AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಭೀಕರ ಘಟನೆ; ಶಾಲಾ ಮಕ್ಕಳ ಕಣ್ಣೆದುರೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ, ಆರೋಪಿಯೂ ಆತ್ಮಹತ್ಯೆ!

ಉತ್ತರ ಪ್ರದೇಶದ ಲಖಿಂಪುರ ಖೇರಿಯ ಶಾಲೆಯೊಂದರಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಶಾಲಾ ಮಕ್ಕಳ ಕಣ್ಣೆದುರೇ ಮಹಿಳಾ ಶಿಕ್ಷಕಿಯೊಬ್ಬರನ್ನು ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸರ ಬಂಧನದ ಭೀತಿಯಿಂದ ಆತ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಪ್ರದೇಶದಲ್ಲಿ ತೀವ್ರ ಆತಂಕ ಮತ್ತು ಭೀತಿಯ ವಾತಾವರಣ ನಿರ್ಮಾಣವಾಗಿದೆ. ಮೃತ ಶಿಕ್ಷಕಿಯನ್ನು ಸದರ್ ಕೊತ್ವಾಲಿ ವ್ಯಾಪ್ತಿಯ ಹಿದಾಯತ್ ನಗರ ನಿವಾಸಿ 26 ವರ್ಷದ ನಿಷಾತ್ ಫಾತಿಮಾ ಎಂದು ಗುರುತಿಸಲಾಗಿದೆ. ಆಕೆಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು 28 ವರ್ಷದ ಮೊಹಮ್ಮದ್ ಸೌದ್ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿ, ಶಾಲಾ ಆವರಣವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದೆ.

ಉತ್ತರ ಪ್ರದೇಶದಲ್ಲಿ ಭೀಕರ ಘಟನೆ; ಶಾಲಾ ಮಕ್ಕಳ ಕಣ್ಣೆದುರೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ, ಆರೋಪಿಯೂ ಆತ್ಮಹತ್ಯೆ!
Up Teacher Shot Dead Inside School
ಸುಷ್ಮಾ ಚಕ್ರೆ
|

Updated on: Sep 21, 2026 | 8:34 PM

Share

ನವದೆಹಲಿ, ಸೆಪ್ಟೆಂಬರ್ 21: ಉತ್ತರ ಪ್ರದೇಶದ ಲಖಿಂಪುರ ಖೇರಿಯ ಶಾಲೆಯೊಂದರಲ್ಲಿ ಇಂದು ಬೆಳಿಗ್ಗೆ ಅತ್ಯಂತ ಭೀಕರ ಘಟನೆಯೊಂದು ನಡೆದಿದ್ದು, 26 ವರ್ಷದ ಶಿಕ್ಷಕಿಯೊಬ್ಬರನ್ನು ಆಕೆಯ ಶಾಲೆಯ ಆವರಣದಲ್ಲಿ ಮಕ್ಕಳ ಕಣ್ಣೆದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಕೃತ್ಯ ಎಸಗಿದ 28 ವರ್ಷದ ಯುವಕ ನಂತರ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಶಿಕ್ಷಕಿಯನ್ನು ಸದರ್ ಕೊತ್ವಾಲಿ ವ್ಯಾಪ್ತಿಯ ಹಿದಾಯತ್ ನಗರ ನಿವಾಸಿ ನಿಷಾತ್ ಫಾತಿಮಾ (26) ಎಂದು ಗುರುತಿಸಲಾಗಿದೆ. ಆಕೆಗೆ ಗುಂಡಿಟ್ಟು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಆರೋಪಿಯನ್ನು ಮೊಹಮ್ಮದ್ ಸೌದ್ (28) ಎಂದು ಗುರುತಿಸಲಾಗಿದೆ.

ಈ ಘಟನೆಯು ನಗರದ ‘ಚಿಲ್ಡ್ರನ್ಸ್ ಅಕಾಡೆಮಿ ಶಾಲೆ’ಯಲ್ಲಿ ನಡೆದಿದೆ. ಈ ಘಟನೆಯ ಮಾಹಿತಿ ಸಿಕ್ಕ ತಕ್ಷಣವೇ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಶಾಲೆಯ ಇಡೀ ಆವರಣವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದೆ. ಖೇರಿ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ಖ್ಯಾತಿ ಗಾರ್ಗ್ ಅವರು ನೀಡಿರುವ ಮಾಹಿತಿಯ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಸೌದ್ ಶಾಲೆಯ ಒಳಗೆ ಪ್ರವೇಶಿಸಿ ಫಾತಿಮಾ ಅವರನ್ನು ಭೇಟಿಯಾಗಿದ್ದ. ಕಳೆದ ಒಂದು ವರ್ಷದಿಂದ ಫಾತಿಮಾ ಈ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಸೌದ್ ಮೆಟ್ಟಿಲುಗಳನ್ನು ಹತ್ತಿ ಕಾರಿಡಾರ್‌ನಲ್ಲಿ ಫಾತಿಮಾ ಅವರೊಂದಿಗೆ ಮಾತನಾಡಲು ಆರಂಭಿಸಿದ. ಇಬ್ಬರೂ ಮಾತನಾಡುತ್ತಿದ್ದಾಗ ಸೌದ್ ಇದ್ದಕ್ಕಿದ್ದಂತೆ ತನ್ನ ಚೀಲದಲ್ಲಿದ್ದ ಗನ್ ಹೊರತೆಗೆದು ಫಾತಿಮಾ ಅವರತ್ತ ಗುಂಡು ಹಾರಿಸಿದ್ದಾನೆ. ಆಕೆ ಕುಸಿದು ಬಿದ್ದ ತಕ್ಷಣ, ಆತ ತನಗೂ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಇದನ್ನೂ ಓದಿ: ಜಮೂಯಿಯಲ್ಲಿ ಗೆಳೆಯನನ್ನು ಥಳಿಸಿ, 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಿಹಾರ ಸರ್ಕಾರದ ವಿರುದ್ಧ ಜನರ ಆಕ್ರೋಶ

“ಆತ ಆಕೆಯನ್ನು ಭೇಟಿಯಾಗಲು ಬಂದು ಕಾರಿಡಾರ್‌ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ತನ್ನ ಚೀಲದಲ್ಲಿದ್ದ ಗನ್‌ನಿಂದ ಆಕೆಗೆ ಗುಂಡಿಕ್ಕಿ, ನಂತರ ತನಗೂ ಗುಂಡು ಹಾರಿಸಿಕೊಂಡಿದ್ದಾನೆ” ಎಂದು ಎಸ್‌ಎಸ್‌ಪಿ ಖ್ಯಾತಿ ಗಾರ್ಗ್ ಶಾಲೆಯ ಹೊರಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಫಾತಿಮಾ ಮತ್ತು ಸೌದ್ ದೀರ್ಘಕಾಲದಿಂದ ಪರಸ್ಪರ ಪರಿಚಿತರಾಗಿದ್ದರು ಮತ್ತು ನಿಯಮಿತವಾಗಿ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ನಡೆದ ತಕ್ಷಣವೇ ಕಾರಿಡಾರ್ ಭಾಗವನ್ನು ಬಂದ್ ಮಾಡಿದ ಪೊಲೀಸರು, ಭೀತಿಗೊಳಗಾಗಿದ್ದ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಹೊರಗೆ ಕರೆತಂದರು. ಸ್ಥಳಕ್ಕೆ ಆಗಮಿಸಿದ ವಿಧಿವಿಜ್ಞಾನ (ಫಾರೆನ್ಸಿಕ್) ತಜ್ಞರ ತಂಡವು ಪ್ರಮುಖ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಭೀಕರ ಕೃತ್ಯದ ಹಿಂದಿನ ನೈಜ ಉದ್ದೇಶವನ್ನು ಪತ್ತೆಹಚ್ಚಲು ಪೊಲೀಸರು ಶಾಲಾ ಆಡಳಿತ ಮಂಡಳಿ, ಸಹಶಿಕ್ಷಕರು, ಪ್ರತ್ಯಕ್ಷದರ್ಶಿಗಳು ಹಾಗೂ ಇಬ್ಬರ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ತನಿಖೆ ಮುಂದುವರಿದಂತೆ ಹೆಚ್ಚಿನ ವಿವರಗಳು ಹೊರಬರಲಿವೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ