ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಭಾರತ್ ಜೋಡೋ ಯಾತ್ರೆಯ ಸಂಯೋಜಕ ಮತ್ತು ರಾಜೀವ್ ಗಾಂಧಿ ಪ್ರತಿಷ್ಠಾನದ ಸಿಇಒ ವಿಜಯ್ ಮಹಾಜನ್ ಅವರು ಸ್ಥಳೀಯ ಕಾಂಗ್ರೆಸ್​ ಮುಖಂಡರೊಂದಿಗೆ ಶ್ರೀರಾಮ ಮಂದಿರದ ಮುಖ್ಯ ಅರ್ಚಕರನ್ನು ಭೇಟಿ ಮಾಡಿದ್ದಾರೆ. ಮಾಹಿತಿ ಪ್ರಕಾರ ಈ ಸಭೆ ಒಂದು ವಾರದ ಹಿಂದೆ ನಡೆದಿದೆ, ಸಭೆಯಲ್ಲಿ ರಾಹುಲ್ ಗಾಂಧಿ ರಾಮಜನ್ಮಭೂಮಿ ಭೇಟಿಯ ಕುರಿತು ಚರ್ಚೆಗಳು ನಡೆದಿದೆ.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Sep 27, 2023 | 11:38 AM

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಭಾರತ್ ಜೋಡೋ ಯಾತ್ರೆಯ ಸಂಯೋಜಕ ಮತ್ತು ರಾಜೀವ್ ಗಾಂಧಿ ಪ್ರತಿಷ್ಠಾನದ ಸಿಇಒ ವಿಜಯ್ ಮಹಾಜನ್ ಅವರು ಸ್ಥಳೀಯ ಕಾಂಗ್ರೆಸ್​ ಮುಖಂಡರೊಂದಿಗೆ ಶ್ರೀರಾಮ ಮಂದಿರದ ಮುಖ್ಯ ಅರ್ಚಕರನ್ನು ಭೇಟಿ ಮಾಡಿದ್ದಾರೆ. ಮಾಹಿತಿ ಪ್ರಕಾರ ಈ ಸಭೆ ಒಂದು ವಾರದ ಹಿಂದೆ ನಡೆದಿದೆ, ಸಭೆಯಲ್ಲಿ ರಾಹುಲ್ ಗಾಂಧಿ ರಾಮಜನ್ಮಭೂಮಿ ಭೇಟಿಯ ಕುರಿತು ಚರ್ಚೆಗಳು ನಡೆದಿದೆ.

ದೇವಸ್ಥಾನದ ಗರ್ಭಗುಡಿಯ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮಮಂದಿರ ನಿರ್ಮಾಣದ ಹೊಸ ಚಿತ್ರಗಳನ್ನು ಬಿಡುಗಡೆ ಮಾಡಿದೆ. ರಾಮಮಂದಿರದ ಗರ್ಭಗುಡಿಯ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ. ಮೊದಲ ಮಹಡಿಯಲ್ಲಿ ಶೇ 50ರಷ್ಟು ಪಿಲ್ಲರ್‌ ಕಾಮಗಾರಿ ಪೂರ್ಣಗೊಂಡಿದೆ. ನವೆಂಬರ್ ವೇಳೆಗೆ ನೆಲಮಹಡಿ ಸಂಪೂರ್ಣವಾಗಿ ಸಿದ್ಧವಾಗಲಿದೆ.

ಜನವರಿಯಲ್ಲಿ ರಾಮಲಾಲರನ್ನು ಗರ್ಭಗುಡಿಯಲ್ಲಿ ಕೂರಿಸಲಾಗುವುದು ಎಂದು ಈ ಮೊದಲೇ ಹೇಳಲಾಗಿತ್ತು. ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಸೆಪ್ಟೆಂಬರ್ 29 ರಂದು ಅಯೋಧ್ಯೆಗೆ ಬರಲಿದ್ದಾರೆ. ರಾಮಲಲ್ಲಾ ದರ್ಶನ ಪಡೆದ ನಂತರ ಮಂದಿರ ನಿರ್ಮಾಣ ಕಾಮಗಾರಿಯ ಪ್ರಗತಿಯನ್ನೂ ನೋಡಲಿದ್ದಾರೆ.

ಆಚಾರ್ಯ ಸತ್ಯೇಂದ್ರ ದಾಸ್ ಅವರು ಮಾತನಾಡಿ, ರಾಮ ಮಂದಿರಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ರಾಮಲಲ್ಲಾ ಅವರನ್ನು ಭೇಟಿ ಮಾಡಲು ಬಯಸಿದರೆ, ಅವರಿಗೆ ಸ್ವಾಗತ. ಆದರೆ, ಸ್ಥಳೀಯ ಕಾಂಗ್ರೆಸ್ಸಿಗರು ಅವರ ಭೇಟಿಯ ದಿನಾಂಕವನ್ನು ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜೀವತಳೆಯಲಿದೆ ಮೂಡಬಿದ್ರೆಯ ನಾಗಲಿಂಗ ಪುಷ್ಪದ ಗಿಡ!

ಸದ್ಯ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಜನವರಿ 21ರಿಂದ 23ರ ನಡುವೆ ನಡೆಯಲಿರುವ ರಾಮಮಂದಿರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಭಾರಿ ಪ್ರಮಾಣದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

ಇತ್ತೀಚೆಗೆ, ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ಸಮರ್ಪಣಾ ಸಮಾರಂಭದ ವಿಸ್ತೃತ ಯೋಜನೆಯನ್ನು ರೂಪಿಸಲು ಸಭೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನಡೆಯುವಂತೆ ನೋಡಿಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಡಿಕೊಳ್ಳುತ್ತಿದ್ದಾರೆ. ಭಕ್ತರು ದೇವಾಲಯವನ್ನು ತಲುಪಲು ಸಹಾಯ ಮಾಡಲು ಮೂರು ರಾಮಪಥಗಳ ಕೆಲಸ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ