ಶಹಜಹಾನ್‌ಪುರ, ಆ.3: ಆರ್‌ಎಸ್‌ಎಸ್ (Rashtriya Swayamsevak Sangh) ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಟೌನ್ ಹಾಲ್ ಪ್ರದೇಶದಲ್ಲಿ ನಡೆದಿದೆ. ಆರ್‌ಎಸ್‌ಎಸ್ (RSS) ಕಚೇರಿಯ ಗೋಡೆಯ ಮೇಲೆ ಮೂತ್ರ ವಿಸರ್ಜಿನೆ ಮಾಡಿ, ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಥಳಿಸಿದ್ದಾರೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಈ ನಡುವೆ ಪೊಲೀಸರು ಕೂಡ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಕಚೇರಿಯ ಮೆಟ್ಟಿಲ ಬಳಿ ಕುಳಿತಿದ್ದ ಸಮಯದಲ್ಲಿ ವ್ಯಕ್ತಿಯೊಬ್ಬ ಕಾರಣವಿಲ್ಲದೆ ಬಂದು ದಾಳಿ ಮಾಡಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಮಯದಲ್ಲಿ ಒಂದಿಷ್ಟು ಜನ ಗುಂಪಾಗಿ ಬಂದು ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ಮಾಡಿ ಅಲ್ಲಿರುವ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆದರೆ ಅವರು ಕೂಡ ದಾಳಿ ಮಾಡಿ ಪರವಾಗಿ ನಿಂತಿದ್ದು, ಆರ್‌ಎಸ್‌ಎಸ್ ಕಾರ್ಯಕರ್ತರ ಜತೆಗೆ ಅನುಚಿತವಾಗಿ ವರ್ತಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯಿಂದ ಸರ್ಕಾರಿ ಜಮೀನು ಆರ್ಎಸ್ಎಸ್ಗೆ ಹಂಚಿಕೆ: ವಿವಾದಿತ ಭೂಮಿ ಪಟ್ಟಿ ಮಾಡಲು ಮುಂದಾದ ಕಾಂಗ್ರೆಸ್ ಸರ್ಕಾರ
ಈ ಬಗ್ಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಸದಸ್ಯರು, ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಹತೋಟಿಗೆ ತಂದ ನಂತರವು ಅವರು ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಆದರೆ ಪೊಲೀಸರು ನಮ್ಮ ಕಾರ್ಯಕರ್ತ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಪರಾರಿಯಾಗಲು ಪೊಲೀಸರೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಸದರ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ ಉನ್ನತ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:05 pm, Thu, 3 August 23