Uttar Pradesh: ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಟ್ರ್ಯಾಕ್ಟರ್‌, 37 ಜನರ ರಕ್ಷಣೆ, 10 ಮಂದಿ ಸಾವು

ಟ್ರ್ಯಾಕ್ಟರ್‌ನ ಟ್ರಾಲಿ ಅಸಮತೋಲನಗೊಂಡು ಟ್ರಾಲಿ ಇಟೌಂಜಾದ ಹೊಂಡಕ್ಕೆ ಪಲ್ಟಿಯಾಗಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಜನರು ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಈ ಸಮಯದಲ್ಲಿ ಟ್ರ್ಯಾಕ್ಟರ್‌ನ ಟ್ರಾಲಿ ಅಸಮತೋಲನಗೊಂಡು ಹೊಂಡಕ್ಕೆ ಪಲ್ಟಿಯಾಗಿದೆ.

Uttar Pradesh: ಪಲ್ಟಿಯಾಗಿ ಹೊಂಡಕ್ಕೆ  ಬಿದ್ದ ಟ್ರ್ಯಾಕ್ಟರ್‌, 37 ಜನರ ರಕ್ಷಣೆ, 10 ಮಂದಿ ಸಾವು
Uttar Pradesh
TV9kannada Web Team

| Edited By: ಅಕ್ಷಯ್​ ಕುಮಾರ್​​

Sep 26, 2022 | 3:32 PM

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಟ್ರ್ಯಾಕ್ಟರ್‌ನ ಟ್ರಾಲಿ ಅಸಮತೋಲನಗೊಂಡು ಟ್ರಾಲಿ ಇಟೌಂಜಾದ ಹೊಂಡಕ್ಕೆ ಪಲ್ಟಿಯಾಗಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಜನರು ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಈ ಸಮಯದಲ್ಲಿ ಟ್ರ್ಯಾಕ್ಟರ್‌ನ ಟ್ರಾಲಿ ಬ್ಯಾಲೆನ್ಸ್ ಕಳೆದುಕೊಂಡು ಹೊಂಡಕ್ಕೆ ಪಲ್ಟಿಯಾಗಿದೆ. ಇದೀಗ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಧಾವಿಸಿದೆ. 37 ಜನರನ್ನು ರಕ್ಷಿಸಲಾಗಿದ್ದು, ಆರೋಗ್ಯವಾಗಿದ್ದಾರೆ. ಆಸ್ಪತ್ರೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಲಕ್ನೋ ಐಜಿ ಲಕ್ಷ್ಮಿ ಸಿಂಗ್ ಹೇಳಿದ್ದಾರೆ.

ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ನಿಯಂತ್ರಣ ತಪ್ಪಿ ಇಟೌಂಜಾದ ಹೊಂಡಕ್ಕೆ ಪಲ್ಟಿಯಾಗಿದೆ. 9 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಡನ್ ಸಮಾರಂಭಕ್ಕಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದ ವಾಹನದಲ್ಲಿ ಸುಮಾರು 45 ಜನರು ಪ್ರಯಾಣಿಸುತ್ತಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಲಕ್ನೋ) ಸೂರ್ಯ ಪಾಲ್ ಗಂಗ್ವಾರ್ ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಬ್ದ ಕೇಳಿ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ವಾಹನದಡಿ ಸಿಲುಕಿದ್ದ ಹಲವರನ್ನು ರಕ್ಷಿಸಿದ್ದಾರೆ.

ಸುಮಾರು 10 ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ, ಸಾವನ್ನಪ್ಪಿದವರ ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚಿನ ಮಾಹಿತಿ ನೀಡಲಾಗವುದು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada