ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಎರಡು ಮನೆಗಳು ಕುಸಿತ, ಓರ್ವ ಸಾವು, 8 ಜನರು ಸಿಲುಕಿರುವ ಶಂಕೆ

|

Updated on: Aug 06, 2024 | 8:56 AM

ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಎರಡು ಮನೆಗಳು ಭಾರಿ ಮಳೆಯಿಂದಾಗಿ ಕುಸಿದುಬಿದ್ದಿವೆ. ಅವಶೇಷಗಳಡಿ ಎಂಟು ಮಂದಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಓರ್ವ ಸಾವನ್ನಪ್ಪಿದ್ದಾರೆ.

ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಎರಡು ಮನೆಗಳು ಕುಸಿತ, ಓರ್ವ ಸಾವು, 8 ಜನರು ಸಿಲುಕಿರುವ ಶಂಕೆ
ಮನೆ ಕುಸಿತ
Follow us on

ಉತ್ತರ ಪ್ರದೇಶ(Uttar Pradesh)ದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ(Rain)ಯಾಗುತ್ತಿದೆ. ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನ ಬಳಿ ಇರುವ ಎರಡು ಮನೆಗಳು ಕುಸಿದು ಬಿದ್ದಿದ್ದು, ಓರ್ವ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಂಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಗರ ಪೊಲೀಸ್ ಕಮಿಷನರ್ ಮೋಹಿತ್ ಅಗರವಾಲ್ ಪ್ರಕಾರ, ಎಂಟು ಜನರು ಆರಂಭದಲ್ಲಿ ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು.

ನಗರದಲ್ಲಿ ಭಾರೀ ಮಳೆಯಿಂದಾಗಿ ಮನೆಗಳು ಕುಸಿದಿವೆ ಎಂದು ಉನ್ನತ ಪೊಲೀಸ್ ಅಧಿಕಾರಿ ಕೌಶಲ್ ಶರ್ಮಾ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ವೈದ್ಯರು ಮತ್ತು ಶ್ವಾನ ದಳದ ತಂಡವು ಸ್ಥಳದಲ್ಲಿವೆ.ಈ ಮನೆಗಳು ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿವೆ.

70 ವರ್ಷದ ಹಳೆಯ ಮನೆಗಳು ಏಕಾಏಕಿ ಕುಸಿದು ಬಿದ್ದಿವೆ, ಪ್ರಸಿದ್ಧ ಜವಾಹಿರ್ ಸಾವೋ ಕಚೋರಿ ವಾಲಾ ಮೇಲಿರುವ ರಾಜೇಶ್ ಗುಪ್ತಾ ಮತ್ತು ಮನೀಶ್ ಗುಪ್ತಾ ಅವರ ಮನೆಗಳ ಅವಶೇಷಗಳ ಅಡಿಯಲ್ಲಿ ಎಂಟು ಜನರು ಸಮಾಧಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ವಯನಾಡು ಮಹಾದುರಂತ: ಒಡತಿ ಕಣ್ಣಿಗೆ ಬೀಳುತ್ತಿದ್ದಂತೆ ಓಡಿ ಬಂದು ಬಿಗಿದಪ್ಪಿದ ಸಾಕು ನಾಯಿ

ಸ್ಥಳೀಯ ಪೊಲೀಸರು ಮತ್ತು ಎನ್‌ಡಿಆರ್‌ಎಫ್ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಗಂಭೀರವಾಗಿ ಗಾಯಗೊಂಡಿರುವ ಕಾನ್‌ಸ್ಟೆಬಲ್ ಸೇರಿದಂತೆ ಹಲವರನ್ನು ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅವರನ್ನು ಕಬೀರಚೌರಾದ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ವಿಶ್ವನಾಥ ದೇಗುಲದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇವಸ್ಥಾನಕ್ಕೆ ಹೋಗುವ ಗೇಟ್ ಸಂಖ್ಯೆ 4 ಅನ್ನು ಮುಚ್ಚಲಾಗಿದ್ದು, ಗೇಟ್ ಸಂಖ್ಯೆ 1 ಮತ್ತು 2 ರಿಂದ ಪ್ರವೇಶವನ್ನು ಅನುಮತಿಸಲಾಗಿದೆ. ಹಾಗೆಯೇ ವಯನಾಡಿನಲ್ಲಿ ಕೂಡ ಭಾರಿ ಮಳೆಯಾದ ಪರಿಣಾಮ ಗುಡ್ಡಗಳು ಕುಸಿದು 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:56 am, Tue, 6 August 24