AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPTET 2021 ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಶ್ನೆ ಸೋರಿಕೆ; ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಹಿತಿಯ ನಂತರ UPTET 2021 ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ಒಂದು ತಿಂಗಳೊಳಗೆ ಮತ್ತೊಮ್ಮೆ ಪರೀಕ್ಷೆಯನ್ನು ನಡೆಸುತ್ತದೆ. ಉತ್ತರ ಪ್ರದೇಶ ಎಸ್‌ಟಿಎಫ್‌ನಿಂದ (STF) ತನಿಖೆ ನಡೆಸಲಾಗುವುದು ಎಂದು ಮೂಲ ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

UPTET 2021 ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಶ್ನೆ ಸೋರಿಕೆ;  ಪರೀಕ್ಷೆ ರದ್ದು
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 28, 2021 | 1:05 PM

Share

ಲಖನೌ: ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ(Uttar Pradesh Teacher Eligibility Test-UPTET 2021) ಅನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯನ್ನು ನವೆಂಬರ್ 28 ರಂದು ನಡೆಸಲು ನಿರ್ಧರಿಸಲಾಗಿತ್ತು. ಆದಾಗ್ಯೂ, ಪರೀಕ್ಷೆಯನ್ನು ಉತ್ತರ ಪ್ರದೇಶ ಸರ್ಕಾರವು ಒಂದು ತಿಂಗಳೊಳಗೆ ಮತ್ತೊಮ್ಮೆ ನಡೆಸಲಿದೆ. “ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಹಿತಿಯ ನಂತರ UPTET 2021 ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ಒಂದು ತಿಂಗಳೊಳಗೆ ಮತ್ತೊಮ್ಮೆ ಪರೀಕ್ಷೆಯನ್ನು ನಡೆಸುತ್ತದೆ. ಉತ್ತರ ಪ್ರದೇಶ ಎಸ್‌ಟಿಎಫ್‌ನಿಂದ (STF) ತನಿಖೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸತೀಶ್ ದ್ವಿವೇದಿ ( Satish Dwivedi) ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. “ಪೇಪರ್ ಸೋರಿಕೆ ಪ್ರಕರಣದಲ್ಲಿ ಎಸ್‌ಟಿಎಫ್‌ನಿಂದ ಹತ್ತಾರು ಶಂಕಿತರನ್ನು ಬಂಧಿಸಲಾಗಿದೆ, ತನಿಖೆ ನಡೆಯುತ್ತಿದೆ. ಉತ್ತರ ಪ್ರದೇಶ ಸರ್ಕಾರವು ಒಂದು ತಿಂಗಳೊಳಗೆ ಮತ್ತೆ ಪರೀಕ್ಷೆಯನ್ನು ನಡೆಸುತ್ತದೆ ಎಂದು ಎಡಿಜಿ ಕಾನೂನು ಮತ್ತು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಎಎನ್‌ಐಗೆ ತಿಳಿಸಿದರು. UPTET 2021 ಅನ್ನು ಒಂದೇ ದಿನದಲ್ಲಿ ಎರಡು ಪೇಪರ್‌ಗಳಿಗೆ ನಡೆಸಬೇಕಿತ್ತು. ಪೇಪರ್ 1 ಅನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಪೇಪರ್ 2 ಅನ್ನು ಮಧ್ಯಾಹ್ನ 2:30 ರಿಂದ ಸಂಜೆ 5 ರವರೆಗೆ ನಡೆಸಬೇಕಿತ್ತು. 21 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಹೊಸ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಮತ್ತು ಪರೀಕ್ಷೆಯನ್ನು ಒಂದು ತಿಂಗಳೊಳಗೆ ನಡೆಸಲಾಗುವುದು. ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಯಲಿದೆ. UPTET ಪರೀಕ್ಷೆಗೆ ಅಭ್ಯರ್ಥಿಗಳಿಗೆ 2 ಗಂಟೆ 30 ನಿಮಿಷಗಳನ್ನು ನಿಗದಿಪಡಿಸಲಾಗಿದೆ.

UPTET 2021 ಉತ್ತರ ಕೀಯನ್ನು ಡಿಸೆಂಬರ್ 2, 2021 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕಿತ್ತು. ಆದರೆ, ಈಗ ಪರೀಕ್ಷೆಯನ್ನು ಮುಂದಿನ ಸೂಚನೆ ಬರುವವರೆಗೆ ಮುಂದೂಡಲಾಗಿದೆ ಹೊಸ ವೇಳಾಪಟ್ಟಿಯನ್ನು ಸಹ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: Tripura civic polls ತ್ರಿಪುರಾ ಸ್ಥಳೀಯ ಸಂಸ್ಥೆಗಳ ಚುನಾವಣೆ; ಬಿಗಿ ಭದ್ರತೆಯ ನಡುವೆ 222 ಸ್ಥಾನಗಳಿಗೆ ಮತ ಎಣಿಕೆ