AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯ ಹೆಸರಿನಲ್ಲಿ ವಂಚನೆ ಬಗ್ಗೆ ಎಚ್ಚರವಹಿಸಿ: ವಿಎಚ್​​ಪಿ

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿಸಿ ನಕಲಿ ಕ್ಯೂಆರ್ ಕೋಡ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಹಣ ವಸೂಲಿ ಮಾಡಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ನೀಡಲಾಗಿದೆ ಎಂದು ವಿಎಚ್‌ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯ ಹೆಸರಿನಲ್ಲಿ ವಂಚನೆ ಬಗ್ಗೆ ಎಚ್ಚರವಹಿಸಿ: ವಿಎಚ್​​ಪಿ
ಅಯೋಧ್ಯೆ ರಾಮಮಂದಿರ
ರಶ್ಮಿ ಕಲ್ಲಕಟ್ಟ
|

Updated on: Jan 01, 2024 | 1:48 PM

Share

ಅಯೋಧ್ಯೆ ಜನವರಿ 01: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ  (Ayodhya) ರಾಮ ಮಂದಿರ (Ram mandir) ಉದ್ಘಾಟನೆಗೆ ಇನ್ನೇನು ಕೆಲವೇ ವಾರಗಳು ಉಳಿದಿದ್ದು ದೇಗುಲ ನಿರ್ಮಾಣಕ್ಕೆ ಬೆಂಬಲ ನೀಡಲು ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಕೆಲವರು ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.ಈ ಹಗರಣ ಬಗ್ಗೆ ವಿಶ್ವ ಹಿಂದೂ ಪರಿಷತ್ (VHP) ಉತ್ತರ ಪ್ರದೇಶ ಪೊಲೀಸರಿಗೆ ದೂರು ನೀಡಿದೆ. ವಿಎಚ್‌ಪಿ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನೂ ನೀಡಿದ್ದು, ಜನರು ಈ ವಂಚನೆಗೆ ಬಲಿಯಾಗಬೇಡಿ ಎಂದು ಜನರಿಗೆ ಹೇಳಿದೆ.

ಎಚ್ಚರಿಕೆ..!! ಕೆಲ ವ್ಯಕ್ತಿಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ವಿಎಚ್‌ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ಈ ಸಂದರ್ಭಕ್ಕಾಗಿ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಂಬಿಕೆಯ ವಿಷಯದಲ್ಲಿ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಉತ್ತರ ಪ್ರದೇಶ ಡಿಜಿಪಿ ಮತ್ತು ಲಖನೌ ಐಜಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.

ವಿಎಚ್‌ಪಿ ವಕ್ತಾರರು ವಿಡಿಯೊ ಸಂದೇಶವನ್ನು ಸಹ ಬಿಡುಗಡೆ ಮಾಡಿದ್ದು, ದೇವಸ್ಥಾನಕ್ಕೆ ದೇಣಿಗೆಯ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡಲು ಯತ್ನಿಸುತ್ತಿರುವ ದಂಧೆಯ ಬಗ್ಗೆ ತಮಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿಸಿ ನಕಲಿ ಕ್ಯೂಆರ್ ಕೋಡ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಹಣ ವಸೂಲಿ ಮಾಡಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ನೀಡಲಾಗಿದೆ ಎಂದು ಬನ್ಸಾಲ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಯಾರಿಗೂ ಯಾವುದೇ ರೀತಿಯಲ್ಲಿ ಹಣ ಸಂಗ್ರಹ ಮಾಡುವ ಹಕ್ಕನ್ನು ನೀಡಿಲ್ಲ. ಇಂತಹ ಪ್ರಯತ್ನಗಳನ್ನು ಮಾಡುವವರು ಜನರನ್ನು ವಂಚಿಸಲು ಬಯಸುತ್ತಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತಕ್ಷಣವೇ ನಾನು ಗೃಹ ಸಚಿವಾಲಯ, ಡಿಜಿಪಿ ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ. ಜನರು ಕೂಡ ಜಾಗರೂಕರಾಗಿರಬೇಕು, ಇದು ಹಬ್ಬದ ಸಮಯ, ನಾವು ಆಹ್ವಾನಗಳನ್ನು ನೀಡಲಿದ್ದೇವೆ ಮತ್ತು ಯಾವುದೇ ರೀತಿಯ ದೇಣಿಗೆ ಅಥವಾ ಉಡುಗೊರೆಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ವಿಎಚ್​​ಪಿ ಪ್ರಕಾರ, ಅಭಿಷೇಕ್ ಕುಮಾರ್ ಎಂದು ಗುರುತಿಸಲಾದ ದುಷ್ಕರ್ಮಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಯೋಧ್ಯೆ ದೇವಾಲಯದ ಅಭಿವೃದ್ಧಿಗೆ ಹಣವನ್ನು ಕೇಳಿದ್ದಾರೆ.

“ಅವರು ಯುಪಿಐ ಕ್ಯೂಆರ್ ಕೋಡ್‌ಗಳನ್ನು ಫೇಸ್‌ಬುಕ್ ಗುಂಪುಗಳಲ್ಲಿ ‘ರಾಮ ಮಂದಿರ ಅಯೋಧ್ಯಾ ಚಂದಾ ಪ್ರದರ್ಶನ ಕರೇ’ ಎಂಬ ಬರಹದೊಂದಿಗೆ ಪೋಸ್ಟ್ ಮಾಡಿದ್ದಾರೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, UPI ಬಳಕೆದಾರರನ್ನು ಮನಿಶಾ ನಲ್ಲಬೆಲ್ಲಿ ಎಂಬ UPI ಐಡಿ ‘9040914736@Paytm’ ಗೆ ನಿರ್ದೇಶಿಸುತ್ತದೆ” ಎಂದು ವಿಎಚ್‌ಪಿ ಸದಸ್ಯ ಗಿರೀಶ್ ಭಾರದ್ವಾಜ್ ಉತ್ತರ ಪ್ರದೇಶ ಡಿಜಿಪಿ ಮತ್ತು ಐಜಿಗೆ ಪತ್ರ ಬರೆದಿದ್ದಾರೆ.

ಇದನ್ನೂ  ಓದಿ: ಅಯೋಧ್ಯೆ ರಾಮ ಮಂದಿರ, ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಅಥವಾ ಜನರಿಗೆ ದೇವಸ್ಥಾನಕ್ಕೆ ಹಣ ಸಂಗ್ರಹಿಸಲು ಅಧಿಕಾರವಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿರುವ ಟ್ರಸ್ಟ್ ಆಗಿದೆ.ಭಕ್ತರನ್ನು ವಂಚಿಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅಕ್ರಮವಾಗಿ ಹಣ ವಸೂಲಿ ಮಾಡುವ ದುರುದ್ದೇಶ ಕಾಣುತ್ತಿದೆ. ರಾಮಮಂದಿರ ಉದ್ಘಾಟನೆಗೆ ಇಡೀ ರಾಷ್ಟ್ರವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಇಂತಹ ಅವ್ಯವಹಾರಗಳನ್ನು ನಿಲ್ಲಿಸಬೇಕು. ನಿಮ್ಮ ಅವಗಾಹನೆಗಾಗಿ ನಾನು ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದೇನೆ. ದಯವಿಟ್ಟು ಅಗತ್ಯ ಕ್ರಮ ಕೈಗೊಳ್ಳಿ ಎಂದು ಭಾರದ್ವಾಜ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ