Fight for Rasgulla: ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ರಸಗುಲ್ಲಕ್ಕಾಗಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ
ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ವಾದಗಳು ನಡೆಯುವುದು ಸಾಮಾನ್ಯ ಆದರೆ, ಕೇವಲ ಜಗಳ ನಡೆದಿಲ್ಲ ಬದಲಾಗಿ ರಸಗುಲ್ಲಕ್ಕಾಗಿ ಹೊಡೆದಾಟವೇ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶಂಸಾಬಾದ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಶರ್ಮಾ ತಿಳಿಸಿದ್ದಾರೆ.
ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮವಿತ್ತು, ಸಮಾರಂಭದಲ್ಲಿ, ರಸಗುಲ್ಲಾಗಳ ಕೊರತೆಯ ಬಗ್ಗೆ ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದರು.
ಮತ್ತಷ್ಟು ಓದಿ: ಒಂದು ರಸಗುಲ್ಲಕ್ಕಾಗಿ ಮದುವೆ ಮನೆಯಲ್ಲಿ ಕೊಲೆಯೇ ನಡೆದುಹೋಯ್ತು!
ಇದು ಜಗಳಕ್ಕೆ ಕಾರಣವಾಯಿತು ಮತ್ತು ಭಗವಾನ್ ದೇವಿ, ಯೋಗೇಶ್, ಮನೋಜ್, ಕೈಲಾಶ್, ಧರ್ಮೇಂದ್ರ ಮತ್ತು ಪವನ್ ಗಾಯಗೊಂಡಿದ್ದಾರೆ ಎಂದು ಎಸ್‌ಎಚ್‌ಒ ಶರ್ಮಾ ಹೇಳಿದ್ದಾರೆ.
ಹಾಗೆಯೇ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎತ್ಮಾದ್‌ಪುರದಲ್ಲಿ ನಡೆದ ಮದುವೆಯೊಂದರಲ್ಲಿ ಸಿಹಿತಿಂಡಿಗಳ ಕೊರತೆ ಬಗ್ಗೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:05 am, Tue, 21 November 23