ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಅಶ್ವಿನಿ ವೈಷ್ಣವ್

ಸಬರಮತಿ ಎಕ್ಸ್‌ಪ್ರೆಸ್ ರೈಲು ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಹಳಿ ತಪ್ಪಿದೆ. ರೈಲಿನ ಮೇಲೆ ಬಂಡೆ ಕಲ್ಲು ಬಿದ್ದು ರೈಲಿನ ಇಂಜಿನ್​​​​​​​​ ಡ್ಯಾಮೆಜ್​​ ಆಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಅಷ್ಟಕ್ಕೂ ಗೋವಿಂದಪುರಿ ನಿಲ್ದಾಣದ ಬಳಿ ನಡೆದ ಘಟನೆ ಏನು? ಬಂಡೆಗಳು ಬಿದ್ದ ಬಗ್ಗೆ ಪ್ರಯಾಣಿಕರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಅಶ್ವಿನಿ ವೈಷ್ಣವ್
ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು
Follow us
|

Updated on: Aug 17, 2024 | 10:13 AM

ಕಾನ್ಪುರ, ಆ.17: ಇಂದು (ಆ.17) ಮುಂಜಾನೆ ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಆದರೆ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಬಗ್ಗೆ ನಾರ್ತ್ ಸೆಂಟ್ರಲ್ ರೈಲ್ವೇ ಹಿರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಮುಂಜಾನೆ 2.30 ಕ್ಕೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ವಾರಣಾಸಿಯಿಂದ ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ವೇಳೆ ರೈಲು ಕಾನ್ಪುರ ಮತ್ತು ಭೀಮಸೇನ್ ರೈಲು ನಿಲ್ದಾಣದ ರೈಲ್ವೆ ದಾರಿಯಲ್ಲಿ ಹಳಿ ತಪ್ಪಿದೆ. ಈಗಾಗಲೇ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕರು ಪರಿಹಾರ ಕಾರ್ಯಚರಣೆ ನಡೆಸುತ್ತಿದ್ದಾರೆ. ಇನ್ನು ಘಟನೆಯ ಬಗ್ಗೆ ವಿವರಿಸಿದ ಲೊಕೊ ಪೈಲಟ್ ಬಂಡೆಗಳು ರೈಲಿನ ಮೇಲೆ ಬಿದ್ದ ಕಾರಣ ಇಂಜಿನ್​​​ಗಳು ಡ್ಯಾಮೆಜ್​​ ಆಗಿದೆ. ಪ್ರಯಾಣಿಕರು ಮಲಗಿದ್ದಾಗ ದೊಡ್ಡ ಶಬ್ದವೊಂದು ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಈಗಾಗಲೇ ಪ್ರಯಾಣಿಕರ ಸಹಾಯಕ್ಕಾಗಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಹೇಳಿದೆ. ಘಟನೆಯ ಬಗ್ಗೆ ಪ್ರಯಾಣಿಕರೊಬ್ಬರು ಪಿಟಿಐಗೆ ಹೇಳಿರುವ ಪ್ರಕಾರ, ರೈಲು ಕಾನ್ಪುರ ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ನಂತರ, ನಮಗೆ ದೊಡ್ಡ ಶಬ್ದ ಕೇಳಿಸಿತು. ಕೋಚ್ ಅಲುಗಾಡಲು ಪ್ರಾರಂಭಿಸಿತು. ನಾನು ತುಂಬಾ ಭಯಪಟ್ಟೆ ಆದರೆ ರೈಲು ನಿಂತಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶಕ್ಕೆ ವಿದ್ಯುತ್ ರಫ್ತು: ಮಾರ್ಗಸೂಚಿ ಬಿಗಿಗೊಳಿಸಿದ ಭಾರತ

ಈಗಾಗಲೇ ಪ್ರಯಾಣಿಕರಿಗೆ ಪರ್ಯಾಯವಾಗಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರನ್ನು ಅಲ್ಲಿಂದ ಸಾಗಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಸಬರಮತಿ ಎಕ್ಸ್‌ಪ್ರೆಸ್‌ನ ರೈಲಿನ ಮೇಲೆ ಬಂಡೆ ಕಲ್ಲುಗಳು ಬಿದ್ದ ಕಾರಣ ಇಂಜಿನ್​​​​ಗೆ ಹಾನಿಯಾಗಿದ್ದು, ಕೆಲವೊಂದು ಡ್ಯಾಮೆಜ್​​​ಗಳು ಆಗಿವೆ. ಈಗಾಗಲೇ ಪ್ರಯಾಣಿಕರ ರಕ್ಷಣೆ ಹಾಗೂ ಅವರಿಗೆ ಬೇಕಾದ ಎಲ್ಲ ರೀತಿ ಸಹಾಯಗಳನ್ನು ಮಾಡಲಾಗಿದೆ. ಐಬಿ ಮತ್ತು ಯುಪಿ ಪೊಲೀಸರು ಕೂಡ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಎಕ್ಸ್​​ ಮೂಲಕ ಟ್ವೀಟ್​​​ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ