AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ ಗಣಿ ದುರಂತ: ಮೃತರ ಸಂಖ್ಯೆ 3ಕ್ಕೆ ಏರಿಕೆ; ಗಣಿಯೊಳಗೆ ಸಿಲುಕಿರುವವರು ಇನ್ನೂ ಹಲವರು

Uttar Pradesh stone mine collapse incident: ಉತ್ತರಪ್ರದೇಶದ ಗಣಿ ಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿದೆ. ನಿನ್ನೆ ಶನಿವಾರ ಒಬ್ಬರ ಮೃತದೇಹ ಸಿಕ್ಕಿತ್ತು. ಭಾನುವಾರ ಇನ್ನಿಬ್ಬರ ಶವ ಪತ್ತೆಯಾಗಿದೆ. ಕಲ್ಲಿನ ಕ್ವಾರಿಯ ಅವಶೇಷಗಳಡಿ ಇನ್ನೂ 9 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ. ಶನಿವಾರ ಘಟನೆ ಸಂಭವಿಸಿದಾಗ ಅಂದಾಜು 12 ಮಂದಿ ಇದ್ದರೆನ್ನಲಾಗಿದೆ.

ಉತ್ತರಪ್ರದೇಶ ಗಣಿ ದುರಂತ: ಮೃತರ ಸಂಖ್ಯೆ 3ಕ್ಕೆ ಏರಿಕೆ; ಗಣಿಯೊಳಗೆ ಸಿಲುಕಿರುವವರು ಇನ್ನೂ ಹಲವರು
ಕಲ್ಲಿನ ಕ್ವಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2025 | 7:58 PM

Share

ಲಕ್ನೋ, ನವೆಂಬರ್ 16: ಉತ್ತರಪ್ರದೇಶದ ಸೋನ್​ಭದ್ರ ಜಿಲ್ಲೆಯ ಬಿಲ್ಲಿ ಮರಕುಂಡಿ (Billi Markundi) ಎಂಬಲ್ಲಿನ ಕಲ್ಲಿನ ಕ್ವಾರಿಯೊಂದು ಕುಸಿದ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ನಿನ್ನೆ ಶನಿವಾರ (ನ. 15) ಸಂಭವಿಸಿದ ಈ ದುರಂತದಲ್ಲಿ (mining collapse) ನಿನ್ನೆಯೇ ಒಬ್ಬರು ಸಾವನ್ನಪ್ಪಿರುವುದು ಖಚಿತಪಟ್ಟಿತ್ತು. ಇವತ್ತು ನಡೆದ ಶೋಧದಲ್ಲಿ ಇನ್ನೂ ಇಬ್ಬರ ಶವ ಸಿಕ್ಕಿದೆ.

ಈ ಕಲ್ಲಿನ ಕ್ವಾರಿಯಲ್ಲಿ ಕಲ್ಲಿನ ಅವಶೇಷಗಳಡಿಯಲ್ಲಿ ಒಂಬತ್ತು ಮಂದಿ ಈಗಲೂ ಸಿಲುಕಿದ್ದಾರೆ ಎನ್ನಲಾಗಿದೆ. ಆದರೆ, ದುರಂತ ಸಂಭವಿಸಿದಾಗ ಎಷ್ಟು ಮಂದಿ ಕೆಲಸಗಾರರು ಅಲ್ಲಿ ಇದ್ದರು ಎಂಬುದು ಗೊತ್ತಾಗಿಲ್ಲ. 12 ಮಂದಿ ಇದ್ದಿರಬಹುದು ಎಂದು ಹೇಳಲಾಗುತ್ತಿದೆ. ಉತ್ತರಪ್ರದೇಶ ಸಚಿವ ಸಂಜೀವ್ ಗೋಂಡ್ ಅವರು ನೀಡಿರುವ ಮಾಹಿತಿ ಪ್ರಕಾರ ಸುಮಾರು 12 ಮಂದಿ ಕೆಲಸಗಾರರು ದುರಂತ ಸ್ಥಳದಲ್ಲಿ ಇದ್ದರು.

ಇದನ್ನೂ ಓದಿ: ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು; ಹಲವು ಕಾರ್ಮಿಕರು ಕಣ್ಮರೆ

ಅವಶೇಷಗಳಡಿ ಸಿಲುಕಿರುವ ಇತರ ಕಾರ್ಮಿಕರನ್ನು ರಕ್ಷಿಸಲು ಎನ್​ಡಿಆರ್​ಎಫ್ (ರಾಷ್ಟ್ರೀಯ ವಿಪತ್ತು ಸ್ಪಂದನೆ ಪಡೆ) ಮತ್ತು ಎಸ್​ಡಿಆರ್​ಎಫ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಗುಡ್ಡದ ಮೇಲಿಂದ ಬಿದ್ದ ಕಲ್ಲುಗಳು ದೊಡ್ಡ ಗಾತ್ರದ್ದಾದ್ದರಿಂದ ಅವುಗಳನ್ನು ತೆರವುಗೊಳಿಸುವ ಕೆಲಸ ಕಷ್ಟವಾಗಿದೆ. ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಲಕರಣೆಗಳು ಮತ್ತು ಉಪಕರಣಗಳು ಲಭ್ಯ ಇದ್ದು, ತ್ವರಿತವಾಗಿ ರಕ್ಷಣಾ ಕಾರ್ಯ ನಡೆಸಲು ಯತ್ನಿಸಲಾಗುತ್ತಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಬದ್ರಿನಾಥ್ ಸಿಂಗ್ ಅವರು ಘಟನೆಗೆ ಕಾರಣವೇನೆಂದು ಪತ್ತೆ ಮಾಡಲು ತನಿಖೆಗೆ ಆದೇಶಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ ವಾಗೀಶ್ ಸಿಂಗ್ ಅವರಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ. ಅವರು ಸಲ್ಲಿಸುವ ವರದಿಯಲ್ಲಿನ ಅಂಶಗಳನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ