AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬೈಕ್​ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 3 ಕಿ.ಮೀ ಎಳೆದೊಯ್ದ ಕಾರು

ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಾಗೆಯೇ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ಚಾಲಕನನ್ನು 3 ಕಿ.ಮೀ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರ ಪೈಕಿ ಇಬ್ಬರು ಬಾಕ್​ನಿಂದ ಹಾರಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ: ಬೈಕ್​ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 3 ಕಿ.ಮೀ ಎಳೆದೊಯ್ದ ಕಾರು
ಕಾರುImage Credit source: NDTV
ನಯನಾ ರಾಜೀವ್
|

Updated on: Feb 04, 2024 | 9:14 AM

Share

ಎಸ್​ಯುವಿ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 3 ಕಿ.ಮೀ ಎಳೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾರೊಂದು ಪತ್ನಿ, ಪತ್ನಿ ಹಾಗೂ ಮಗುವನ್ನು ಕರೆದೊಯ್ಯುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದ್ದಷ್ಟೇ ಅಲ್ಲದೆ ವ್ಯಕ್ತಿಯನ್ನು 3ಕಿ.ಮೀನಷ್ಟು ದೂರ ಎಳೆದೊಯ್ದಿದೆ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಪತ್ನಿ ಹಾಗೂ ಮಗುವಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀರೇಂದ್ರ ಕುಮಾರ್ ಅವರು ಪತ್ನಿ ಮತ್ತು ಐದು ವರ್ಷದ ಮಗನೊಂದಿಗೆ ರಾಯ್ ಬರೇಲಿಯಿಂದ ದಾಲ್ಮೌ ಪಟ್ಟಣಕ್ಕೆ ಮನೆಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪತ್ನಿ ಮತ್ತು ಮಗ ಬೈಕ್‌ನಿಂದ ಹಾರಿ ಬಿದ್ದಿದ್ದಾರೆ, ಆದರೆ ವ್ಯಕ್ತಿ ಬೈಕ್​ನಲ್ಲೇ ಸಿಲುಕಿಕೊಂಡಿದ್ದರು, ಅಪಘಾತದ ಪರಿಣಾಮ ಎಸ್‌ಯುವಿ ಮುಂಭಾಗದ ಭಾಗಗಳು ನುಜ್ಜುಗುಜ್ಜಾಗಿವೆ, ವೀರೇಂದ್ರ ಬಲ ಫೆಂಡರ್ ಮತ್ತು ಚಕ್ರದ ನಡುವೆ ಸಿಲುಕಿಕೊಂಡಿದ್ದರು.

ಅಪಘಾತದ ನಂತರ ಚಾಲಕ ನಿಲ್ಲಿಸದೆ ವೀರೇಂದ್ರನನ್ನು ಕಾರಿನೊಂದಿಗೆ ಸುಮಾರು 3 ಕಿ.ಮೀ ಎಳೆದೊಯ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊನೆಗೆ ಆತ ನಿಲ್ಲಿಸಿದಾಗ ದಾರಿಹೋಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಓದಿ: ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ

ವೀರೇಂದ್ರ, ಅವರ ಪತ್ನಿ ರೂಪಾಲ್ ಮತ್ತು ಪುತ್ರ ಅನುರಾಗ್ ಅವರನ್ನು ರಾಯ್ ಬರೇಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವೀರೇಂದ್ರ ಮೃತಪಟ್ಟಿದ್ದು, ಅವರ ಪತ್ನಿ ಮತ್ತು ಮಗು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಲಾಲ್‌ಗಂಜ್ ಠಾಣಾಧಿಕಾರಿ ಶಿವಶಂಕರ್ ಸಿಂಗ್ ಮಾತನಾಡಿ, ಚಾಲಕನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಮತ್ತೊಂದು ಘಟನೆ

ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು

ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀ ಎಳೆದೊಯ್ದಿರುವ ಘಟನೆ ಭುವನೇಶ್ವರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 31ರ ರಾತ್ರಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು ಒಂದು ಕಿಲೋಮೀಟರ್ ದೂರ ಬೈಕ್ ಅನ್ನು ಎಳೆದುಕೊಂಡು ಹೋಗುತ್ತಿದ್ದಾಗ ಕಾರಿನ ಕೆಳಗಡೆ ಬೆಂಕಿ ಕಿಡಿಗಳು ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಆ ಘಟನೆ ನೋಡಿದರೆ ಬೈಕ್​ ಸವಾರ ಬದುಕುಳಿದಂತೆ ಕಾಣುತ್ತಿಲ್ಲ, ಬೈಕ್ ಸವಾರನ ಮೇಲೆ ಹಳೆಯ ವೈಷಮ್ಯ ಏನಾದರೂ ಇತ್ತೇ, ಅಥವಾ ಕಾರು ಚಾಲಕ ಮದ್ಯದ ನಶೆಯಲ್ಲಿದ್ದನೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಾರು ಬೈಕ್​ಗೆ ಡಿಕ್ಕಿಯಾದಾಗ ನಿಲ್ಲಿಸುವುದು ಬಿಟ್ಟು ಕಿಲೋಮೀಟರ್​ಗಳಷ್ಟು ದೂರ ಏಕೆ ಎಳೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಕಳೆದ ವರ್ಷ ನ್ಯೂ ಇಯರ್ ಸಂದರ್ಭದಲ್ಲಿ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿಯೊನ್ನು ಕಿಲೋಮೀಟರ್​ಗಳವರೆಗೆ ಎಳೆದೊಯ್ದ ಘಟನೆಯೂ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್​ಡಿಕೆ ಮಹತ್ವದ ಘೋಷಣೆ
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್​ಡಿಕೆ ಮಹತ್ವದ ಘೋಷಣೆ