ ಸ್ವಲ್ಪ ಮುಂದೆ ಹೋಗಿ ಪೊಲೀಸ್ ಬಳಿ ಬೈಕ್​ನ ನಂಬರ್ ಕೇಳಿದ್ದಾರೆ, ಆದರೆ ಇದು ಎಲೆಕ್ಟ್ರಿಕ್​ ಬೈಕ್ ಇದಕ್ಕೆ ನಂಬರ್​ ಪ್ಲೇಟ್ ಇರುವುದಿಲ್ಲ ಎಂದು ಉತ್ತರ ನೀಡಿದ್ದರು.