ಉತ್ತರ ಪ್ರದೇಶ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ವ್ಯಾನ್ ಪಲ್ಟಿ, 2 ಸಾವು, 13 ಮಂದಿಗೆ ಗಾಯ
15 ಜನ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ವ್ಯಾನ್ ಪಲ್ಟಿಯಾಗಿದ್ದು, ಘಟನೆಯಲ್ಲಿ ಇಬ್ಬರು ಯುವತಿಯರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ನಡೆದಿದೆ.

ಪ್ರತಾಪಗಢ, ಆ.5 : ಬಾಬಾ ಘುಯಿಸರನಾಥ್ ಧಾಮ್‌ಗೆ 15 ಜನ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ವ್ಯಾನ್ ಪಲ್ಟಿಯಾಗಿ ಇಬ್ಬರು ಯುವತಿಯರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಭೌರಾ ಗ್ರಾಮದ ಬಳಿಯ ಲಾಲ್‌ಗಂಜ್-ಕಲಕಂಕರ್ ರಸ್ತೆಯಲ್ಲಿ ಸುಮಾರು 15 ಮಂದಿ ಭಕ್ತರು ಸಂಗ್ರಾಮ್‌ಗಢದಿಂದ ಬಾಬಾ ಘುಯಿಸರನಾಥ್ ಧಾಮ್‌ಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪಶ್ಚಿಮ) ರೋಹಿತ್ ಮಿಶ್ರಾ ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ಮೂವರು ಮಕ್ಕಳು ಮತ್ತು ಚಾಲಕ ಸೇರಿದಂತೆ 15 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೋಹಿತ್ ಮಿಶ್ರಾ ಹೇಳಿದ್ದಾರೆ. ಗಾಯಾಳುಗಳನ್ನು ಲಾಲ್‌ಗಂಜ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಈ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ, 18 ವರ್ಷ ವಯಸ್ಸಿನ ಸೀಮಾ ಮತ್ತು ಕೋಮಲ್ ಎಂಬ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು: ಟಾಪ್ 3 ನಗರಗಳಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ
ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಯುವತಿಯರ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ