ಉತ್ತರ ಪ್ರದೇಶ: ಟಿವಿ ನೋಡಬೇಡ ಎಂದು ತಾಯಿ ಗದರಿದ್ದಕ್ಕೆ ಮಗಳು ಆತ್ಮಹತ್ಯೆ

ಹೆಚ್ಚು ಟಿವಿ ನೋಡಬೇಡ ಎಂದು ತಾಯಿ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಟಿವಿ ನೋಡಬೇಡ ಎಂದು ತಾಯಿ ಗದರಿದ್ದೇ ಆಕೆ ಈ ಹೆಜ್ಜೆ ಇಡಲು ಕಾರಣ ಎನ್ನಲಾಗಿದೆ. 18 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾತ್ರಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ,  ದುಪಟ್ಟಾ ತೆಗೆದುಕೊಂಡು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯನ್ನು ಮನಿಷಾ ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ: ಟಿವಿ ನೋಡಬೇಡ ಎಂದು ತಾಯಿ ಗದರಿದ್ದಕ್ಕೆ ಮಗಳು ಆತ್ಮಹತ್ಯೆ
ಸಾವುImage Credit source: Verywell mind
Follow us
ನಯನಾ ರಾಜೀವ್
|

Updated on: Oct 17, 2023 | 9:08 AM

ಹೆಚ್ಚು ಟಿವಿ ನೋಡಬೇಡ ಎಂದು ತಾಯಿ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಟಿವಿ ನೋಡಬೇಡ ಎಂದು ತಾಯಿ ಗದರಿದ್ದೇ ಆಕೆ ಈ ಹೆಜ್ಜೆ ಇಡಲು ಕಾರಣ ಎನ್ನಲಾಗಿದೆ. 18 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾತ್ರಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ,  ದುಪಟ್ಟಾ ತೆಗೆದುಕೊಂಡು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯನ್ನು ಮನಿಷಾ ಎಂದು ಗುರುತಿಸಲಾಗಿದೆ.

ಬೆಳಗ್ಗೆ ಕೋಣೆಯಿಂದ ಹೊರಗೆ ಬಾರದೆ ಇದ್ದಾಗ ಮನೆಯವರಿಗೆ ಅನುಮಾನ ಬಂದು ಬಾಗಿಲು ಒಡೆದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವವಾದರೂ ಬಾಗಿಲು ತೆರೆದಿರಲಿಲ್ಲ ಎಂದು ಉಭಾನ್ ಪೊಲೀಸ್ ಠಾಣೆ ಎಸ್‌ಎಚ್‌ಒ ಎಂಕೆ ಶ್ರೀವಾಸ್ತವ ತಿಳಿಸಿದ್ದಾರೆ.

ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬಾಲಕಿ ನೇಣು ಬಿಗಿದುಕೊಂಡಿದ್ದ ಕೊಠಡಿಯಿಂದ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ ತನ್ನ ತಾಯಿಯಿಂದ ನಿಂದಿಸಿದ್ದರಿಂದ ತೀವ್ರ ಹೆಜ್ಜೆ ಇಡುತ್ತಿರುವುದಾಗಿ ಬರೆದಿದ್ದಾಳೆ. ತಡರಾತ್ರಿ ಮನೀಶಾ ಟಿವಿ ನೋಡುತ್ತಿದ್ದಳು, ಇದರಿಂದ ಕೋಪಗೊಂಡ ಆಕೆಯ ತಾಯಿ ಆಕೆಯನ್ನು ಗದರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಮುಂಬೈನಲ್ಲಿ ವರದಿಯಾದ ಮತ್ತೊಂದು ಪ್ರಕರಣದಲ್ಲಿ 15 ವರ್ಷದ ಬಾಲಕಿ ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಾಧ್ಯಮ ವರದಿಗಳ ಪ್ರಕಾರ, ಆಕೆಯ ಪೋಷಕರು ಆಕೆ ಓದನ್ನು ನಿರ್ಲಕ್ಷಿಸಿದ್ದಕ್ಕಾಗಿ ಗದರಿಸಿದ್ದರು. ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.

ಮತ್ತಷ್ಟು ಓದಿ: ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರೈತ ಮಹಿಳೆ ಆತ್ಮಹತ್ಯೆ

ಮತ್ತೊಂದು ಪ್ರಕರಣ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ, 10 ವರ್ಷದ ಬಾಲಕಿ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣದಲ್ಲೂ ಆಕೆಯ ತಾಯಿಯಿಂದ ಓದುವ ವಿಚಾರದಲ್ಲಿ ಬೈದಿದ್ದೇ ಕಾರಣವಾಗಿತ್ತು.

ಆತ್ಮಹತ್ಯೆ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿರುವ ಕಾರಣ, ವಿದ್ಯಾರ್ಥಿಗಳಲ್ಲಿ ಸ್ವಯಂ ಹಾನಿಯನ್ನು ತಡೆಗಟ್ಟಲು ಸರ್ಕಾರವು ಕರಡು ಮಾರ್ಗಸೂಚಿಯನ್ನು ತಂದಿದೆ. ಇದನ್ನು UMMEED ಎಂದು ಹೆಸರಿಸಲಾಗಿದೆ.

ಈ ಕಾರ್ಯಕ್ರಮವು ಮಕ್ಕಳ ಮಾನಸಿಕ ಆರೋಗ್ಯದ ಬಗ್ಗೆ ಶಾಲೆಗಳನ್ನು ಸಂವೇದನಾಶೀಲಗೊಳಿಸುವ ಗುರಿಯನ್ನು ಹೊಂದಿದೆ. ವಿದ್ಯಾರ್ಥಿಗಳ ದುರ್ಬಲವಾದ ಮಾನಸಿಕ ಆರೋಗ್ಯವನ್ನು ನಿಭಾಯಿಸಲು ಶಾಲೆಗಳು, ಅವರ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಸಂವೇದನಾಶೀಲಗೊಳಿಸುವ ಮತ್ತು ತರಬೇತಿ ನೀಡುವ ಅವಶ್ಯಕತೆಯಿದೆ ಎಂದು ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು